1 : ಇಸ್ರಯೇಲಿನ ಜನರೆಲ್ಲರೂ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದರು. “ನೀವು ನಮ್ಮ ರಕ್ತಸಂಬಂಧಿ.
2 : ಅರಸ ಸೌಲ ನಮ್ಮನ್ನು ಆಳುತ್ತಿದ್ದಾಗ ನೀವು ಇಸ್ರಯೇಲರ ದಳಪತಿಯಾಗಿ ಯುದ್ಧ ನಡೆಸಿದಿರಿ. ನಮ್ಮ ದೇವರಾದ ಸರ್ವೇಶ್ವರ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗುವೆ,’ ಎಂದು ವಾಗ್ದಾನ ಮಾಡಿದ್ದು ನಿಮ್ಮನ್ನು ಕುರಿತೇ” ಎಂದು ಹೇಳಿ ವಂದಿಸಿದರು.
3 : ಹೀಗೆ ಇಸ್ರಯೇಲಿನ ನಾಯಕರೆಲ್ಲರೂ ಹೆಬ್ರೋನಿನಲ್ಲಿ ಅರಸ ದಾವೀದನ ಬಳಿಗೆ ಬಂದು ಬಿನ್ನವಿಸಿದರು. ದಾವೀದನು ಅವರೊಂದಿಗೆ ಸರ್ವೇಶ್ವರನ ಸನ್ನಿಧಿಯಲ್ಲಿ ಒಂದು ಒಪ್ಪಂದ ಮಾಡಿಕೊಂಡನು. ಅವರು ಅವನನ್ನು ಅಭಿಷೇಕಿಸಿದರು. ಹೀಗೆ ಸರ್ವೇಶ್ವರ ಸಮುವೇಲನ ಮುಖಾಂತರ ಮಾಡಿದ ವಾಗ್ದಾನ ನೆರವೇರಿತು; ದಾವೀದನು ಇಸ್ರಯೇಲರ ಅರಸನಾದನು.
4 : ಆ ಕಾಲದಲ್ಲಿ ಜೆರುಸಲೇಮ್ ಪಟ್ಟಣವನ್ನು ‘ಯೆಬೂಸ’ ಎಂದು ಕರೆಯಲಾಗುತ್ತಿತ್ತು. ಅಲ್ಲಿಯ ಮೂಲನಿವಾಸಿಗಳಾದ ಯೆಬೂಸಿಯರು ಆ ಪ್ರದೇಶದಲ್ಲಿ ಇನ್ನೂ ವಾಸಿಸುತ್ತಿದ್ದರು. ಅರಸ ದಾವೀದನೂ ಎಲ್ಲಾ ಇಸ್ರಯೇಲರೂ ಜೆರುಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿದರು.
5 : ದಾವೀದನು ಪಟ್ಟಣದೊಳಗೆ ಪ್ರವೇಶಿಸಲು ಎಂದಿಗೂ ಸಾಧ್ಯವಿಲ್ಲವೆಂದು ಯೆಬೂಸಿಯರು ಹೇಳಿದ್ದರು. ಆದರೂ ದಾವೀದನು ಪಟ್ಟಣವನ್ನು ಪ್ರವೇಶಿಸಿ ಸಿಯೋನ್ ಕೋಟೆಯನ್ನು ವಶಪಡಿಸಿಕೊಂಡನು. ಅದು ‘ದಾವೀದ್ ನಗರ’ ಎಂದು ಹೆಸರು ಪಡೆಯಿತು.
6 : ‘ಯೆಬೂಸಿಯರಲ್ಲಿ ಒಬ್ಬನನ್ನು ಯಾರು ಮೊದಲು ಕೊಲ್ಲುವನೋ ಅವನು ನನ್ನ ದಳಪತಿಯಾಗುವನು’ ಎಂದು ದಾವೀದ ಪ್ರಕಟಿಸಿದ್ದನು. ಜೆರೂಯಳ ಮಗ ಯೋವಾಬನು ಯುದ್ಧದಲ್ಲಿ ಮುಂದೆ ಹೋಗಿ ಸೇನಾಪತಿಯಾದನು.
