Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ಯೆಹೋಶುವ


1 : ನಾಡೆಲ್ಲವು ತಮ್ಮ ವಶವಾದ ಮೇಲೆ ಇಸ್ರಯೇಲ್ ಜನಾಂಗವೆಲ್ಲ ಶಿಲೋವಿನಲ್ಲಿ ಕೂಡಿ ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.
2 : ಇಸ್ರಯೇಲರಲ್ಲಿ ಇನ್ನೂ ಏಳು ಕುಲಗಳಿಗೆ ಪಾಲು ಸಿಕ್ಕಿರಲಿಲ್ಲ.
3 : ಆದುದರಿಂದ ಯೆಹೋಶುವ ಅವರಿಗೆ, “ನಿಮ್ಮ ಪೂರ್ವಜರ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ನಾಡನ್ನು ಸ್ವಾಧೀನ ಮಾಡಿಕೊಳ್ಳಲು ಇನ್ನೆಷ್ಟು ತಡ ಮಾಡುತ್ತಿರುವಿರಿ?
4 : ಪ್ರತಿಯೊಂದು ಕುಲದಿಂದ ಮೂರುಮೂರು ಮಂದಿಯನ್ನು ನೇಮಿಸಿರಿ. ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ನಾಡಿನಲ್ಲೆಲ್ಲಾ ಸಂಚಾರ ಮಾಡಿ ತಮ್ಮ ತಮ್ಮ ಕುಲಗಳಿಗನುಸಾರ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ.
5 : ತರುವಾಯ ಅವರು ಏಳು ಪಾಲುಗಳನ್ನು ಮಾಡಿ ತಮ್ಮ ತಮ್ಮೊಳಗೆ ಹಂಚಿಕೊಳ್ಳಲಿ. ದಕ್ಷಿಣದಲ್ಲಿ ಯೆಹೂದ ಕುಲದವರಿಗೆ ಉತ್ತರದಲ್ಲಿ ಜೋಸೆಫನ ಕುಲದವರಿಗೆ ಸೊತ್ತು ಸಿಕ್ಕಿದೆ. ಅದು ಅವರಿಗೇ ಇರಲಿ.
6 : ನೀವು ನಾಡನ್ನು ಏಳು ಪಾಲಾಗಿ ವಿಂಗಡಿಸಿ ನನ್ನ ಬಳಿಗೆ ತರಬೇಕು. ನಾನು ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ನಿಮಗೋಸ್ಕರ ಚೀಟು ಹಾಕುತ್ತೇನೆ.
7 : ಲೇವಿಯರಿಗೆ ನಿಮ್ಮ ಹಾಗೆ ಪಾಲು ಸಿಕ್ಕುವುದಿಲ್ಲ, ಸರ್ವೇಶ್ವರನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸೊತ್ತು. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧ ಜನರಿಗೂ ಜೋರ್ಡನಿನ ಪೂರ್ವದಿಕ್ಕಿನಲ್ಲಿ ಸರ್ವೇಶ್ವರನ ದಾಸ ಮೋಶೆಯಿಂದಲೇ ಸೊತ್ತು ಸಿಕ್ಕಿದೆ,” ಎಂದನು.
8 : ನಾಡಿನ ಅಳತೆಯನ್ನು ಮಾಡತಕ್ಕ ಜನರು ಹೊರಡುವುದಕ್ಕೆ ಮುಂಚೆ ಯೆಹೋಶುವನು ಅವರಿಗೆ, “ಹೋಗಿ ನಾಡಿನಲ್ಲೆಲ್ಲಾ ಸಂಚರಿಸಿ ಅಳತೆಮಾಡಿ ನನ್ನ ಬಳಿ ಶೀಲೋವಿಗೆ ತನ್ನಿ. ನಾನು ಸರ್ವೇಶ್ವರನ ಮುಂದೆ ನಿಮಗೋಸ್ಕರ ಚೀಟು ಹಾಕುತ್ತೇನೆ,” ಎಂದು ಹೇಳಿ ಕಳುಹಿಸಿದನು.
9 : ಆ ಜನರು ಹೊರಟು ನಾಡಿನಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಗ್ರಾಮ-ನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನಾಗಿ ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂದಿರುಗಿ ಬಂದರು.
10 : ಯೆಹೋಶುವನು ಶೀಲೋವಿನಲ್ಲಿಯೇ ಸರ್ವೇಶ್ವರನ ಮುಂದೆ ಅವರಿಗೋಸ್ಕರ ಚೀಟು ಹಾಕಿ ನಾಡನ್ನು ಅವರವರ ಪಂಗಡಗಳಿಗೆ ಹಂಚಿಕೊಟ್ಟನು.
