Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ಮತ್ತಾಯ


1 : ಯೇಸುಸ್ವಾಮಿ ಪಿಶಾಚಿಯಿಂದ ಪರಿಶೋಧಿತರಾಗಲೆಂದು ಪವಿತ್ರಾತ್ಮ ಅವರನ್ನು ಬೆಂಗಾಡಿಗೆ ಕರೆದೊಯ್ದರು.
2 : ಅಲ್ಲಿ ಯೇಸು ನಲವತ್ತು ದಿನ ಹಗಲಿರುಳೂ ಉಪವಾಸವಿದ್ದರು. ಅನಂತರ ಅವರಿಗೆ ಬಹಳ ಹಸಿವಾಯಿತು.
3 : ಆಗ ಶೋಧಕನು ಬಂದು, "ನೀನು ದೇವರ ಪುತ್ರನೆಂಬುದು ಸತ್ಯವಾದರೆ, ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞೆಮಾಡು," ಎಂದನು.
4 : ಅದಕ್ಕೆ ಯೇಸುಸ್ವಾಮಿ, "ಪವಿತ್ರ ಗ್ರಂಥದಲ್ಲಿ ಹೇಳಿರುವ ಪ್ರಕಾರ, "ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ; ದೇವರಾಡುವ ಪ್ರತಿಯೊಂದು ನುಡಿಯಿಂದ", ಎಂದರು.
5 : ಬಳಿಕ ಪಿಶಾಚಿ ಅವರನ್ನು ಪವಿತ್ರ ನಗರಕ್ಕೆ ಅಂದರೆ ಜೆರುಸಲೇಮಿಗೆ ಕರೆದೊಯ್ದು ಮಹಾದೇವಾಲಯದ ಗೋಪುರದ ತುದಿಯ ಮೇಲೆ ನಿಲ್ಲಿಸಿ,
6 : "ನೀನು ದೇವರ ಪುತ್ರನೆಂಬುದು ಸತ್ಯವಾದರೆ ಕಳಕ್ಕೆ ಧುಮುಕು. ಏಕೆಂದರೆ, ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರಕಾರ, ‘ದೇವರೇ ತಮ್ಮ ದೂತರಿಗೆ ಆಜ್ಞೆ ಮಾಡುವರು’ ಮತ್ತು ‘ಇವರು ನಿನ್ನ ಕಾಲುಗಳು ಕಲ್ಲುಗಳಿಗೆ ತಾಕದಂತೆ ನಿನ್ನನ್ನು ಕೈಗಳಲ್ಲಿ ಆತುಗೊಳ್ಳುವರು,’ ಎಂದಿತು.
8 : ಅನಂತರ ಪಿಶಾಚಿ ಯೇಸುವನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದು, ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ತೋರಿಸಿತು.
9 : "ನೀನು ನನಗೆ ಅಡ್ಡಬಿದ್ದು ಆರಾಧಿಸುವೆಯಾದರೆ ಇವೆಲ್ಲವನ್ನು ನಿನಗೆ ಕೊಡಬಲ್ಲೆ," ಎಂದಿತು.
10 : ಅದಕ್ಕೆ ಪ್ರತ್ಯುತ್ತರವಾಗಿ ಯೇಸು, "ಸೈತಾನನೇ, ತೊಲಗು, ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ," ಎಂದರು.
11 : ಆಗ ಪಿಶಾಚಿ ಯೇಸುವನ್ನು ಬಿಟ್ಟು ತೊಲಗಿತು. ದೇವದೂತರು ಬಂದು ಅವರನ್ನು ಉಪಚರಿಸಿದರು.
12 : ಯೊವಾನ್ನನು ಬಂಧಿತನಾದನೆಂದು ಯೇಸುಸ್ವಾಮಿ ಕೇಳಿ, ಆ ಪ್ರಾಂತ್ಯವನ್ನು ಬಿಟ್ಟು ಗಲಿಲೇಯಕ್ಕೆ ಹೊರಟುಹೋದರು.
