1 : ಹಾಗಾದರೆ ಯೆಹೂದ್ಯರ ವೈಶಿಷ್ಟ್ಯವೇನು? ಅವರು ಸುನ್ನತಿ ಮಾಡಿಸಿಕೊಂಡುದರಿಂದ ಪಡೆದ ಪ್ರಯೋಜನವೇನು?
2 : ಹೌದು, ಎಲ್ಲಾ ವಿಧದಲ್ಲಿಯೂ ಹೆಚ್ಚು ಪ್ರಯೋಜನವಿದೆ. ಮೊದಲನೆಯದಾಗಿ, ದೇವರು ತಮ್ಮ ಸಂದೇಶವನ್ನು ವಹಿಸಿಕೊಟ್ಟದ್ದು ಯೆಹೂದ್ಯರಿಗೆ ತಾನೆ?
3 : ಅವರಲ್ಲಿ ಕೆಲವರು ಅಪ್ರಾಮಾಣಿಕರಾಗಿ ನಡೆದುಕೊಂಡಿದ್ದರೆ ಏನಾಯಿತು? 3ದೇವರ ಪ್ರಾಮಾಣಿಕತನಕ್ಕೆ ಭಂಗಬರಲು ಸಾಧ್ಯವೇ?
4 : ಎಂದಿಗೂ ಇಲ್ಲ. ಮಾನವರೆಲ್ಲರೂ ಸುಳ್ಳುಗಾರರಾದರೂ ದೇವರು ಮಾತ್ರ ಸತ್ಯವಂತರೇ ಸರಿ. ಪವಿತ್ರ ಗ್ರಂಥದಲ್ಲಿ ಹೀಗೆಂದು ಬರೆದಿದೆ:
“ನಿನ್ನ ಮಾತಿನಲ್ಲೇ ನೀನು
ನೀತಿವಂತನೆಂದು ವ್ಯಕ್ತವಾಗಬೇಕು,
ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ
ಆಗಬೇಕು.”
5 : ನಮ್ಮ ಅಕ್ರಮ ನಡತೆ ದೇವರ ನ್ಯಾಯ ನೀತಿಯನ್ನು ಮತ್ತಷ್ಟು ಸ್ಪಷ್ಟವಾಗಿ ತೋರಿಸುವ ಸಾಧನವಾದರೆ ಆಗ ಏನು ಹೇಳುವುದು? ಆ ಅಕ್ರಮಕ್ಕಾಗಿ ದೇವರು ನಮ್ಮ ಮೇಲೆ ಕೋಪ ಕಾರಿದರೆ ಅದು ಅನ್ಯಾಯವೆಂದು ನಾವು ಹೇಳಬಹುದೆ? (ಮನುಷ್ಯನಿಗೆ ಸಹಜವಾಗಿ ಏಳುವ ಪ್ರಶ್ನೆಯಿದು)
6 : ಎಂದಿಗೂ ಇಲ್ಲ! ದೇವರು ನ್ಯಾಯವಂತರಲ್ಲದಿದ್ದರೆ ಲೋಕಕ್ಕೆ ನ್ಯಾಯತೀರ್ಪು ಕೊಡಲು ಹೇಗೆ ತಾನೆ ಸಾಧ್ಯ?
7 : ನಮ್ಮ ಅಸತ್ಯತೆಯಿಂದ ದೇವರ ಸತ್ಯತೆ ವ್ಯಕ್ತವಾಗಿ ಅವರ ಮಹಿಮೆ ಬೆಳಗುವುದಾದರೆ ನನಗೇಕೆ ಪಾಪಿಯೆಂದು ತೀರ್ಪಾಗಬೇಕು?
8 : “ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” - ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯ ಸಮ್ಮತವಾದುದು.
9 : ಹಾಗಾದರೆ, ಯೆಹೂದ್ಯರಾದ ನಾವು ಇತರರಿಗಿಂತಲೂ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ, ಇತರರೇ ಆಗಲಿ, ಎಲ್ಲರೂ ಪಾಪದ ಆಳ್ವಿಕೆಗೆ ಅಧೀನರು. ಇದನ್ನು ನಾನು ಈಗಾಗಲೇ ಸ್ಪಷ್ಟೀಕರಿಸಿದ್ದೇನೆ.
10 : ಪವಿತ್ರ ಗ್ರಂಥದಲ್ಲಿ ಹೀಗಿದೆ:
11 : ದೇವರೊಡನೆ ಸತ್ಸಂಬಂಧಿತರಾರೂ ಇಲ್ಲ,
ಸನ್ಮತಿಗಳು ಒರ್ವರೂ ಇಲ್ಲ
ಆತನನ್ನು ಅರಸುವವರಂತೂ ಇಲ್ಲವೇ ಇಲ್ಲ.
12 : ಸರಿದರು ದೂರ, ದೇವರಿಂದ ದೂರ
ದಾರಿತಪ್ಪಿ ನಡೆದರೆಲ್ಲರೂ ಬಲುದೂರ
ಒಳಿತನು ಮಾಳ್ಪರೊರ್ವನೂ ಇಲ್ಲ.
13 : ಅವರ ಗಂಟಲೇ ತೆರೆದ ಸಮಾಧಿಯಾಗಿದೆ
ನಾಲಗೆಗಳಲಿ ಮರೆಮೋಸ ತುಂಬಿತುಳುಕುತಿದೆ.
