1 : ಲೇವಿ ಕುಲಾಧಿಪತಿಗಳು ಕಾನಾನ್ ನಾಡಿನ ಶೀಲೋವಿನಲ್ಲಿದ್ದ ಯಾಜಕ ಎಲ್ಲಾಜಾರ್, ನೂನನ ಮಗ ಯೆಹೋಶುವ ಮತ್ತು ಇಸ್ರಯೇಲ್ ಕುಲಾಧಿಪತಿಗಳ ಬಳಿಗೆ ಬಂದರು.
2 : “ನಮ್ಮ ನಿವಾಸಕ್ಕೆ ನಗರಗಳನ್ನೂ ನಮ್ಮ ಪಶು ಪ್ರಾಣಿಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಆಜ್ಞಾಪಿಸಿದ್ದಾರಲ್ಲವೆ?” ಎಂದು ವಿನಂತಿಸಿದರು.
3 : ಸರ್ವೇಶ್ವರನ ಆಜ್ಞೆಯಂತೆಯೇ ಅವರಿಗೆ ಸೊತ್ತಾಗಿ ಈ ಕೆಳಕಂಡ ನಗರಗಳನ್ನೂ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಡಲಾಯಿತು.
4 : ಕೆಹಾತ್ಯರಿಗಾಗಿ ಚೀಟು ಹಾಕಿದಾಗ ಆರೋನನ ವಂಶದವರಾದ ಲೇವಿಯರಿಗೆ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾವಿೂನ್ ಕುಲಗಳಿಂದ ಹದಿಮೂರು ನಗರಗಳು ದೊರಕಿದವು.
5 : ಮಿಕ್ಕ ಕೆಹಾತ್ಯರಿಗೆ ಎಫ್ರಯಿಮ್ ಹಾಗೂ ದಾನ್ ಕುಲಗಳಿಂದ ಮತ್ತು ಮನಸ್ಸೆಯ ಅರ್ಧ ಕುಲಗಳಿಂದ ಹತ್ತುನಗರಗಳು ಸಿಕ್ಕಿದವು.
6 : ಮತ್ತೆ ಚೀಟು ಹಾಕಿದಾಗ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಕುಲದಿಂದ ಹದಿಮೂರು ನಗರಗಳು ದೊರೆತವು.
7 : ಮೆರಾರಿ ಗೋತ್ರದವರಿಗೆ ರೂಬೇನ್, ಗಾದ್ ಹಾಗೂ ಜೆಬುಲೂನ್ ಕುಲಗಳಿಂದ ಹನ್ನೆರಡು ನಗರಗಳು ಸಿಕ್ಕಿದವು.
8 : ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ ಇಸ್ರಯೇಲರು ಚೀಟುಹಾಕಿ ಲೇವಿಯರಿಗೆ ಇಷ್ಟು ನಗರಗಳನ್ನೂ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು.
9 : ಲೇವಿಕುಲದವರು ಹಾಗೂ ಕೆಹಾತನ ಗೋತ್ರದವರು ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದ್ದಿತು.
10 : ಆದ್ದರಿಂದ ಇಸ್ರಯೇಲರು ಅವರಿಗೆ ಯೆಹೂದ ಮತ್ತು ಸಿಮೆಯೋನ ಕುಲಗಳಿಂದ ಕೆಳಗೆ ಹೇಳಿರುವ ನಗರಗಳನ್ನು ಕೊಟ್ಟರು.
11 : ಇವುಗಳಲ್ಲಿ ಯೆಹೂದ ಮಲೆನಾಡಿನ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯತರ್ಬ ಎಂದರೆ ಅನಾಕನ ತಂದೆಯಾದ ಅರ್ಬನನಗರ).
12 : ಆದರೆ ಇದಕ್ಕೆ ಸೇರಿದ ಹೊಲಗಳನ್ನು ಮತ್ತು ಗ್ರಾಮಗಳನ್ನು ಯೆಫುನ್ನೆಯ ಮಗ ಕಾಲೇಬನಿಗೆ ಕೊಟ್ಟರು.
