1 : ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿನ್ನ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ವಿೂಸಲಾದ, ಮೆಚ್ಚುಗೆಯಾದ, ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಅರಾಧನೆ.
2 : ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕøಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.
3 : ದೇವರು ನನಗೆ ದಯಪಾಲಿಸಿರುವ ಸೇವೆಯ ನಿಮಿತ್ತ ನಾನು ನಿಮಗೆ ಹೇಳುವ ಬುದ್ಧಿಮಾತಿದು: ನಿಮ್ಮಲ್ಲಿ ಯಾರೂ ತನ್ನನ್ನೇ ಅತಿಯಾಗಿ ಭಾವಿಸಿಕೊಳ್ಳದಿರಲಿ. ದೇವರು ತನಗೆ ಇತ್ತಿರುವ ವಿಶ್ವಾಸದ ಪರಿಮಾಣದ ಮೇರೆಗೆ ಪ್ರತಿಯೊಬ್ಬನೂ ತನ್ನ ಬಗ್ಗೆ ಸರಿಯಾದ ಅಭಿಪ್ರಾಯ ಹೊಂದಿರಲಿ.
4 : ನಮಗಿರುವುದು ಒಂದೇ ದೇಹ. ಆದರೂ ಅದರಲ್ಲಿ ಅನೇಕ ಅಂಗಗಳಿವೆ. ಈ ಅಂಗಗಳೆಲ್ಲವೂ ತಮ್ಮದೇ ಆದ ನಿರ್ದಿಷ್ಟ ಕಾರ್ಯವನ್ನು ನಿರ್ವಹಿಸುತ್ತವೆ.
5 : ಅಂತೆಯೇ, ನಾವು ಅನೇಕ ಮಂದಿ ಇದ್ದರೂ ಕ್ರಿಸ್ತಯೇಸುವಿನಲ್ಲಿ ನಾವೆಲ್ಲರೂ ಒಂದೇ ದೇಹವಾಗಿದ್ದೇವೆ. ಒಬ್ಬರಿಗೊಬ್ಬರು ದೇಹದ ವಿವಿಧ ಅಂಗಗಳಂತೆ ಹೊಂದಿಕೊಂಡಿದ್ದೇವೆ.
6 : ದೇವರು ಅನುಗ್ರಹಿಸಿರುವ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ನಾವು ಹೊಂದಿರುವ ವರವು ಪ್ರವಾದನೆಯ ವರವಾಗಿದ್ದರೆ ನಮ್ಮ ವಿಶ್ವಾಸಕ್ಕೆ ಅನುಗುಣವಾಗಿ ಅದನ್ನು ಉಪಯೋಗಿಸಬೇಕು.
7 : ಸೇವಕನು ಸೇವೆಯಲ್ಲಿಯೂ ಬೋಧಕನು ಬೋಧಿಸುವುದರಲ್ಲಿಯೂ
8 : ಉಪದೇಶಕನು ಉಪದೇಶಿಸುವುದರಲ್ಲಿಯೂ ನಿರತನಾಗಿರಲಿ. ದಾನಮಾಡುವವನು ಧಾರಾಳವಾಗಿ ದಾನ ಮಾಡಲಿ. ಅಧಿಕಾರ ನಡೆಸುವವನು ನಿಷ್ಠೆಯಿಂದ ನಡೆಸಲಿ. ಕರುಣಾಪೂರಿತ ಕಾರ್ಯಗಳನ್ನು ಕೈಗೊಳ್ಳುವವನು ಹರ್ಷಚಿತ್ತನಾಗಿರಲಿ.
9 :
ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ.
11 : ಪ್ರಭುವಿನ ಸೇವೆಯಲ್ಲಿ ಆಲಸಿಗಳಾಗದೆ ಅತ್ಯಾಸಕ್ತರಾಗಿರಿ.
12 : ನಂಬಿಕೆ ನಿರೀಕ್ಷೆಯನ್ನು ಹೊಂದಿರುವ ನೀವು ಉಲ್ಲಾಸದಿಂದಿರಿ. ಸಂಕಟ ಬಂದಾಗ ಸಹನೆಯಿಂದಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.
13 : ಕೊರತೆಯಲ್ಲಿರುವ ದೇವಜನರಿಗೆ ನೆರವು ನೀಡಿರಿ. ಅತಿಥಿ ಸತ್ಕಾರದಲ್ಲಿ ತತ್ಪರರಾಗಿರಿ.
14 : ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ. ಹೌದು, ಶಪಿಸದೆ ಆಶೀರ್ವದಿಸಿರಿ.
15 : ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.
16 : ನಿಮ್ಮ ನಿಮ್ಮಲ್ಲಿ ಸಾಮರಸ್ಯವಿರಲಿ. ದೊಡ್ಡಸ್ತಿಕೆಯಿಂದ ವರ್ತಿಸಬೇಡಿ. ದೀನದಲಿತರೊಡನೆ ಗೆಳೆತನ ಬೆಳೆಸಿರಿ. ನೀವೇ ಜಾಣರೆಂದು ಭಾವಿಸದಿರಿ.
17 : ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡದಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಮಾನ್ಯವೋ ಅದನ್ನೇ ಮಾಡಿರಿ.
18 : ಸಾಧ್ಯವಾದ ಮಟ್ಟಿಗೆ ಸರ್ವರೊಂದಿಗೂ ಸಮಾಧಾನದಿಂದ ಬಾಳಿರಿ.
19 : ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.
20 : ಅದಕ್ಕೆ ಬದಲು, ನಿನ್ನ ಶತ್ರು ಹಸಿದಿದ್ದರೆ ಉಣಲು ಬಡಿಸು; ಬಾಯಾರಿದ್ದರೆ ಕುಡಿಯಲು ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಉರಿಯುವ ಕೆಂಡಗಳನ್ನು ಸುರಿಸಿದಂತಾಗುವುದು.
21 : ಕೇಡಿಗೆ ಸೋಲದೆ, ಒಳಿತಿನಿಂದ ಕೇಡನ್ನು ಸೋಲಿಸು.