ತುಟಿಯ ಕಂಪನದಲಿ ಘೋರ ವಿಷವಿದೆ.
14 : ಶಾಪಕೋಪ ಅವರ ಬಾಯಲಿ ತುಂಬಿದೆ
15 : ಕಾಲುಕೆರೆದು ನಿಂತಿಹರು ರಕುತ ಪಾತಕೆ
16 : ನಾಶಪರಿವಿನಾಶ ಅವರು ಹೋದೆಡೆ.
17 : ಶಾಂತಿಪಥವನು ಅರಿಯರವರು
18 : ಅವರೆದೆಯಲಿಲ್ಲ ದೇವಭಯವು.
19 : ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.
20 : ಏಕೆಂದರೆ, ಈ ನೇಮನಿಯಮಗಳನ್ನು ಅನುಸರಿಸಿದ ಮಾತ್ರಕ್ಕೇ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯುವುದಿಲ್ಲ. ಧರ್ಮಶಾಸ್ತ್ರ ಮಾನವನಿಗೆ ಪಾಪ ಪ್ರಜ್ಞೆಯನ್ನು ಉಂಟುಮಾಡುತ್ತದೆ, ಅಷ್ಟೆ.
21 : ವಿಶ್ವಾಸದ ಮೂಲಕ ಸತ್ಸಂಬಂಧ
ಈಗಲಾದರೋ ಧರ್ಮಶಾಸ್ತ್ರದ ನೆರವಿಲ್ಲದೆಯೇ ದೇವರಿಂದ ದೊರಕುವ ಸತ್ಸಂಬಂಧವು ಪ್ರಕಟವಾಗಿದೆ. ಇದಕ್ಕೆ ಧರ್ಮಶಾಸ್ತ್ರವೂ ಪ್ರವಾದನಾಗ್ರಂಥವೂ ಸಾಕ್ಷಿಯಾಗಿವೆ.
22 : ಯೇಸುಕ್ರಿಸ್ತರಲ್ಲಿ ವಿಶ್ವಾಸವಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರನ್ನೂ ದೇವರು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.
23 : ಮಾನವರೆಲ್ಲರೂ ಪಾಪಿಗಳೇ, ಎಲ್ಲರೂ ದೇವದತ್ತ ಮಹಿಮೆಯನ್ನು ಕಳೆದುಕೊಂಡವರೇ.
24 : ಆದರೆ ದೇವರು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಪಾಪವಿಮೋಚನೆಯನ್ನು ದಯಪಾಲಿಸಿ, ತಮ್ಮ ಉಚಿತಾರ್ಥ ಅನುಗ್ರಹದಿಂದ ಅವರನ್ನು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ.
26 : ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯೂ ತಾವು ಸತ್ಯ ಸ್ವರೂಪರು ಮತ್ತು ನ್ಯಾಯವಂತರು ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಈ ರೀತಿ ಮಾಡಿದರು.
27 : ಹೀಗಿರುಲ್ಲಿ ಮಾನವನು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವಿದೆಯೇ? ಇಲ್ಲವೇ ಇಲ್ಲ. ಹಾಗಾದರೆ ಸತ್ಸಂಬಂಧಕ್ಕೆ ಆಧಾರವೇನು? ಸತ್ಕಾರ್ಯಗಳ ಸಾಧನೆಯೇ? ಇಲ್ಲ. ವಿಶ್ವಾಸವೇ? ಹೌದು.
28 : ಮಾನವನಿಗೆ ದೇವರೊಡನೆ ಸತ್ಸಂಬಂಧ ದೊರಕುವುದು ಧರ್ಮಶಾಸ್ತ್ರಗಳ ನೇಮನಿಯಮಗಳನ್ನು ಪಾಲಿಸುವುದರಿಂದ ಅಲ್ಲ, ವಿಶ್ವಾಸದಿಂದಲೇ ಎಂಬುದು ನಮ್ಮ ಸಿದ್ಧಾಂತ.
29 : ದೇವರು ಕೇವಲ ಯೆಹೂದ್ಯರಿಗೆ ಮಾತ್ರ ದೇವರೋ ಅಥವಾ ಇತರರಿಗೂ ದೇವರೋ? ಹೌದು, ಇತರರಿಗೂ ದೇವರೇ.
30 : ಯೆಹೂದ್ಯರನ್ನು ಅವರ ವಿಶ್ವಾಸದ ಆಧಾರದ ಮೇಲೂ ಇತರರನ್ನು ಅವರ ವಿಶ್ವಾಸದ ಮೂಲಕವೂ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವ ದೇವರು ಒಬ್ಬರೇ.
31 : ‘ವಿಶ್ವಾಸದ ಮೂಲಕ’ ಎಂದು ಒತ್ತಿ ಹೇಳುವಾಗ ಧರ್ಮಶಾಸ್ತ್ರವನ್ನು ನಾವು ಅಲ್ಲಗಳೆಯುತ್ತೇವೆಂದು ಅರ್ಥವೆ? ಎಂದಿಗೂ ಇಲ್ಲ. ಬದಲಿಗೆ ಧರ್ಮಶಾಸ್ತ್ರದ ನಿಲುವನ್ನು ಸಮರ್ಥಿಸುತ್ತೇವೆ.