7 : ಆ ಕೋಟೆಯನ್ನು ದಾವೀದನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡದ್ದರಿಂದ ಅದಕ್ಕೆ ‘ದಾವೀದ್ ನಗರ’ ಎಂದು ಹೆಸರಾಯಿತು.
8 : ಗುಡ್ಡದ ಪೂರ್ವದಿಕ್ಕಿನ ಸ್ಥಳವನ್ನು ಮಟ್ಟಮಾಡಿ ಪಟ್ಟಣವನ್ನು ಪುನಃ ಕಟ್ಟಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಜೀರ್ಣೋದ್ಧಾರ ಮಾಡಿದನು.
9 : ಸರ್ವಶಕ್ತ ಸರ್ವೇಶ್ವರಸ್ವಾಮಿ ದಾವೀದನೊಂದಿಗೆ ಇದ್ದುದರಿಂದ ಅವನು ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದಿದನು.
10 : ದಾವೀದನ ಸುಪ್ರಸಿದ್ಧ ರಣವೀರರ ಪಟ್ಟಿ ಇದು: ಸರ್ವೇಶ್ವರ ಮಾಡಿದ ವಾಗ್ದಾನಕ್ಕೆ ಅನುಗುಣವಾಗಿ ದಾವೀದನು ಅರಸನಾಗಲು ಇತರ ಇಸ್ರಯೇಲರೊಂದಿಗೆ ಸಹಾಯ ಮಾಡಿದವರು ಹಾಗೂ ಅವನ ರಾಜ್ಯ ಶಕ್ತಿಯುತವಾಗಿರುವಂತೆ ಮಾಡಿದವರು ಇವರು:
11 : ಹಕ್ಮೋನ ಗೋತ್ರದ ಯಾಷೋಬ್ಬಾಮ ಮೊದಲನೆಯವರು. ಇವನು ‘ಮೂವರು ಪ್ರಮುಖ ವೀರರು’ ಎಂಬ ಪಡೆಯ ನಾಯಕ. ಇವನು ತನ್ನ ಈಟಿಯಿಂದ ಮುನ್ನೂರು ಜನರ ಮೇಲೆ ಹೋರಾಡಿ ಅವರೆಲ್ಲರನ್ನೂ ಒಂದೇ ಕಾಳಗದಲ್ಲಿ ಕೊಂದುಹಾಕಿದನು.
12 : ಪ್ರಸಿದ್ದರಾದ ‘ಮೂವರು ಪ್ರಮುಖರು’ ಎಂಬ ಪಡೆಯಲ್ಲಿ ಎರಡನೆಯವನು ಅಹೋಹ್ಯ ಗೋತ್ರದ ದೋದೋ ಎಂಬವನ ಮಗ ಎಲ್ಲಾಜಾರನು.
13 : ಈತ ಪಸ್ದಮ್ಮೀಮಿ ಎಂಬಲ್ಲಿ ಫಿಲಿಷ್ಟಿಯರಿಗೆ ವಿರುದ್ಧ ಹೂಡಿದ ಕಾಳಗದಲ್ಲಿ ದಾವೀದನ ಪರವಾಗಿ ಹೋರಾಡಿದನು. ಇಸ್ರಯೇಲರು ಹಿಂಜರಿದು ಓಡಿ ಹೋಗುತ್ತಿದ್ದಾಗ ಇವನು ಜವೆಗೋದಿಯ ಹೊಲದಲ್ಲಿ ಇದ್ದನು.
14 : ಲೇವಿಯರು ಸರ್ವೇಶ್ವರನಿಗೆ ಯಾಜಕ ಸೇವೆಮಾಡದಂತೆ ಯಾರೊಬ್ಬಾಮನು ಮತ್ತು ಅವನ ಮಕ್ಕಳು ಅವರನ್ನು ಬಹಿಷ್ಕರಿಸಿ ಇದ್ದರು.
