1 : ಯಥಾರ್ಥ ಪ್ರೀತಿಗೆ ಪಾತ್ರನಾದ ಗಾಯನಿಗೆ - ಸಭೆಯ ಹಿರಿಯನಾದ ನಾನು ಬರೆಯುವ ಪತ್ರ:
2 : ಪ್ರಿಯನೇ, ಎಲ್ಲಾ ವಿಷಯಗಳಲ್ಲಿ ನಿನಗೆ ಶುಭವನ್ನು ಕೋರುತ್ತೇನೆ; ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. ಆತ್ಮದ ವಿಷಯದಲ್ಲಿ ನೀನು ಅಭಿವೃದ್ಧಿಗೊಳ್ಳುತ್ತಿರುವೆ ಎಂದು ನಂಬಿದ್ದೇನೆ.
3 : ನೀನು ಸತ್ಯದಲ್ಲಿ ನಿಷ್ಠಾವಂತನಾಗಿದ್ದು, ಸನ್ಮಾರ್ಗದಲ್ಲಿ ನಡೆಯುತ್ತಿರುವುದಾಗಿ ಕೆಲವು ಸಹೋದರರು ಇಲ್ಲಿಗೆ ಬಂದು ತಿಳಿಸಿದಾಗ ನನಗಾದ ಆನಂದ ಅಷ್ಟಿಷ್ಟಲ್ಲ.
4 : ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರ ಗ್ರಂಥದಲ್ಲಿ ಲಿಖಿತವಾಗಿದೆ.
5 : ಪ್ರಿಯನೇ, ಸಹೋದರರಿಗೆ - ಮುಖ್ಯವಾಗಿ ಅಪರಿಚಿತರಿಗೆ ಸತ್ಕಾರ್ಯವನ್ನು ಮಾಡುವುದರಲ್ಲಿ ನೀನು ತುಂಬಾ ನಿಷ್ಠಾವಂತನು.
6 : ಇಲ್ಲಿಯ ಸಭೆಯ ಮುಂದೆ ಅವರೇ ನಿನ್ನ ಪ್ರೀತ್ಯಾದರವನ್ನು ಪ್ರಶಂಶಿಸಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವ ರೀತಿಯಲ್ಲಿ ನೀನು ನೆರವಾಗಬೇಕು.
7 : ವರು ಈ ಸಂಚಾರವನ್ನು ಕೈಗೊಂಡಿರುವುದು ಕ್ರಿಸ್ತಯೇಸುವಿನ ಸೇವೆಗಾಗಿಯೆ. ಅನ್ಯಧವರ್ಿೂಯರಿಂದ ಅವರು ಯಾವ ಸಹಾಯವನ್ನೂ ಸ್ವೀಕರಿಸುವವರಲ್ಲ. ಆದ್ದರಿಂದ, ಇಂಥವರಿಗೆ ನಾವು ನೆರವಾಗಲೇಬೇಕು.
8 : ಹೀಗೆ ಸತ್ಯಕ್ಕಾಗಿ ದುಡಿಯುವವರೊಂದಿಗೆ ನಾವು ಸಹಕರಿಸಬೇಕು.
9 : ನಾನು ನಿಮ್ಮ ಸಭೆಗೆ ಚಿಕ್ಕ ಪತ್ರವೊಂದನ್ನು ಬರೆದಿದ್ದೇನೆ. ಆದರೆ ಅಲ್ಲಿಯ ಸಭೆಗೆ ಮುಖಂಡನಾಗ ಬಯಸುತ್ತಿರುವ ದಿಯೊತ್ರೇಫನು ನನ್ನ ಮಾತನ್ನು ಗೌರವಿಸುತ್ತಿಲ್ಲ.
10 : ನಾನು ಬಂದಾಗ, ಅವನು ಮಾಡುತ್ತಿರುವುದನ್ನೆಲ್ಲಾ ಹೊರಗೆಡಹುತ್ತೇನೆ. ನಮ್ಮ ವಿರುದ್ಧ ಅವನು ಅಪಪ್ರಚಾರ ಮಾಡುತ್ತಾ ಹರಟೆಕೊಚ್ಚುತ್ತಿದ್ದಾನೆ. ಸಾಲದೆಂದು, ಸಹೋದರರನ್ನು ಸ್ವಾಗತಿಸಲು ನಿರಾಕರಿಸುತ್ತಿದ್ದಾನೆ. ಹಾಗೆ ಸ್ವಾಗತಿಸಬಯಸುವವರನ್ನು ನಿರ್ಬಂಧಿಸಿ ಸಭೆಯಿಂದ ಬಹಿಷ್ಕರಿಸುತ್ತಿದ್ದಾನೆ.
11 : ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನೇ ಅನುಸರಿಸಿ ನಡೆ. ಒಳಿತನ್ನು ಮಾಡುವವನು ದೇವರಿಗೆ ಸೇರಿದವನು. ಕೆಡುಕನ್ನು ಮಾಡುವವನು ದೇವರನ್ನು ಕಾಣದವನು.
12 : ದೆಮೇತ್ರಿಯನ ವಿಷಯದಲ್ಲಿ ಎಲ್ಲರೂ ಒಳ್ಳೆಯದನ್ನೇ ಹೇಳುತ್ತಾರೆ. ಸತ್ಯವೂ ಅವನ ಪರವಾಗಿದೆ. ನಾವು ಅವನ ಬಗ್ಗೆ ಸಾಕ್ಷಿ ಹೇಳಬಲ್ಲೆವು. ನಮ್ಮ ಸಾಕ್ಷ್ಯ ಸತ್ಯವೆಂದು ನೀನು ಬಲ್ಲೆ.
13 : ನಾನು ನಿನಗೆ ತಿಳಿಸಬೇಕಾದುದು ಇನ್ನು ಎಷ್ಟೋ ಇದೆ. ಕಾಗದಪತ್ರಗಳ ಮೂಲಕ ತಿಳಿಸಲು ನನಗಿಷ್ಟವಿಲ್ಲ.
14 : ಸದ್ಯದಲ್ಲೇ ನಿನ್ನನ್ನು ಕಾಣುವ ನಿರೀಕ್ಷೆ ನನಗಿದೆ. ಆಗ ನಾವು ಮುಖಾಮುಖಿಯಾಗಿ ಮಾತಾಡಬಹುದು.
15 : ಶಾಂತಿಸಮಾಧಾನ ನಿನ್ನಲ್ಲಿರಲಿ ! ಮಿತ್ರರೆಲ್ಲರೂ ನಿನಗೆ ವಂದನೆ ಹೇಳಿದ್ದಾರೆ. ಅಲ್ಲಿರುವ ಪ್ರತಿಯೊಬ್ಬ ಮಿತ್ರನಿಗೂ ನಮ್ಮ ವಂದನೆಗಳನ್ನು ತಿಳಿಸು.