11 : ಚೀಟು ಮೊದಲು ಬೆನ್ಯಾವಿೂನ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸೊತ್ತು ಯೆಹೂದಾ ಮತ್ತು ಜೋಸೆಫ್ ವಂಶಸ್ಥರ ಪ್ರಾಂತ್ಯಗಳಿಗೆ ಮಧ್ಯೆಯಿದೆ.
12 : ಅದರ ಉತ್ತರ ದಿಕ್ಕಿನ ಎಲ್ಲೆ ಜೋರ್ಡನ್ ನದಿಯಿಂದ ತೊಡಗಿ ಜೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿಂದ ಪಶ್ಚಿಮಕ್ಕೆ ಹೋಗಿ, ದಿಣ್ಣೆ ಹತ್ತಿ ಬೆತಾವೆನಿನ ಬಯಲಿನಲ್ಲಿ ಕೊನೆಗೊಳ್ಳುತ್ತದೆ.
13 : ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಈಗ ಬೇತೇಲ್ ಎನಿಸಿಕೊಳ್ಳುವ ಲೂಜ್ ಊರಿರುವ ಬೆಟ್ಟಕ್ಕೆ ಹೋಗಿ ಅಲ್ಲಿಂದ ಇಳಿದು ಅಟಾರೋತದ್ದಾರಿನ ಮೇಲೆ ಕೆಲಗಿನ ಬೇತ್ ಹೋರೋನಿನ ಬಳಿಯಲ್ಲಿರುವ ಬೆಟ್ಟಕ್ಕೆ ಹೋಗುತ್ತದೆ.
14 : ಈ ಎಲ್ಲೆಯ ಪಶ್ಚಿಮದ ಮೂಲೆಯಾಗಿರುವ ಈ ಬೆಟ್ಟದಿಂದ ಅದು ದಕ್ಷಿಣಕ್ಕೆ ತಿರುಗಿಕೊಂಡು, ಕಿರ್ಯತ್‍ಬಾಳ್ ಎನಿಸಿಕೊಳ್ಳುತ್ತಿದ್ದ ಯೆಹೂದ್ಯರ ಕಿರ್ಯತ್ಯಾರೀಮ್ ಎಂಬ ನಗರದಲ್ಲಿ ಕೊನೆಗೊಳ್ಳುತ್ತದೆ. ಇದೇ ಅವರ ವಂಶಸ್ಥರ ಪಶ್ಚಿಮದ ಎಲ್ಲೆ.
15 : ದಕ್ಷಿಣದಿಕ್ಕಿನ ಎಲ್ಲೆ ಪಶ್ಚಿಮದ ಮೂಲೆಯಾಗಿರುವ ಕಿರ್ಯತ್ಯಾರೀಮಿನ ಪ್ರಾಂತ್ಯದಿಂದ ತೊಡಗಿ
16 : ನೆಫ್ತೋಹ ಬುಗ್ಗೆಯ ಮೇಲೆ ಬೆನ್‍ಹಿನ್ನೋಮ್ ಕಣಿವೆಯ ಈಚೆಗೂ ರೆಫಾಯಿಮ್ ಕಣಿವೆಯ ಉತ್ತರದಲ್ಲೂ ಇರುವ ಬೆಟ್ಟದ ಅಂಚಿಗೆ ಹೋಗಿ ಅಲ್ಲಿಂದ ಯೆಬೂಸಿಯರ ಬೆಟ್ಟದ ದಕ್ಷಿಣದಲ್ಲಿದ್ದ ಬೆನ್‍ಹಿನ್ನೋಮ್ ಕಣಿವೆಯ ಮಾರ್ಗವಾಗಿ ಏನ್‍ರೋಗೆಲಿಗೆ ಬರುತ್ತದೆ.
17 : ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು, ಇಳಿಯುತ್ತಾ ಏನ್‍ಷೆಮೆಸ್, ವಿೂಮಿನ ದಾರಿಯ ಎದುರಿನಲ್ಲಿರುವ ಗೆಲೀಲೊತ್,
18 : ರೂಬೇನನ ಮಗನಾದ ಬೋಹನನ ಬಂಡೆ, ಅರಾಬಾದ ಉತ್ತರದಲ್ಲಿರುವ ಬೆಟ್ಟ ಇವುಗಳ ಮೇಲೆ ಅರಾಬಾ ಎಂಬ ಕಣಿವೆ ಪ್ರದೇಶಕ್ಕೆ ಹೋಗುತ್ತದೆ.
