1 : ನೋಹನ ಮಕ್ಕಳಾದ ಶೇಮ್, ಹಾಮ್ ಮತ್ತು ಯೆಫೆತರಿಗೆ ಜಲಪ್ರಳಯ ಮುಗಿದ ಮೇಲೆ ಮಕ್ಕಳಾದರು. ಅವರ ವಂಶಾವಳಿ ಇದು:
2 : ಯೆಫೆತನ ಮಕ್ಕಳು ಇವರು - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್.
3 : ಗೋಮೆರನ ಮಕ್ಕಳು ಅಷ್ಕೆನಸ್, ರೀಫತ್ ಮತ್ತು ತೋಗರ್ಮ.
4 : ಯಾವಾನನ ಮಕ್ಕಳು - ಎಲಿಷಾ, ಸ್ಪೇಯಿನ್ (ತಾರ್ಷಿಸ್), ಸೈಪ್ರಸ್ (ಕಿತ್ತೀಮ್), ಮತ್ತು ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವುಗಳಲ್ಲಿ ಹರಡಿಕೊಂಡರು.
5 : ದೇಶ - ಭಾಷಾ - ಕುಲ - ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.
6 : ಹಾಮನ ಮಕ್ಕಳು ಯಾರೆಂದರೆ - ಕೂಷ್, ಈಜಿಪ್ಟ್ (ಮಿಚ್ರಯಿಮ್), ಲಿಬಿಯಾ (ಪೂತ್) ಮತ್ತು ಕಾನಾನ್ ಎಂಬುವರು.
7 : ಕೂಷನ ಮಕ್ಕಳು - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬ ಜನಾಂಗಗಳು. ರಗ್ಮ ಸಂತಾನದವರು - ಶೆಬಾ, ದೆದಾನ್ ಎಂಬ ಜನಾಂಗಗಳು.
8 : ಕೂಷನು ನಿಮ್ರೋದನನ್ನು ಪಡೆದನು. ಇವನೇ ಪರಾಕ್ರಮದಲ್ಲಿ ಮೊದಲನೆಯ ಭೂರಾಜ,
9 : ದೇವರ ದೃಷ್ಟಿಯಲ್ಲಿ ದಿಟ್ಟ ಬೇಟೆಗಾರ. “ಪ್ರಭು ನಿನ್ನನ್ನು ನಿಮ್ರೋದನಂಥ ದಿಟ್ಟ ಬೇಟೆಗಾರನಾಗಿಸಲಿ” ಎಂಬ ನಾಣ್ನುಡಿ ಇಂದಿಗೂ ಇದೆ.
10 : ಬಾಬಿಲೋನಿಯ (ಶಿನಾರ್) ನಾಡಿನಲ್ಲಿರುವ ಯೆರೆಕ್, ಅಕ್ಕದ್, ಬಾಬಿಲೋನ್ ಕಲ್ನೇ ಈ ಎಲ್ಲ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.
11 : ಅವನು ಆ ನಾಡಿನಿಂದ ಹೊರಟು ಅಸ್ಸೀರಿಯಾ ನಾಡಿಗೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ
12 : ನಿನೆವೆಗೂ ಮಹಾ ಪಟ್ಟಣವಾದ ಕೆಲಹಕ್ಕೂ ನಡುವೆ ಇರುವ ರೆಸೆನ್ ಪಟ್ಟಣವನ್ನೂ ಕಟ್ಟಿಸಿದನು.
13 : ಈಜಿಪ್ಟ್ (ಮಿಚ್ರಯಿಮ್) ನವರಿಂದ ಲಿಡ್ಯರೂ ಅನಾಮ್ಯರೂ ಲೆಹಾಬ್ಯರೂ ನಪ್ತುಹ್ಯರೂ ಪತ್ರುಸ್ಯರೂ
14 : ಕಸ್ಲುಹ್ಯರೂ ಕೆಪ್ತೋರ್ಯರೂ ಹುಟ್ಟಿದರು. ಕಸ್ಲುಹ್ಯರಿಂದ ಬಂದವರು ಫಿಲಿಷ್ಟಿಯರು.