13 : ಯಾಜಕ ಆರೋನನ ವಂಶದವರಿಗೆ ಮೇಲೆ ಹೇಳಿದ ಎರಡು ಕುಲಗಳಿಂದ ಹೆಬ್ರೋನ್ ಎಂಬ ಆಶ್ರಯ ನಗರ
14 : ಲಿಬ್ನಾ, ಯತ್ತೀರ್, ಎಷ್ಟೆಮೋಹ,
15 : ಹೋಲೋನ್, ದೆಬೀರ್, ಅಯಿನ್, ಯುಟ್ಟಾ, ಬೇತ್‍ಷೆಮೆಷ್
16 : ಎಂಬ ಒಂಬತ್ತು ಗೋಮಾಳ ಸಹಿತವಾದ ನಗರಗಳು
17 : ಹಾಗೂ ಬೆನ್ಯಾವಿೂನ್ ಕುಲದಿಂದ
18 : ಗಿಬ್ಯೋನ್, ಗೆಬ, ಅನಾತೋತ್, ಅಲ್ಮೋನ್ ಎಂಬ ನಾಲ್ಕು ಗೋಮಾಳ ಸಹಿತವಾದ ನಗರಗಳು ದೊರೆತವು.
19 : ಯಾಜಕನಾದ ಆರೋನನ ವಂಶದವರ ಪಾಲಿಗೆ ಬಂದಂಥ ಗೋಮಾಳ ಸಹಿತವಾದ ನಗರಗಳು ಹದಿಮೂರು.
20 : ಲೇವಿಯರಾದ ಕೆಹಾತ್ಯರ ಉಳಿದ ಕುಟುಂಬಗಳಿಗೆ
21 : ಎಫ್ರಯಿಮ್ ಸೊತ್ತಿನಿಂದ ಬೆಟ್ಟದಲ್ಲಿರುವ ಶೆಕೆಮೆಂಬ ಆಶ್ರಯನಗರ,
22 : ಗೆಜೆರ್, ಕಿದ್‍ಚೈಮ್ ಹಾಗೂ ಬೇತ್‍ಹೋರೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ನಗರಗಳು,
23 : ದಾನ್ಯರ ಸೊತ್ತಿನಿಂದ ಎಲ್ಲೆಕೇ, ಗಿಬ್ಬೆತೋನ್,
24 : ಅಯ್ಯಾಲೋನ್, ಗತ್‍ರಿಮ್ಮೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,
25 : ಮನಸ್ಸೆಕುಲದ ಅರ್ಧಜನರ ಸೊತ್ತಿನಿಂದ ತಾನಾಕ್, ಗತ್‍ರಿಮ್ಮೋನ್ ಎಂಬ ಎರಡು ಗೋಮಾಳ ಸಹಿತವಾದ ನಗರಗಳು ಚೀಟಿನಿಂದ ದೊರಕಿದವು.
26 : ಒಟ್ಟಾರೆ ಕೆಹಾತ್ಯರಿಗೆ ಸಿಕ್ಕಿದಂಥ ಗೋಮಾಳ ಸಹಿತವಾದ ನಗರಗಳು ಹತ್ತು.
27 : ಗೇರ್ಷೋನ್ಯರ ಕುಟುಂಬಗಳಿಗೆ ಅರ್ಧ ಮನಸ್ಸೆಯವರ ಸೊತ್ತಿನಿಂದ ದೊರಕಿದವುಗಳು ಇವು: ಕೊಲೆ ಮಾಡಿದವನಿಗೆ ಆಶ್ರಯನಗರವಾದ ಬಾಷಾನಿನ ಗೋಲಾನ್, ಬೆಯೆಷ್ಟೆರಾ ಎಂಬ ಗೋಮಾಳ ಸಹಿತವಾದ ಎರಡು ನಗರಗಳು;
28 : ಇಸ್ಸಾಕಾರ್ ಸೊತ್ತಿನಿಂದ ಕಿಷ್ಯೋನ್, ದಾಬೆರತ್, 29ಯರ್ಮೂತ್, ಎಂಗನ್ನೀಮ್ ಎಂಬ ನಾಲ್ಕು ಗೋಮಾಳ ಸಹಿತವಾದ ನಗರಗಳು;
29 : ಯರ್ಮೂತ್, ಎಂಗನ್ನೀಮ್ ಎಂಬ ನಾಲ್ಕು ಗೋಮಾಳ ಸಹಿತವಾದ ನಗರಗಳು;
30 : ಆಶೇರ್ ಕುಲದಿಂದ ಮಿಷಾಲ್, ಅಬ್ದೋನ್,
31 : ಹೆಲ್ಕಾತ್, ರೆಹೋಬ್ ಎಂಬ ನಾಲ್ಕು ಗೋಮಾಳ ಸಹಿತವಾದ ನಗರಗಳು;
32 : ನಫ್ತಾಲಿ ಸೊತ್ತಿನಿಂದ, ಕೊಲೆ ಮಾಡಿದವನಿಗೆ ಆಶ್ರಯನಗರವಾದ ಗಲಿಲೇಯದ ಕೆದೆಷ್, ಹಮ್ಮೋತ್‍ದೋರ್, ಕರ್ತಾನ್ ಎಂಬ ಗೋಮಾಳ ಸಹಿತವಾದ ಮೂರು ನಗರಗಳು.
