1 : ಅನ್ಯಧರ್ಮದವರೂ ಸಹ ದೈವವಾಕ್ಯವನ್ನು ಸ್ವೀಕರಿಸಿದರೆಂಬ ಸುದ್ಧಿ ಜುದೇಯದಲ್ಲಿದ್ದ ಪ್ರೇಷಿತರಿಗೂ ವಿಶ್ವಾಸಿಗಳಿಗೂ ಮುಟ್ಟಿತು.
2 : ಪೇತ್ರನು ಜೆರುಸಲೇಮಿಗೆ ಹೋದಾಗ ಅನ್ಯಧರ್ಮದವರಿಗೆ ಸುನ್ನತಿಯಾಗಬೇಕು ಎನ್ನುತ್ತಿದ್ದ ಪಂಗಡದವರು ಮುಂದೆ ಬಂದು,
3 : “ನೀನು ಸುನ್ನತಿಯಿಲ್ಲದ ಅನ್ಯಧರ್ಮದವರ ಮನೆಗೆ ಭೇಟಿಕೊಟ್ಟು ಅವರೊಡನೆ ಊಟಮಾಡಿದ್ದೇಕೆ?” ಎಂದು ಆಕ್ಷೇಪಿಸಿದರು.
5 : “ಜೊಪ್ಪ ಪಟ್ಟಣದಲ್ಲಿ ನಾನು ಧ್ಯಾನಪರವಶನಾಗಿದ್ದಾಗ ದರ್ಶನವೊಂದನ್ನು ಕಂಡೆ. ಸ್ವರ್ಗದಿಂದ ದೊಡ್ಡ ದುಪ್ಪಟಿಯಂಥ ವಸ್ತು ಒಂದು ಕೆಳಕ್ಕೆ ಇಳಿಯಿತು. ಅದರ ನಾಲ್ಕು ಮೂಲೆಗಳನ್ನು ಹಿಡಿದು ಕೆಳಕ್ಕೆ ಇಳಿಬಿಡಲಾಗಿತ್ತು. ಅದು ಬಂದು ನನ್ನ ಪಕ್ಕದಲ್ಲೇ ನಿಂತಿತು.
6 : ಅದನ್ನು ಗಮನಿಸಿ ನೋಡಿದಾಗ ಅದರಲ್ಲಿ ಪ್ರಾಣಿಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟಗಳೂ ಹಾರಾಡುವ ಪಕ್ಷಿಗಳೂ ಕಂಡುಬಂದವು.
7 : ಆಗ, ‘ಪೇತ್ರ, ಏಳು, ಕೊಯ್ದು ತಿನ್ನು’ ಎಂಬ ವಾಣಿ ನನಗೆ ಕೇಳಿಸಿತು.
8 : ಅದಕ್ಕೆ ನಾನು, ‘ಬೇಡವೇ ಬೇಡ ಸ್ವಾಮಿ, ಅಶುದ್ದ ಹಾಗು ಅಸ್ಪøಶ್ಯವಾದುದು ಯಾವುದೂ ನನ್ನ ಬಾಯನ್ನು ಎಂದೂ ಹೊಕ್ಕಿಲ್ಲ,’ ಎಂದೆ.
9 : ಮತ್ತೊಮ್ಮೆ ಆ ವಾಣಿ ಸ್ವರ್ಗಲೋಕದಿಂದ, ‘ದೇವರೇ ಶುದ್ಧೀಕರಿಸಿರುವ ಏನನ್ನೂ ನೀನು ಅಶುದ್ಧವೆನ್ನಬೇಡ,’ ಎಂದು ಉತ್ತರಿಸಿತು.
10 : ಹೀಗೆ ಮೂರು ಬಾರಿ ನಡೆದ ಮೇಲೆ, ಅವೆಲ್ಲವನ್ನೂ ಒಟ್ಟಿಗೆ ಸ್ವರ್ಗಕ್ಕೆ ಮರಳಿ ಎಳೆದುಕೊಳ್ಳಲಾಯಿತು.
11 : “ಅದೇ ಸಮಯಕ್ಕೆ ಸರಿಯಾಗಿ, ಸೆಜರೇಯದಿಂದ ಕಳುಹಿಸಲಾದ ಮೂವರು ಮಂದಿ ನನ್ನನ್ನು ಹುಡುಕಿಕೊಂಡು, ನಾನು ತಂಗಿದ್ದ ಮನೆಗೆ ಬಂದರು.
12 : ನಾನು ಸಂಕೋಚಪಡದೆ ಅವರೊಡನೆ ಹೋಗಬೇಕೆಂದು ಪವಿತ್ರಾತ್ಮ ತಿಳಿಸಿದರು. ಜೊಪ್ಪದ ಈ ಆರುಮಂದಿ ಭಕ್ತರೂ ನನ್ನೊಡನೆ ಸೆಜರೇಯಕ್ಕೆ ಬಂದರು. ನಾವೆಲ್ಲರೂ ಕೊರ್ನೇಲಿಯನ ಮನೆಯನ್ನು ಪ್ರವೇಶಿಸಿದೆವು.
13 : ಅವನು, “ನನ್ನ ಮನೆಯಲ್ಲೇ ದೂತನೊಬ್ಬನು ಕಾಣಿಸಿಕೊಂಡು, ‘ಈಗಲೇ ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾಗುವ ಸಿಮೋನನನ್ನು ಬರಹೇಳು.
14 : ಅವನು, ನೀನೂ ನಿನ್ನ ಕುಟುಂಬದವರೆಲ್ಲರೂ ಪಡೆಯಬಹುದಾದಂಥ ಜೀವೋದ್ಧಾರದ ಸಂದೇಶವನ್ನು ನೀಡುವನು,’ ಎಂದು ತಿಳಿಸಿದನು” ಎಂದು ನಮಗೆ ಹೇಳಿದನು.