19 : ಅಲ್ಲಿಂದ ಆ ಎಲ್ಲೆ ಬೇತ್‍ಹೊಗ್ಲಾ ಎಂಬ ಊರಿನ ಉತ್ತರದಲ್ಲಿರುವ ಗುಡ್ಡದ ಮೇಲೆ ಲವಣಸಮುದ್ರದ ಉತ್ತರ ಮೂಲೆಗೆ ಹೋಗಿ ಜೋರ್ಡನ್ ನದಿಯು ಆ ಸಮುದ್ರಕ್ಕೆ ಕೂಡುವ ಸ್ಥಳದಲ್ಲಿ ಮುಗಿಯುತ್ತದೆ. ಇದೇ ದಕ್ಷಿಣದಿಕ್ಕಿನ ಸರಹದ್ದು.
20 : ಅಲ್ಲಿಂದ ಆ ಎಲ್ಲೆ ಬೇತ್‍ಹೊಗ್ಲಾ ಎಂಬ ಊರಿನ ಉತ್ತರದಲ್ಲಿರುವ ಗುಡ್ಡದ ಮೇಲೆ ಲವಣಸಮುದ್ರದ ಉತ್ತರ ಮೂಲೆಗೆ ಹೋಗಿ ಜೋರ್ಡನ್ ನದಿಯು ಆ ಸಮುದ್ರಕ್ಕೆ ಕೂಡುವ ಸ್ಥಳದಲ್ಲಿ ಮುಗಿಯುತ್ತದೆ. ಇದೇ ದಕ್ಷಿಣದಿಕ್ಕಿನ ಸರಹದ್ದು.
20 : ಜೋರ್ಡನ್ ನದಿಯೇ ಅವರ ಪೂರ್ವದಿಕ್ಕಿನ ಸರಹದ್ದು. ಬೆನ್ಯಾವಿೂನ್ ಗೋತ್ರಗಳ ಸೊತ್ತಿನ ಸುತ್ತಣ ಎಲ್ಲೆ ಇದೇ.
21 : ಜೋರ್ಡನ್ ನದಿಯೇ ಅವರ ಪೂರ್ವದಿಕ್ಕಿನ ಸರಹದ್ದು. ಬೆನ್ಯಾವಿೂನ್ ಗೋತ್ರಗಳ ಸೊತ್ತಿನ ಸುತ್ತಣ ಎಲ್ಲೆ ಇದೇ.
21 : ಬೆನ್ಯಾವಿೂನ್ ಗೋತ್ರಗಳಿಗೆ ದೊರಕಿದ ನಗರಗಳು ಯಾವುವೆಂದರೆ: ಜೆರಿಕೊ, ಬೇತ್ ಹೊಗ್ಲಾ, ಏಮೆಕ್ಕೆಚ್ಚೀಚ್, ಬೇತ್‍ಅರಾಬಾ,
22 : ಚಮಾರಯಿಮ್, ಬೇತೇಲ್, ಅವ್ವೀಮ್, ಪಾರಾ,
23 : ಒಫ್ರಾ, ಅಮ್ಮೋನ್ಯ, ಕೆಫೆರ್, ಒಫ್ನೀ, ಗೆಬಾ
24 : ಎಂಬ ಹನ್ನೆರಡು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು;
25 : ಮಿಚ್ಫೆ, ಕೆಫೀರಾ, ಮೋಚಾ, ರೆಕೆಮ್, ಇರ್ಪೇಲ್, ತರಲಾ, ಚೇಲ,
25 : ಗಿಬ್ಯೋನ್, ರಾಮಾ, ಬೇರೋತ್,
26 : ಮಿಚ್ಫೆ, ಕೆಫೀರಾ, ಮೋಚಾ, ರೆಕೆಮ್,
27 : ಇರ್ಪೇಲ್, ತರಲಾ, ಚೇಲ,
28 : ಎಲೆಫ್, ಯೆಬೂಸಿಯರು ಇದ್ದಂಥ ಜೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ನಗರಗಳೂ ಮತ್ತು ಅವುಗಳಿಗೆ ಸೇರಿದ ಗ್ರಾಮಗಳು. ಬೆನ್ಯಾವಿೂನ್ ಗೋತ್ರಗಳಿಗೆ ದೊರಕಿದ ಆಸ್ತಿಪಾಸ್ತಿ ಇವೇ.

· © 2017 kannadacatholicbible.org Privacy Policy