33 : ಹೀಗೆ ಗೇರ್ಷೋನ್ಯರಿಗೆ ಸಿಕ್ಕಿದ ಗೋಮಾಳ ಸಹಿತವಾದ ಒಟ್ಟು ನಗರಗಳು ಹದಿಮೂರು.
34 : ಮಿಕ್ಕ ಲೇವಿಯರಾದ ಮೆರಾರೀ ಗೋತ್ರದವರಿಗೆ ಜೆಬುಲೂನ್ ಸೊತ್ತಿನಿಂದ ಯೊಕ್ನೆಯಾಮ್, ಕರ್ತಾ,
35 : ದಿಮ್ನಾ ಹಾಗೂ ನಹಲಾಲ್ ಎಂಬ ಗೋಮಾಳ ಸಹಿತವಾದ ನಾಲ್ಕು ನಗರಗಳು;
37 : ಕೆದೇಮೋತ್ ಹಾಗೂ ಮೇಫಾಗತ್ ಎಂಬ ಗೋಮಾಳ ಸಹಿತವಾದ ನಾಲ್ಕು ನಗರಗಳು;
38 : ಗಾದ್ಯರ ಸೊತ್ತಿನಿಂದ ಕೊಲೆಮಾಡಿದವನಿಗೆ ಆಶ್ರಯನಗರವಾಗಿರುವ ಗಿಲ್ಯಾದಿನ ರಾಮೋತ್, ಮಹನಯಿಮ್,
39 : ಹೆಷ್ಬೋನ್ ಹಾಗು ಯಗ್ಜೇರ್ ಎಂಬ ಗೋಮಾಳ ಸಹಿತವಾದ ನಾಲ್ಕು ನಗರಗಳು ಸಿಕ್ಕಿದವು.
40 : ಮಿಕ್ಕ ಲೇವಿಯರಾದ ಮೆರಾರೀ ಗೋತ್ರಗಳಿಗೆ ಚೀಟಿನಿಂದ ಹೀಗೆ ದೊರೆತ ನಗರಗಳು ಒಟ್ಟು ಹನ್ನೆರಡು.
41 : ಲೇವಿಯರಿಗೆ ಇಸ್ರಯೇಲರ ನಡುವೆ ದೊರಕಿದ ಗೋಮಾಳ ಸಹಿತವಾದ ನಗರಗಳು ಒಟ್ಟು ನಾಲ್ವತ್ತೆಂಟು.
42 : ಈ ನಗರಗಳಲ್ಲಿ ಪ್ರತಿ ಒಂದಕ್ಕೂ ಗೋಮಾಳವಿರುತ್ತದೆ. ಎಲ್ಲ ನಗರಗಳಲ್ಲೂ ಹೀಗೆಯೇ ಇದೆ.
43 : ಸರ್ವೇಶ್ವರಸ್ವಾಮಿ ಇಸ್ರಯೇಲರ ಪೂರ್ವಜರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಹೀಗೆ ಅವರಿಗೆ ಕೊಟ್ಟರು. ಇಸ್ರಯೇಲರು ಅದನ್ನು ವಶಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.
44 : ಸರ್ವೇಶ್ವರ ಅವರ ಪೂರ್ವಜರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲೆಡೆಯಲ್ಲೂ ಶಾಂತಿಸಮಾಧಾನವನ್ನು ಅನುಗ್ರಹಿಸಿದರು. ಶತ್ರುಗಳಾರು ಅವರನ್ನು ಪ್ರತಿಭಟಿಸಿ ನಿಲ್ಲಲಿಲ್ಲ. ಎಲ್ಲರೂ ಅವರ ಕೈವಶವಾದರು.
45 : ಸರ್ವೇಶ್ವರ ಇಸ್ರಯೇಲರಿಗೆ ಮಾಡಿದ ಅತ್ಯುನ್ನತ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ. ಎಲ್ಲವೂ ನೆರವೇರಿದವು.