15 : ಅದುಲ್ಲಾಮ್ ಗವಿಯ ಹತ್ತಿರ ದಾವೀದನು ವಾಸಿಸುತ್ತಿದ್ದಾಗ, ಮೂವತ್ತು ಪ್ರಮುಖ ರಣವೀರರಲ್ಲಿ ಮೂವರು ಒಂದು ದಿನ ಒಂದು ಬಂಡೆಯ ಬಳಿಗೆ ಹೋದರು. ಅಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ಕೊಳ್ಳದಲ್ಲಿ ಬೀಡು ಬಿಟ್ಟದ್ದನ್ನು ಕಂಡರು.
16 : ಆ ಸಮಯದಲ್ಲಿ ದಾವೀದನು ಭದ್ರವಾದ ದಿಣ್ಣೆಯ ಮೇಲಿದ್ದನು. ಫಿಲಿಷ್ಟಿಯರು ಬೆತ್ಲೆಹೇಮನ್ನು ವಶಪಡಿಸಿಕೊಂಡಿದ್ದರು.
17 : ದಾವೀದನು ತನ್ನೂರನ್ನು ಜ್ಞಾಪಿಸಿಕೊಂಡು ಅಸ್ವಸ್ಥನಾಗಿ ‘ಬೆತ್ಲೆಹೇಮಿನ ದ್ವಾರದ ಬಳಿಯಿರುವ ಬಾವಿಯಿಂದ ನನಗೆ ಕುಡಿಯಲು ಯಾರಾದರೂ ನೀರನ್ನು ತಂದುಕೊಡಬಲ್ಲಿರೋ!’ ಎಂದು ತನ್ನ ಅಪೇಕ್ಷೆಯನ್ನು ವ್ಯಕ್ತಪಡಿಸಿದನು.
18 : ಪ್ರಸಿದ್ಧರಾದ ಮೂವರು ರಣವೀರರು ಫಿಲಿಷ್ಟಿಯರ ಪಾಳೆಯವನ್ನು ಹಾದು ಹೋಗಿ ಬಾವಿಯಿಂದ ನೀರನ್ನು ಸೇದಿಕೊಂಡು ದಾವೀದನಿಗೆ ತಂದುಕೊಟ್ಟರು. “ನಾನು ಈ ನೀರನ್ನು ಎಂದೆಂದಿಗೂ ಕುಡಿಯಬಾರದು. ಇದನ್ನು ಕುಡಿದರೆ, ತಮ್ಮ ಪ್ರಾಣಗಳನ್ನೇ ಪಣವಾಗಿಟ್ಟ ಈ ಮೂವರ ರಕ್ತವನ್ನು ಕುಡಿದಂತಾಗುವುದು,” ಎಂದು ಹೇಳಿ,
19 : ದಾವೀದನು ಆ ನೀರನ್ನು ಕುಡಿಯದೇ ಸರ್ವೇಶ್ವರನಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು. ಈ ಮೂರು ಮಂದಿ ರಣವೀರರು ಸಾಧಿಸಿದ ಪರಾಕ್ರಮವಿದು.
20 : ಯೋವಾಬನ ಸಹೋದರ ಅಬ್ಷೈ ‘ಮೂವತ್ತು ಪ್ರಮುಖ ವೀರರು’, ಎಂಬ ಪಡೆಯ ನಾಯಕನಾಗಿದ್ದನು. ಅವನು ತನ್ನ ಈಟಿಯಿಂದ ಮುನ್ನೂರು ಜನರಿಗೆ ವಿರೋಧವಾಗಿ ಹೋರಾಡಿ ಅವರನ್ನು ಕೊಂದು ಹಾಕಿ ‘ಮೂವತ್ತು ಪ್ರಮುಖ ವೀರರು’ ಎಂಬ ಪಡೆಯಲ್ಲಿ ಪ್ರಖ್ಯಾತನಾದನು.
