Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ಎಸ್ತೇರಳು


1 : ಇದಾದನಂತರ ಅರಸ ಅಹಷ್ಟೇರೋಷನು, ಆಗಾನನ ವಂಶದವನೂ ಹೆಮ್ಮೆದಾತನ ಮಗನೂ ಆದ ಹಾಮಾನನನ್ನು ಉನ್ನತ ಪದವಿಗೇರಿಸಿ ಅವನನ್ನು ಹಿರಿಯ ಅಧಿಕಾರಿಯನ್ನಾಗಿ ಮಾಡಿ, ತನ್ನ ಎಲ್ಲಾ ಪದಾಧಿಕಾರಿಗಳಲ್ಲಿ ಅವನಿಗೆ ಪ್ರಥಮ ಸ್ಥಾನವನ್ನು ಅನುಗ್ರಹಿಸಿದನು.
2 : ಅರಸನ ಆಜ್ಞಾನುಸಾರ ಅರಮನೆಯಲ್ಲಿದ್ದ ಪರಿಚಾರಕರೆಲ್ಲರೂ ಅವನಿಗೆ ಅಡ್ಡಬಿದ್ದು ನಮಸ್ಕರಿಸುತ್ತಿದ್ದರು. ಆದರೆ ಮೊರ್ದೆಕೈ ಮಾತ್ರ ಹಾಗೆ ಮಾಡುತ್ತಿರಲಿಲ್ಲ.
3 : ಇದನ್ನು ಗಮನಿಸಿದ ಅರಮನೆಯ ದ್ವಾರಪಾಲಕರು, “ನೀನು ಅರಸನ ಆಜ್ಞೆಯನ್ನು ಮೀರುವುದೇಕೆ?” ಎಂದು ಮೊರ್ದೆಕೈಯನ್ನು ಕೇಳಿದರು.
4 : ಹೀಗೆ ಅವರು ಪ್ರತಿದಿನ ಅವನಿಗೆ ಹೇಳಿದರೂ ಅವನು ಅವರ ಮಾತಿಗೆ ಕಿವಿಗೊಡಲಿಲ್ಲ. ತಾನು ಯೆಹೂದ್ಯನೆಂದು ಹೇಳಿಕೊಳ್ಳುತ್ತಿದ್ದ ಮೊರ್ದೆಕೈಯನ ಹಟವು ಎಲ್ಲಿಯವರೆಗೆ ಸಾಗುವುದು ನೋಡಿಯೇ ಬಿಡಬೇಕೆಂದು ಅವನ ಈ ವರ್ತನೆಯ ಬಗ್ಗೆ ಹಾಮಾನನಿಗೆ ದೂರು ಹೇಳಿದರು.
5 : ಮೊರ್ದೆಕೈಯು ತನಗೆ, ಬಾಗಿ ನಮಸ್ಕಾರ ಮಾಡದೆ ಇದ್ದುದನ್ನು ಕಂಡು ಹಾಮಾನನು ಅವನ ಮೇಲೆ ಕಡುಕೋಪಗೊಂಡನು.
6 : ಅವನು ಮೊರ್ದೆಕೈಯೊಬ್ಬನ ಮೇಲೆ ಕೈಮಾಡುವುದು ಸಾಲದೆಂದೆಣಿಸಿ, ಇವನು ಯೆಹೂದ್ಯ ಜನಾಂಗದವನೆಂದು ಕೇಳಿದ ಮೇಲೆ, ಅಹಷ್ಟೇರೋಷನ ರಾಜ್ಯದಲ್ಲಿದ್ದ ಇವನ ಬಂಧುಬಳಗದವರನ್ನೆಲ್ಲಾ ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಲು ತೀರ್ಮಾನಿಸಿದನು.
7 : ಅರಸ ಅಹಷ್ಟೇರೋಷನ ಆಳ್ವಿಕೆಯ ಹನ್ನೆರಡನೆಯ ವರ್ಷದ ಮೊದಲನೆಯ ತಿಂಗಳಾದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭಮಾಸವೂ ಶುಭದಿನವೂ ಯಾವುದೆಂದು ತಿಳಿದುಕೊಳ್ಳಲು ಪೂರನ್ನು, ಅಂದರೆ ಚೀಟನ್ನು ಹಾಕಲು, ಚೀಟು ಹನ್ನೆರಡನೆ ತಿಂಗಳಾದ ಫಾಲ್ಗುಣ ಮಾಸದ ಹದಿಮೂರನೆಯ ದಿನಕ್ಕೆ ಬಿದ್ದಿತ್ತು.
8 : ಹಾಮಾನನು ಅರಸ ಅಹಷ್ಟೇ ರೋಷನಿಗೆ ಹೀಗೆಂದನು: “ನಿಮ್ಮ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ವಾಸಿಸುವ ಒಂದು ಜನಾಂಗವಿದೆ. ಅದು ಇತರ ಜನಾಂಗಗಳ ಮಧ್ಯೆ ಹರಡಿಕೊಂಡಿದ್ದರೂ ತನ್ನ ರೀತಿನೀತಿಗಳಲ್ಲಿ ಅವರಿಂದ ಪ್ರತ್ಯೇಕವಾಗಿಯೇ ಉಳಿಯುತ್ತದೆ. ಅರಸನ ನಿಯಮಗಳನ್ನಂತೂ ಈ ಜನಾಂಗದವರು ಅನುಸರಿಸುವುದೇ ಇಲ್ಲ. ಹೀಗಿರುವಲ್ಲಿ ಇಂಥವರನ್ನು ಅರಸರು ಸುಮ್ಮನೆ ಬಿಡುವುದು ಸರಿಯಲ್ಲ.
