Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ತೀತ


1 : ಕ್ರೈಸ್ತವಿಶ್ವಾಸಿಗಳ ನಡತೆ 3 ಆಳುವವರಿಗೂ ಅಧಿಕಾರಿಗಳಿಗೂ ಕ್ರೈಸ್ತ ವಿಶ್ವಾಸಿಗಳು ವಿಧೇಯರಾಗಿ ನಡೆದುಕೊಳ್ಳಬೇಕೆಂದು ಜ್ಞಾಪಕಪಡಿಸು. ಎಲ್ಲಾ ಸತ್ಕಾರ್ಯಗಳನ್ನು ಕೈಗೊಳ್ಳಲು ಅವರು ಸಿದ್ಧರಿರಬೇಕು.
2 : ಅವರು ಯಾರನ್ನೂ ದೂಷಿಸದೆ, ಯಾರೊಡನೆಯೂ ಜಗಳವಾಡದೆ, ಸಾಧುಗುಣದಿಂದ ಎಲ್ಲರೊಡನೆ ಸೌಜನ್ಯದಿಂದ ನಡೆದುಕೊಳ್ಳಲಿ.
3 : ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.
4 : ಹೀಗಿರುವಾಗ, ಜಗದ್ರಕ್ಷಕರಾದ ದೇವರ ದಯೆಯೂ ಅವರ ಜನಪ್ರೇಮವೂ ಪ್ರಕಟವಾದವು.
5 : ಆಗ ಅವರೇ ನಮ್ಮನ್ನು ಉದ್ಧರಿಸಿದರು. ನಮ್ಮ ಸ್ವಂತ ಪುಣ್ಯಕಾರ್ಯಗಳು ನಮಗೆ ಈ ಉದ್ಧಾರವನ್ನು ತರಲಿಲ್ಲ. ಪುನರ್ಜನ್ಮವನ್ನು ಸೂಚಿಸುವ ಸ್ನಾನ ಹಾಗು ನೂತನ ಜೀವವನ್ನೀಯುವ ಪವಿತ್ರಾತ್ಮ ಈ ಮೂಲಕ ಅವರೇ ನಮ್ಮನ್ನು ಕರುಣೆಯಿಂದ ಉದ್ಧಾರ ಮಾಡಿದರು.
6 : ಪವಿತ್ರಾತ್ಮರನ್ನು ನಮ್ಮ ಉದ್ಧಾರಕ ಯೇಸುಕಿಸ್ತರ ಮುಖಾಂತರ ದೇವರು ನಮಗೆ ಧಾರಾಳವಾಗಿ ಅನುಗ್ರಹಿಸಿದ್ದಾರೆ.
7 : ಹೀಗೆ ದೈವಾನುಗ್ರಹದಿಂದ ನಾವು ದೇವರೊಡನೆ ಸತ್ಸಂಬಂಧವನ್ನು ಹೊಂದಿದೆವು. ನಿತ್ಯಜೀವದ ಭರವಸೆಯನ್ನು ಪಡೆದು ಆ ಜೀವಕ್ಕೆ
8 : ಹೀಗೆ ದೈವಾನುಗ್ರಹದಿಂದ ನಾವು ದೇವರೊಡನೆ ಸತ್ಸಂಬಂಧವನ್ನು ಹೊಂದಿದೆವು. ನಿತ್ಯಜೀವದ ಭರವಸೆಯನ್ನು ಪಡೆದು ಆ ಜೀವಕ್ಕೆ ಬಾಧ್ಯಸ್ಥರಾದೆವು. ಇದು ಸತ್ಯವಾದ ಮಾತು.
9 : ಹುರುಳಿಲ್ಲದ ತರ್ಕಗಳಿಂದಲೂ ಉದ್ದುದ್ದ ವಂಶಾವಳಿಗಳಿಂದಲೂ ಕಲಹ ಕಚ್ಚಾಟಗಳಿಂದಲೂ ಧರ್ಮಶಾಸ್ತ್ರವನ್ನು ಕುರಿತಾದ ವಾಗ್ವಾದಗಳಿಂದಲೂ ನೀನು ದೂರವಿರು. ಅವು ನಿಷ್ಪ್ರಯೋಜಕ ಹಾಗೂ ವ್ಯರ್ಥವಾದುವು.
10 : ಕ್ರೈಸ್ತಸಭೆಯಲ್ಲಿ ಭೇದಭಾವ ಹುಟ್ಟಿಸುವವನಿಗೆ ಒಂದೆರಡು ಸಾರಿ ಬುದ್ಧಿಹೇಳು. ಅನಂತರ ಅವನಷ್ಟಕ್ಕೇ ಬಿಟ್ಟುಬಿಡು.
11 : ಅಂಥವನು ಪತಿತ ಹಾಗೂ ಪಾಪಿಯೆಂದು ತಿಳಿ. ಅವನ ದುಷ್ಕøತ್ಯಗಳೇ ಅವನ ಮೇಲೆ ತೀರ್ಪಿಡುತ್ತವೆ.
12 : ಅಂತಿಮ ಸಲಹೆಗಳು ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದಿರುವುದರಿಂದ ಆರ್ತೆಮನನ್ನಾಗಲೀ ತುಖಿಕನನ್ನಾಗಲೀ ನಿನ್ನ ಬಳಿಗೆ ಕಳಿಸುತ್ತೇನೆ. ಅವರಲ್ಲೊಬ್ಬನು ನಿನ್ನ ಬಳಿಗೆ ಬಂದಾಗ ನೀನು ಕೂಡಲೇ ನಿಕೊಪೊಲಿಗೆ ಬಂದುಬಿಡು.
13 : ಧರ್ಮಶಾಸ್ತ್ರಜ್ಞನಾದ ಜೇನನಿಗೂ ಅಪೊಲೋಸನಿಗೂ ಅವರ ಪ್ರಯಾಣಕ್ಕೆ ಬೇಕಾದ ಸಹಾಯಮಾಡು. ಅವರಿಗೆ ಏನೂ ಕೊರತೆಯಾಗದಂತೆ ನೋಡಿಕೋ
14 : ನಮ್ಮ ಜನರು ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಕುಂದು ಕೊರತೆಯಲ್ಲಿರುವವರಿಗೆ ನೆರವಾಗಲಿ. ಪರೋಪಕಾರವನ್ನು ಕಲಿತುಕೊಳ್ಳಲಿ. ವ್ಯರ್ಥಜೀವನವನ್ನು ನಡೆಸದಿರಲಿ.
15 : ನನ್ನ ಜೊತೆ ಇರುವವರೆಲ್ಲ ನಿನಗೆ ಶುಭಾಶಯಗಳನ್ನು ಕಳಿಸಿದ್ದಾರೆ. ಅಲ್ಲಿ ನಿನ್ನೊಂದಿಗಿರುವ ಕ್ರೈಸ್ತಬಾಂಧವರಿಗೂ ನನ್ನ ವಂದನೆಗಳನ್ನು ಸಲ್ಲಿಸು. ದೇವರ ಅನುಗ್ರಹ ನಿಮ್ಮೆಲ್ಲರಲ್ಲಿ ಇರಲಿ !

· © 2017 kannadacatholicbible.org Privacy Policy