21 : ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತು ಎಂಟು ಮಂದಿ ಗಂಡುಮಕ್ಕಳೂ ಅರವತ್ತು ಮಂದಿ ಹೆಣ್ಣು ಮಕ್ಕಳೂ ಹುಟ್ಟಿದರು.
22 : ಕಬ್ಜಯೇಲಿನ ಯೆಹೋಯಾದನ ಮಗ ಬೇನಾಯನು ಪ್ರಖ್ಯಾತಿ ಪಡೆದ ಸೈನಿಕನಾಗಿದ್ದನು. ಅವನು ಅನೇಕ ಶೂರಕೃತ್ಯಗಳನ್ನೆಸಗಿದನು: ಮೋವಾಬ್ಯರ ಇಬ್ಬರು ಬಲಶಾಲಿ ಯುದ್ಧ ವೀರರನ್ನು ಕೊಂದದ್ದೂ ಈ ಕೃತ್ಯಗಳಲ್ಲಿ ಒಂದಾಗಿದೆ. ಒಮ್ಮೆ ಚಳಿಗಾಲದಲ್ಲಿ ತಗ್ಗು ಪ್ರದೇಶದಲ್ಲಿ ಹೋಗಿ ಒಂದು ಸಿಂಹವನ್ನು ಕೊಂದನು.
23 : ಇನ್ನೊಮ್ಮೆ ಏಳುವರೆ ಅಡಿ ಎತ್ತರದ, ಅತೀ ಬಲವಾದ ಈಟಿಯನ್ನು ಹೊಂದಿದ್ದ, ಬಲಾಢ್ಯನಾದ ಈಜಿಪ್ಟನೊಬ್ಬನನ್ನು ಸೋಲಿಸಿದನು. ಆ ಈಜಿಪ್ಟಿನವನ ಕೈಯಲ್ಲಿ ಬಲವಾದ ಈಟಿ ಇತ್ತು. ಇವನಾದರೋ ಒಂದು ಕೋಲನ್ನು ಮಾತ್ರ ಹಿಡಿದು ಕೊಂಡು ಹೋಗಿ, ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದಲೇ ಅವನನ್ನು ಸಂಹರಿಸಿದನು.
24 : ‘ಮೂವತ್ತು ಪ್ರಮುಖ ವೀರರು’ ಪಡೆಯ ಒಬ್ಬನಾದ ಬೆನಾಯ ಮಾಡಿದ ಶೂರ ಕೃತ್ಯ ಇದು.
25 : ಇವನು ‘ಮೂವತ್ತು ಪ್ರಮುಖ ವೀರರ’ ಪಡೆಯಲ್ಲಿ ಪ್ರಸಿದ್ಧನಾಗಿದ್ದನೇ ಹೊರತು, ‘ಮೂವರು ಪ್ರಮುಖ ವೀರರ’ ಪಡೆಯವರಷ್ಟು ಪ್ರಖ್ಯಾತನಾಗಲಿಲ್ಲ. ಅವನನ್ನು ದಾವೀದನು ತನ್ನ ಕಾವಲುಗಾರರಲ್ಲಿ ಮುಖ್ಯಸ್ಥನನ್ನಾಗಿ ಇಟ್ಟುಕೊಂಡಿದ್ದನು.