9 : ಅರಸರಿಗೆ ಸಮ್ಮತಿಯಾದರೆ ಅವರನ್ನು ನಿರ್ಮೂಲ ಮಾಡುವಂತೆ ಆಜ್ಞೆಯೊಂದನ್ನು ಹೊರಡಿಸಬೇಕು. ಹಾಗೆ ಮಾಡಿದ್ದಲ್ಲಿ, ನಾನು ರಾಜಭಂಡಾರಕ್ಕಾಗಿ 340,000 ಕಿಲೋಗ್ರಾಮ್ ಬೆಳ್ಳಿಯನ್ನು ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು,” ಎಂದು ಹೇಳಿದನು.
10 : ಇದನ್ನು ಕೇಳಿದ ಅರಸನು ತನ್ನ ಕೈಬೆರಳಿನಲ್ಲಿದ್ದ ಮುದ್ರೆಯುಂಗುರವನ್ನು ತೆಗೆದು, ಆಗಾನನ ವಂಶಸ್ಥನೂ ಹೆಮ್ಮೆದಾತನ ಮಗನೂ ಯೆಹೂದ್ಯರ ಕಡುವೈರಿಯೂ ಆದ ಹಾಮಾನನಿಗೆ ಕೊಟ್ಟು,
11 : ಆ ಬೆಳ್ಳಿ ನಿನ್ನಲ್ಲೇ ಇರಲಿ; ಆ ಜನರಿಗಾದರೋ ನಿನಗೆ ಉಚಿತವೆಂದು ಕಂಡುಬಂದ ರೀತಿಯಲ್ಲಿ ನೀನು ಮಾಡಬಹುದು,” ಎಂದು ಹೇಳಿದನು.
11 : ಇತರ ಜನಾಂಗಗಳವರ ಮೇಲೆ ತಳೆದಿರುವ ಮನೋಭಾವದಿಂದ ಅವನನ್ನೂ ನೋಡಿಕೊಂಡೆವು. ಅಷ್ಟೇ ಅಲ್ಲ, ನಮ್ಮ ಚಕ್ರಾಧಿಪತ್ಯಕ್ಕೆಲ್ಲಾ, ‘ತಂದೆ’ ಎಂದು ಘೋಷಿಸಿದೆವು. ಮಹಾರಾಜರನ್ನು ಬಿಟ್ಟಷ್ಟೆ, ಎಲ್ಲಕ್ಕಿಂತಲೂ ಹೆಚ್ಚಿನ ಮರ್ಯಾದೆ ಅವನಿಗಿತ್ತು, ಏಕೆಂದರೆ ಅವನು ಆಸ್ಥಾನದಲ್ಲಿ ದ್ವಿತೀಯ ಸ್ಥಾನವನ್ನು ಅಲಂಕರಿಸುವಂತೆ ಮಾಡಿದೆವು.
12 : ಮೊದಲನೇ ತಿಂಗಳ ಹದಿಮೂರನೆಯ ದಿನ ರಾಜಲೇಖಕರನ್ನು ಕರೆಸಲಾಯಿತು. ಇವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ ಆಯಾ ಸಂಸ್ಥಾನಾಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಅವರವರ ಸ್ವದೇಶಿ ಲಿಪಿಗಳಲ್ಲೂ ಭಾಷೆಗಳಲ್ಲೂ ಬರೆದರು. ಅರಸ ಅಹಷ್ಟೇರೋಷನ ಹೆಸರಿನಲ್ಲೇ ಲಿಖಿತವಾದ ಈ ಪತ್ರಗಳು ಅಧಿಕೃತ ರಾಜಮುದ್ರೆಯನ್ನು ಹೊಂದಿದ್ದವು.
13 : ಪತ್ರಗಳನ್ನು ಅಂಚೆಯವರ ಮುಖಾಂತರ ಎಲ್ಲಾ ರಾಜ ಸಂಸ್ಥಾನಗಳಿಗೆ ಕಳುಹಿಸಲಾಯಿತು. ಒಂದೇ ದಿನದಲ್ಲಿ ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣ ಮಾಸದ ಹದಿಮೂರನೆಯ ದಿನದಲ್ಲಿ ಹಿರಿಯರು, ಕಿರಿಯರು, ಮಕ್ಕಳು, ಮಹಿಳೆಯರೆನ್ನದೆ ನಿಮ್ಮ ಮಧ್ಯೆ ವಾಸಿಸುವ ಎಲ್ಲಾ ಯೆಹೂದ್ಯರನ್ನು ಕೊಂದುಹಾಕಿ, ನಿರ್ಮೂಲಮಾಡಿ, ನಿರ್ನಾಮಗೊಳಿಸಬೇಕೆಂದು ಅದರಲ್ಲಿ ಬರೆಯಲಾಗಿತ್ತು. 14ಅವರ ಆಸ್ತಿಯನ್ನು ಕೊಳ್ಳೆ ಹೊಡೆಯಬೇಕೆಂದು ಅದರಲ್ಲಿ ತಿಳಿಸಲಾಗಿತ್ತು.

· © 2017 kannadacatholicbible.org Privacy Policy