15 : ನಾನು ಉಪದೇಶಮಾಡಲು ಪ್ರಾರಂಭಿಸಿದ ಕೂಡಲೇ ನಮ್ಮ ಮೇಲೆ ಇಳಿದಂತೆ ಅವರ ಮೇಲೂ ಪವಿತ್ರಾತ್ಮ ಇಳಿದು ಬಂದರು.
16 : ಕೊಟ್ಟನು. ನೀವಾದರೋ ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನವನ್ನು ಪಡೆಯುವಿರಿ,’ ಎಂಬ ಪ್ರಭುವಿನ ಮಾತುಗಳು ನೆನಪಿಗೆ ಬಂದವು.
17 : ನಾವು ಪ್ರಭು ಯೇಸುಕ್ರಿಸ್ತರನ್ನು ವಿಶ್ವಾಸಿಸಿದಾಗ ನಮಗೆ ಕೊಟ್ಟ ವರವನ್ನೇ ದೇವರು ಆ ಅನ್ಯಧರ್ಮದವರಿಗೂ ಕೊಟ್ಟಿರುವರು. ಹೀಗಿರುವಲ್ಲಿ ದೇವರನ್ನು ತಡೆಗಟ್ಟಲು ನಾನಾರು?” ಎಂದನು.
18 : ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು. ಮಾತ್ರವಲ್ಲ, ‘ಅನ್ಯಧರ್ಮದವರೂ ಪಶ್ಚಾತ್ತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವಸ್ತುತಿ ಮಾಡಿದರು.
19 : ಸ್ತೇಫನನು ಕೊಲೆಯಾದ ಮೊದಲ್ಗೊಂಡು ಉಂಟಾದ ಹಿಂಸಾಚಾರದ ನಿಮಿತ್ತ ಭಕ್ತಾದಿಗಳು ಚದರಿಹೋದರು. ಅವರಲ್ಲಿ ಕೆಲವರು ಫೆನಿಷ್ಯ, ಸೈಪ್ರಸ್, ಅಂತಿಯೋಕ್ಯದವರೆಗೂ ಹೋಗಿ ಶುಭಸಂದೇಶವನ್ನು ಸಾರಿದರು. ಆದರೆ ಇದನ್ನು ಸಾರಿದ್ದು ಯೆಹೂದ್ಯರಿಗೆ ಮಾತ್ರ.
20 : ಸೈಪ್ರಸ್ ಮತ್ತು ಸಿರೇನಿನ ಕೆಲವು ಭಕ್ತರಾದರೋ ಅಂತಿಯೋಕ್ಯಕ್ಕೆ ಹೋಗಿ ಪ್ರಭು ಯೇಸುವಿನ ಶುಭಸಂದೇಶವನ್ನು ಗ್ರೀಕರಿಗೂ ಸಾರಿದರು.
21 : ಪ್ರಭುವಿನ ಶಕ್ತಿ ಅವರೊಡನೆ ಇತ್ತು. ಜನರು ಬಹುಸಂಖ್ಯೆಯಲ್ಲಿ ಪ್ರಭುವಿನಲ್ಲಿ ವಿಶ್ವಾಸವಿಟ್ಟು ಅವರ ಭಕ್ತರಾದರು.
22 : ಈ ಸಮಾಚಾರ ಜೆರುಸಲೇಮಿನ ಧರ್ಮಸಭೆಗೆ ತಲುಪಿತು. ಬಾರ್ನಬನನ್ನು ಅಂತಿಯೋಕ್ಯಕ್ಕೆ ಅವರು ಕಳುಹಿಸಿದರು.
23 : ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.
24 : ಬಾರ್ನಬನು ಸತ್ಪುರುಷನು, ಪವಿತ್ರಾತ್ಮಭರಿತನು ಹಾಗೂ ಅಗಾಧ ವಿಶ್ವಾಸವುಳ್ಳವನು. ಅನೇಕ ಜನರು ಪ್ರಭುವಿನ ಅನುಯಾಯಿಗಳಾದರು.
25 : ಅನಂತರ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಕ್ಕೆ ಹೋದನು.
26 : ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು-ಅಂತಿಯೋಕ್ಯದಲ್ಲೇ.
27 : ಆ ದಿನಗಳಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
28 : ಅವರಲ್ಲಿ ಅಗಬ ಎಂಬವನು ಒಬ್ಬನು. ಇವನು ಪವಿತ್ರಾತ್ಮ ಪ್ರೇರಿತನಾಗಿ ಜಗತ್ತಿನಲ್ಲೆಲ್ಲಾ ಭೀಕರ ಕ್ಷಾಮ ಬರಲಿದೆಯೆಂದು ಮುಂತಿಳಿಸಿದನು. (ಇದು ಬಂದೊದಗಿದುದು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ)
29 : ಆಗ ಭಕ್ತರಲ್ಲಿ ಪ್ರತಿಯೊಬ್ಬರು ತಮ್ಮ ಶಕ್ತಿಗನುಸಾರ ಜುದೇಯದಲ್ಲಿ ವಾಸಿಸುತ್ತಿದ್ದ ಭಕ್ತಾದಿಗಳಿಗೆ ನೆರವು ನೀಡಲು ನಿರ್ಧರಿಸಿದರು.
30 : ಅಂತೆಯೇ ತಮ್ಮ ಸಹಾಯವನ್ನು ಬಾರ್ನಬ ಮತ್ತು ಸೌಲ ಇವರ ಮುಖಾಂತರ ಅಲ್ಲಿನ ಸಭಾಪ್ರಮುಖರಿಗೆ ಕಳುಹಿಸಿಕೊಟ್ಟರು.