Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ಪ್ರಕಟನೆ


1 : ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.
2 : ಇದಲ್ಲದೆ, ಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತು; ಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧ, ಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರು; ಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು.
3 : ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ: “ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ
4 : ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ನಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”
5 : ಇವುಗಳಾದ ಮೇಲೆ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದ ದೇವಾಲಯವು ತೆರೆದಿತ್ತು. ದೈವಪ್ರಸನ್ನತೆಯ ಗುಡಾರವು ಅದರೊಳಗಿತ್ತು.
6 : ಏಳು ವಿಪತ್ತುಗಳನ್ನು ಹಿಡಿದಿದ್ದ ಏಳು ದೇವದೂತರು ಈ ದೇವಾಲಯದಿಂದ ಹೊರಗೆ ಬಂದರು. ಅವರು ಶುಭ್ರವಾದ ಮತ್ತು ಹೊಳೆಯುವ ಉಡುಪುಗಳನ್ನು ತೊಟ್ಟಿದ್ದರು; ಎದೆಗಳಿಗೆ ಚಿನ್ನದ ಪಟ್ಟಿಗಳನ್ನು ಕಟ್ಟಿಕೊಂಡು ಇದ್ದರು.
7 : ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ಮಂದಿ ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು. ಆ ಪಾತ್ರೆಗಳಲ್ಲಿ ಯುಗಯುಗಾಂತರಕ್ಕೂ ಜೀವಿಸುವ ದೇವರ ರೋಷವು ತುಂಬಿತುಳುಕುತ್ತಿತ್ತು.
8 : ದೇವರ ಸಾನ್ನಿಧ್ಯದ ತೇಜಸ್ಸು ಮತ್ತು ಪ್ರಭಾವಗಳು ದೇವಾಲಯವನ್ನು ಧೂಮದಿಂದ ತುಂಬಿದವು. ಇದರಿಂದಾಗಿ, ಆ ಏಳು ದೇವದೂತರು ತಂದ ಏಳು ವಿಪತ್ತುಗಳು ಮುಗಿಯುವ ತನಕ ಆ ದೇವಾಲಯವನ್ನು ಪ್ರವೇಶಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.
12 : ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರೆಟಿಸ್ ಎಂಬ ಮಹಾನದಿಯ ಮೇಲೆ ಸುರಿದನು. ಕೂಡಲೇ ಅದರ ನೀರು ಬತ್ತಿಹೋಯಿತು. ಇದರ ಪರಿಣಾಮವಾಗಿ ಪೂರ್ವ ದೇಶದ ರಾಜರು ಬರುವುದಕ್ಕೆ ಮಾರ್ಗವಾಯಿತು.

· © 2017 kannadacatholicbible.org Privacy Policy