26 : ಪ್ರಖ್ಯಾತರಾದ ಇನ್ನಿತರ ಸೈನಿಕರು:
ಯೋವಾಬನ ತಮ್ಮ ಅಸಾಹೇಲ,
ಬೆತ್ಲೆಹೇಮಿನ ದೋದೋವಿನ ಮಗ
ಎಲ್ಖಾನಾನ್,
27 : ಹರೋರಿನ ಶಮ್ಮೋತ್,
ಪೆಲೋನ್ಯನಾದ ಹೆಲೆಚ್,
28 : ತೆಕೋವದ ಇಕ್ಕೇಷನ ಮಗ ಈರ,
ಅನತೋತಿನ ಅಬೀಯೆಜೆರ್,
29 : ಹುಷ ಊರಿನ ಸಿಬ್ಕೈ,
ಅಹೋಹಿನ ಈಲೈ,
30 : ನೆಟೋಫದ ಮಹರೈ,
ನೆಟೋಫದ ಬಾಣನ ಮಗ ಹೇಲೆದ್,
31 : ಬೆನ್ಯಾಮೀನ್ ದೇಶದ ಗಿಬೆಯ ಊರಿನ
ರೀಬೈನ ಮಗ ಈತೈ,
ಪಿರಾತೋನ್ಯದ ಬೆನಾಯ,
32 : ನಹಲೇಗಾಷಿನ ಹೂರೈ,
ಅರಾಮಾ ತಗ್ಗಿನ ಅಬೀಯೇಲ್,
33 : ಬಹರೂಮ್ಯದ ಅಜ್ಮಾವೆತ್,
ಶಾಲ್ಬೋನ್ಯದ ಎಲೆಯಖ್ಬ,
34 : ಗೀಜೋನಿನ ಹಾಷೇಮನ ಮಕ್ಕಳು,
ಹರಾರ್ಯದ ಶಾಗೇಯನ ಮಗ
ಯೋನಾತಾನ,
35 : ಹರಾರ್ಯದ ಶಾಕಾರನ ಮಗ
ಅಹೀಯಾಮ್,
ಊರನ ಮಗ ಎಲೀಫಲ್,
36 : ಮೆಕೆರಾತ್ಯದ ಹೇಫೆರ್,
ಪೆಲೋನ್ಯದ ಅಹೀಯ,
37 : ಕರ್ಮಲ್ಯದ ಹೆಚ್ರೋ,
ಎಜ್ಬೈಯ ಮಗ ನಾರೈ,
38 : ನಾತಾನನ ತಮ್ಮ ಯೋವೇ¯,
ಹಗ್ರೀಯನ ಮಗ ಮಿಬ್ದಾರ್,
39 : ಅಮ್ಮೋನಿನ ಚೆಲೆಕ್,
ಬೇರೋತ್ಯನೂ ಚೆರೂಯಳ ಮಗ
ಯೋವಾಬನ ಆಯುಧವಾಹಕನೂ
ಆಗಿದ್ದ ನಹರೈ,
40 : ಇತ್ರೀಯರಾದ ಈರ ಮತ್ತು ಗೆರೇಬ,
41 : ಹಿತ್ತೀಯನಾದ ಊರೀಯ,
ಅಹ್ಲೈಯ ಮಗ ಜಾಬಾದ್,
42 : ಶೀಜನ ಮಗ ಅದೀನ,
(ಈತ ರೂಬೇನ್
ಗೋತ್ರದ ಪ್ರಮುಖ ಸದಸ್ಯ, ಮೂವತ್ತು
ಸೈನಿಕರ ಒಂದು ಗುಂಪೂ ಅವನಿಗಿತ್ತು),
43 : ಮಾಕನ ಮಗ ಹಾನಾನ್,
ಮೆತೆನ ಊರಿನ ಯೋಷಾಫಾಟ್,
44 : ಅಷ್ಟೆರಾತ್ಯದ ಉಜ್ಜೀಯ,
ಅರೋಯೇರಿನ ಹೋತಾಮನ
ಮಕ್ಕಳಾದ ಶಾಮಾ, ಯೆಗೀಯೇಲರು,
45 : ಶಿಮ್ರಿಯ ಮಗ ಎದೀಗಯೇಲ್,
ಎದೀಗಯೇಲನ ತಮ್ಮನೂ
ತೀಚೀಯನೂ ಆದ ಯೋಹ,
46 : ಮಹವೀಯದ ಎಲೀಯೇಲ್,
ಎಲ್ನಾಮನ ಮಕ್ಕಳಾದ ಯೆರೀಬೈ
ಮತ್ತು ಯೋಷವ್ಯ,
ಮೋವಬ್ಯನಾದ ಇತ್ಮ,
ಎಲೀಯೇಲ್, ಓಬೆದ್,
47 : ಮೆಚೋಬಾಯದ ಯಾಸೀಯೇಲ.