15 : ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೊನ್; ಆಮೇಲೆ ಹೇತ್ ಹುಟ್ಟಿದನು.
16 : ಇದಲ್ಲದೆ ಯೆಬೂಸಿಯರೂ ಅಮೋರಿಯರೂ ಗಿರ್ಗಾಷಿಯರೂ
18 : ಅರ್ವಾದಿಯರೂ ಚೆಮಾರಿಯರೂ ಹಮಾತಿಯರೂ ಕಾನಾನನಿಂದ ಹುಟ್ಟಿದರು. ಕಾಲಕ್ರಮೇಣ ಈ ಕಾನಾನ್ ಕುಲಗಳವರು ಹರಡಿಕೊಂಡರು.
19 : ಕಾನಾನ್ಯರ ನಾಡು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿ ಇರುವ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಆದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿದ್ದ ಲೆಷಾ ಊರಿನವರೆಗೂ ಹಬ್ಬಿತ್ತು.
20 : ಕುಲ - ಭಾಷಾ - ದೇಶ - ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು.
21 : ಹಿಬ್ರಿಯರೆಲ್ಲರಿಗೆ ಮೂಲಪುರುಷನೂ ಯೆಫೆತನ ಅಣ್ಣನೂ ಆಗಿದ್ದ ಶೇಮನಿಗು ಸಹ ಮಕ್ಕಳಾದರು.
22 : ಶೇಮನ ಮಕ್ಕಳು ಇವರು - ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್ ಮತ್ತು ಆರಾಮ್.
23 : ಆರಾಮ್ ಸಂತಾನದವರು - ಊಸ್, ಹೂಲ್, ಗೆತೆರ್ ಮತ್ತು ಮಷ್.
24 : ಅರ್ಪಕ್ಷದನಿಂದ ಶೆಲಹನೂ ಶೆಲಹನಿಂದ ಎಬರನೂ ಹುಟ್ಟಿದರು.
25 : ಎಬರನಿಗೆ ಇಬ್ಬರು ಮಕ್ಕಳು. ಒಬ್ಬನಿಗೆ ಪೆಲೆಗೆಂಬ ಹೆಸರು. ಇವನ ಕಾಲದಲ್ಲೇ ಭೂಜನದ ವಿಭಜನೆ ಆದುದು. ಅವನ ತಮ್ಮನ ಹೆಸರು ಯೊಕ್ತಾನ್.
26 : ಯೊಕ್ತಾನನ ಮಕ್ಕಳು ಇವರು - ಆಲ್ಮೋದಾದ್, ಶೆಲಿಪ್, ಹಜರ್ಮಾವೆತ್, ಯೆರೆಹ,
27 : ಹದೋರಾಮ್, ಊಜಾಲ್, ದೀಕ್ಲಾ,
28 : ಓಬಾಲ್, ಅಬೀಮಯೇಲ್, ಶೆಬಾ,
29 : ಓಫೀರ್, ಹವೀಲ, ಯೋಬಾಬ್ ಎಂಬ ಸ್ಥಳಗಳವರು. ಈ ಕುಲಗಳೆಲ್ಲ ಯೋಕ್ತಾನನಿಂದ ಹುಟ್ಟಿದವು.
30 : ಇವರ ನಿವಾಸವು ಮೇಶಾ ನಾಡು ಮೊದಲುಗೊಂಡು ಪೂರ್ವಕ್ಕಿರುವ ಸೆಫಾರ್ ಎಂಬ ಬೆಟ್ಟದವರೆಗೂ ಹರಡಿತ್ತು.
31 : ಕುಲ, ಭಾಷೆ, ಜನಾಂಗಗಳ ಪ್ರಕಾರ ಇವರೇ ಶೇಮನ ವಂಶದವರು.
32 : ಸಂತತಿ - ಜನಾಂಗಗಳ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ.