1 : ಸೈತಾನನು ಇಸ್ರಯೇಲರಿಗೆ ವಿರೋಧವಾಗಿ ಎದ್ದು ಇಸ್ರಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರಿಸಿದನು.
2 : ದಾವೀದನು ಯೋವಾಬನನ್ನೂ ಜನಾಧಿಪತಿಗಳನ್ನೂ ಕರೆದು, “ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ ಇಸ್ರಯೇಲರನ್ನು ಲೆಕ್ಕಮಾಡಿಕೊಂಡು ಬನ್ನಿ,” ಎಂದು ಆಜ್ಞಾಪಿಸಿದನು.
3 : ಆಗ ಯೋವಾಬನು, “ನನ್ನ ಒಡೆಯರಾದ ಅರಸರೇ, ಸರ್ವೇಶ್ವರ ತಮ್ಮ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ; ಅವರೆಲ್ಲರೂ ನನ್ನ ಒಡೆಯರ ಸೇವಕರಷ್ಟೇ. ಆದರೆ ಒಡೆಯರು ಇಂಥದನ್ನು ಅಪೇಕ್ಷಿಸಿದ್ದೇಕೆ? ಇಸ್ರಯೇಲರನ್ನು ಅಪರಾಧಕ್ಕೆ ಗುರಿಮಾಡುವದೇಕೆ?” ಎಂದನು.
4 : ಆದರೆ ಅರಸನು ಯೋವಾಬನಿಗೆ ಕಿವಿಗೊಡದೆ ತನ್ನ ಮಾತನ್ನೇ ಸಾಧಿಸಿದ್ದರಿಂದ, ಅವನು ಹೊರಟುಹೋಗಿ ಇಸ್ರಯೇಲರ ಪ್ರಾಂತ್ಯಗಳಲ್ಲೆಲ್ಲಾ ಸಂಚರಿಸಿ ಜೆರುಸಲೇಮಿಗೆ ಹಿಂದಿರುಗಿದನು.
5 : ಯೋವಾಬನು ದಾವೀದನಿಗೆ ಒಪ್ಪಿಸಿದ ಜನಗಣತಿಯ ಅಂಕೆಸಂಖ್ಯೆಗಳು ಇವು: ಇಸ್ರಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ; ಯೆಹೂದ್ಯರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ.
6 : ಅರಸನ ಆಜ್ಞೆ ಯೋವಾಬನಿಗೆ ಹಿಡಿಸಲಿಲ್ಲ ವಾದ್ದರಿಂದ, ಅವನು ಲೇವಿ, ಬೆನ್ಯಾಮೀನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ.
7 : ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದು ಎಂದು ಕಂಡಿತು. ಆದ್ದರಿಂದ ಅವರು ಇಸ್ರಯೇಲರನ್ನು ಶಿಕ್ಷಿಸಿದರು.
8 : ಆಗ ದಾವೀದನು, “ನಾನು ಬುದ್ದಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ದೇವರನ್ನು ಪ್ರಾರ್ಥಿಸಿದನು. 9ದೇವರು ದಾವೀದನ ದರ್ಶಿಯಾದ ಗಾದನಿಗೆ,
9 : ದೇವರು ದಾವೀದನ ದರ್ಶಿಯಾದ ಗಾದನಿಗೆ,
10 : “ನೀನು ದಾವೀದನ ಹತ್ತಿರಕ್ಕೆ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಯನ್ನು ನಿನ್ನ ಮುಂದಿಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಸರ್ವೇಶ್ವರ ಹೇಳುತ್ತಾರೆ’ ಎಂಬುದಾಗಿ ತಿಳಿಸು,” ಎಂದರು.
11 : ಆಗ ಗಾದನು ದಾವೀದನ ಬಳಿಗೆ ಬಂದು, “ಸರ್ವೇಶ್ವರ ಹೇಳುವುದನ್ನು ಕೇಳು:
12 : ‘ಮೂರು ವರ್ಷಗಳ ಕಾಲ ಕ್ಷಾಮ ಉಂಟಾಗಬೇಕೋ? ಇಲ್ಲವೆ ಮೂರು ತಿಂಗಳುಗಳವರೆಗೆ ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ? ಇಲ್ಲವೆ ಇಸ್ರಯೇಲರ ಸಮಸ್ತ ಪ್ರಾಂತ್ಯಗಳಿಗೆ ಸರ್ವೇಶ್ವರ ಕಳುಹಿಸುವ ಸಂಹಾರಕ ದೂತನಿಂದ ಉಂಟಾಗುವ ಮೂರು ದಿನಗಳ ಘೋರ ವ್ಯಾಧಿರೂಪವಾದ ಸರ್ವೇಶ್ವರನ ಶಿಕ್ಷೆ ಬೇಕೋ? ಈ ಮೂರರಲ್ಲಿ ಒಂದನ್ನು ಆರಿಸಿಕೋ’ ನನ್ನನ್ನು ಕಳುಹಿಸಿದವರಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು,” ಎಂದು ಹೇಳಿದನು.
13 : ಅದಕ್ಕೆ ದಾವೀದನು, “ನಾನು ಬಹಳ ಇಕ್ಕಟ್ಟಿಗೆ ಸಿಕ್ಕಿ ಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೇ ಬೀಳುತ್ತೇನೆ; ಅವರು ಕೃಪಾಪೂರ್ಣರು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿದನು.
14 : ಆಗ ಸರ್ವೇಶ್ವರ ಇಸ್ರಯೇಲರ ಮೆಲೆ ವ್ಯಾಧಿಯನ್ನು ಬರಮಾಡಿದರು; ಅವರಲ್ಲಿ ಇಪ್ಪತ್ತು ಸಾವಿರ ಜನರು ಸತ್ತರು.
15 : ದೇವರು ಜೆರುಸಲೇಮನ್ನು ಸಹ ಸಂಹರಿಸಬೇಕೆಂದು ದೂತನನ್ನು ಕಳುಹಿಸಿದರು. ಆದರೆ ಆ ದೂತನು ಸಂಹರಿಸುವುದಕ್ಕಿದ್ದಾಗ ಸರ್ವೇಶ್ವರ ಅದನ್ನು ಕಂಡು, ಆ ಕೇಡಿನ ವಿಷಯದಲ್ಲಿ ದುಃಖಪಟ್ಟರು. ಸಂಹಾರಕ ದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದು ಆಜ್ಞಾಪಿಸಿದರು. ಆಗ ಸರ್ವೇಶ್ವರನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.
16 : ದಾವೀದನು ಕಣ್ಣೆತ್ತಿ ನೋಡಿ ಸರ್ವೇಶ್ವರನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ ಚಾಚಿದ ಕೈಯಲ್ಲಿ ಜೆರುಸಲೇಮಿಗೆ ವಿರೋಧವಾಗಿ ಹಿರಿದ ಕತ್ತಿ ಇರುವುದನ್ನೂ ಕಂಡನು. ಆಗ ಅವನೂ ಹಿರಿಯರೂ ಗೋಣಿತಟ್ಟನ್ನು ಉಟ್ಟುಕೊಂಡು ಬೋರಲಾಗಿ ಬಿದ್ದರು.
17 : ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೇ; ಮಹಾಪಾಪ ಮಾಡಿದವನು ನಾನೇ; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಸರ್ವೇಶ್ವರಾ, ನನ್ನ ದೇವರೇ, ನಿಮ್ಮ ಕತ್ತಿ ನಿಮ್ಮ ಜನರನ್ನು ಬಾಧಿಸದೆ, ಅವರಿಗೆ ವಿರೋಧವಾಗಿ ಇರದೆ, ನನಗೂ ನನ್ನ ಮನೆಯವರಿಗೂ ವಿರೋಧ ಆಗಿರಲಿ,” ಎಂದು ಬೇಡಿಕೊಂಡನು.
18 : ಆಗ ಸರ್ವೇಶ್ವರನ ದೂತನು ಗಾದನಿಗೆ “ಯೆಬೂಸಿಯನಾದ ಒರ್ನಾನನ ಕಣದಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ ಹೋಗಬೇಕೆಂದು ದಾವೀದನಿಗೆ ಹೇಳು,” ಎಂದು ಆಜ್ಞಾಪಿಸಿದನು.
19 : ದಾವೀದನು ಗಾದನ ಮುಖಾಂತರ ತನಗಾದ ಸರ್ವೇಶ್ವರನ ಅಪ್ಪಣೆಯಂತೆ ಹೊರಟನು.
20 : ಅಷ್ಟರಲ್ಲಿ ಗೊದಿಯನ್ನು ತುಳಿಸುತ್ತಿದ್ದ ಒರ್ನಾನನು ದೂತನನ್ನು ನೋಡಿದ್ದನು. ಅವನೊಡನಿದ್ದ ಅವನ ನಾಲ್ಕು ಮಂದಿ ಮಕ್ಕಳು ಅಡಗಿಕೊಂಡಿದ್ದರು.
21 : ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡು, ಕಣವನ್ನು ಬಿಟ್ಟುಹೋಗಿ, ಅವನಿಗೆ ಅಡ್ಡಬಿದ್ದನು.
22 : ದಾವೀದನು ಅವನಿಗೆ, “ನಿನ್ನ ಕಣವನ್ನೂ ಭೂಮಿಯನ್ನೂ ನನಗೆ ಕೊಡು; ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ಅದರಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸುತ್ತೇನೆ; ಪ್ರರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು,” ಎಂದು ಹೇಳಿದನು.
23 : ಆಗ ಒರ್ನಾನನು ದಾವೀದನಿಗೆ, “ನನ್ನ ಒಡೆಯರಾದ ಅರಸರು ತಮಗೆ ಇಷ್ಟವಾದದ್ದನ್ನು ತೆಗೆದುಕೊಂಡು ಬಲಿ ಅರ್ಪಿಸಬಹುದು. ಬಲಿದಾನಕ್ಕೆ ಇಲ್ಲಿ ಹೋರಿಗಳೂ ಸೌದೆಗೆ ಹಂತೀಕುಂಟೆಗಳೂ ನೈವೇದ್ಯಕ್ಕೆ ಗೋದಿಯೂ ಇರುತ್ತವೆ; ಇವೆಲ್ಲವನ್ನೂ ಕೊಡುತ್ತೇನೆ,” ಎಂದು ಹೇಳಿದನು.
24 : ಅರಸ ದಾವೀದನು ಒರ್ನಾನನಿಗೆ, “ಹಾಗಲ್ಲ, ನಾನು ನಿನ್ನಿಂದ ಪೂರ್ಣಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು ಸರ್ವೇಶ್ವರನಿಗೆ ಬಲಿಯಾಗಿ ಅರ್ಪಿಸಲು ನನಗೆ ಇಷ್ಟವಿಲ್ಲ,” ಎಂದು ಹೇಳಿದನು.
25 : ಅಂತೆಯೇ ಆ ಭೂಮಿಗಾಗಿ ಅವನಿಗೆ ಆರುನೂರು ಬಂಗಾರದ ನಾಣ್ಯಗಳನ್ನು ಕೊಟ್ಟು,
25 : ಅಂತೆಯೇ ಆ ಭೂಮಿಗಾಗಿ ಅವನಿಗೆ ಆರುನೂರು ಬಂಗಾರದ ನಾಣ್ಯಗಳನ್ನು ಕೊಟ್ಟು,
26 : ಅಲ್ಲಿ ಸರ್ವೇಶ್ವರ ಸ್ವಾಮಿಗಾಗಿ ಬಲಿಪೀಠವನ್ನು ಕಟ್ಟಿಸಿದನು. ಅದರ ಮೇಲೆ ದಹನಬಲಿಗಳನ್ನೂ ಶಾಂತಿ ಸಮಾಧಾನ ಬಲಿಗಳನ್ನೂ ಅರ್ಪಿಸಿ ಸರ್ವೇಶ್ವರನನ್ನು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಮೊರೆಯನ್ನು ಆಲಿಸಿ, ಆಕಾಶದಿಂದ ಬಲಿಪೀಠದ ಮೇಲೆ ಬೆಂಕಿಯನ್ನು ಬರಮಾಡಿ,
27 : ಆ ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದರು. ಅವನು ಹಾಗೆಯೇ ಮಾಡಿದನು.
28 : ಮೋಶೆ ಮರುಭೂಮಿಯಲ್ಲಿ ಮಾಡಿಸಿದ್ದ ಸರ್ವೇಶ್ವರನ ಗುಡಾರವೂ ಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲೇ ಇದ್ದವು.
29 : ಆದರೂ ದಾವೀದನು ಸರ್ವೇಶ್ವರನ ದೂತ ಹಿಡಿದಿದ್ದ ಕತ್ತಿಗೆ ಹೆದರಿ, ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಬಲಿಯರ್ಪಿಸಿದನು.
30 : ಆ ಕಾಲದಲ್ಲಿ ದಾವೀದನಿಗೆ ಸರ್ವೇಶ್ವರನಿಂದ ಸದುತ್ತರ ದೊರಕಿದ್ದರಿಂದ ಅವನು,