13 : ನಜರೇತ್ ಊರಿನಲ್ಲಿ ತಂಗದೆ ಗಲಿಲೇಯ ಸರೋವರದ ಸವಿೂಪದಲ್ಲಿರುವ ಕಫೆರ್ನವುಮ್ ಎಂಬ ಊರಿನಲ್ಲಿ ವಾಸಮಾಡಿದರು.
14 : ಇದು ಜೆಬುಲೋನ್ ಹಾಗೂ ನೆಫ್ತಲೀಮ್ ನಾಡುಗಳ ಸರಹದ್ದಿನಲ್ಲಿದೆ.
15 : ಹೀಗೆ: "ಜೆಬುಲೋನ್ ನಾಡೇ, ನೆಫ್ತಲೀಮ್ ನಾಡೇ, ಸರೋವರದ ಹತ್ತಿರವಿರುವ ಹಾದಿಬೀದಿಯೇ, ಜೋರ್ಡನಿನ ಹೊರವಲಯವೇ,
16 : ಕಾರ್ಗತ್ತಲಲ್ಲಿ ವಾಸಿಸುವವರಿಗೆ ದಿವ್ಯ ಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,"ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು.
17 : ಅಂದಿನಿಂದ ಯೇಸು, "ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯ ಸಮೀಪಿಸಿತು," ಎಂಬ ಸಂದೇಶವನ್ನು ಬೋಧಿಸತೊಡಗಿದರು.
18 : ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದು ಹೋಗುತ್ತಿದ್ದರು. ಆಗ ಇಬ್ಬರು ಸಹೋದರರನ್ನು ಕಂಡರು. ಇವರೇ ‘ಪೇತ್ರ’ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ. ಬೆಸ್ತರಾದ ಇವರು ಸರೋವರದಲ್ಲಿ ಬಲೆ ಬೀಸುತ್ತಾ ಇದ್ದರು.
19 : "ನನ್ನನ್ನು ಹಿಂಬಾಲಿಸಿ ಬನ್ನಿ. ನಿಮ್ಮನ್ನು ಮನುಷ್ಯರನ್ನೇ ಹಿಡಿಯುವವರನ್ನಾಗಿ ಮಾಡುವೆನು," ಎಂದು ಹೇಳಿ ಯೇಸು ಅವರನ್ನು ಕರೆದರು.
20 : ತಕ್ಷಣವೇ, ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
21 : ಅಲ್ಲಿಂದ ಮುಂದಕ್ಕೆ ಹೋಗುತ್ತಿದ್ದಾಗ ಯೇಸು ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಎಂಬ ಇನ್ನಿಬ್ಬರು ಸಹೋದರರನ್ನು ಕಂಡರು. ಇವರು ತಮ್ಮ ತಂದೆ ಜೆಬೆದಾಯನೊಡನೆ ದೋಣಿಯಲ್ಲಿ ಬಲೆಗಳನ್ನು ಸರಿಪಡಿಸುತ್ತಿದ್ದರು. ಯೇಸು ಇವರನ್ನೂ ಕರೆದರು.
22 : ಕೂಡಲೇ ಅವರು ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
23 : ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶ ಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.
24 : ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾಶ್ರ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆ ತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.
25 : ಗಲಿಲೇಯ, ದೆಕಪೊಲಿ, ಜೆರುಸಲೇಮ್, ಜುದೇಯ ಎಂಬ ಸ್ಥಳಗಳಿಂದಲೂ ಜೋರ್ಡನ್ ನದಿಯ ಆಚೆಕಡೆಯಿಂದಲೂ ಜನರು ತಂಡೋಪ ತಂಡವಾಗಿ ಬಂದು ಯೇಸುವನ್ನು ಹಿಂಬಾಲಿಸಿದರು.

· © 2017 kannadacatholicbible.org Privacy Policy