Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

1ಪೂರ್ವ


1 : “ಇದೇ ದೇವರಾದ ಸರ್ವೇಶ್ವರನ ಆಲಯ; ಇದೇ ಇಸ್ರಯೇಲರು ಬಲಿ ಅರ್ಪಿಸತಕ್ಕ ಪೀಠ,” ಎಂದು ಹೇಳಿದನು.
2 : ಅನಂತರ ದಾವೀದನು ಇಸ್ರಯೇಲ್ ನಾಡಿನಲ್ಲಿದ್ದ ಅನ್ಯಜನಗಳನ್ನು ಕೂಡಿಸುವುದಕ್ಕೆ ಆಜ್ಞಾಪಿಸಿದನು. ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.
3 : ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಹೆಜ್ಜೆಜಾಡಿನಲ್ಲೇ ನಡೆದನು.
4 : ಇವರಲ್ಲಿ ಸರ್ವೇಶ್ವರನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತನಾಲ್ಕು ಸಾವಿರ, ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ,
5 : ದಾವೀದನು ತನ್ನಲ್ಲೇ “ನನ್ನ ಮಗ ಸೊಲೊಮೋನನು ಎಳೇ ಪ್ರಾಯದವನು. ಸರ್ವೇಶ್ವರನಿಗೆ ಕಟ್ಟಿಸತಕ್ಕ ದೇವಾಲಯವು, ಜಗತ್ತಿನಲ್ಲೆಲ್ಲಾ ಸುಪ್ರಸಿದ್ಧವಾಗಿರಬೇಕು; ಅದು ಅತಿ ಅದ್ಭುತಕರವಾಗಿರಬೇಕು; ಆದುದರಿಂದ ಅದಕ್ಕೆ ಬೇಕಾಗುವುದನ್ನೆಲ್ಲಾ ಸಿದ್ಧಪಡಿಸುವೆನು,” ಎಂದುಕೊಂಡನು. ಸಾಯುವುದಕ್ಕೆ ಮೊದಲೇ ಹಲವಾರು ಸಲಕರಣೆಗಳನ್ನು ದೊಡ್ಡ ಸಂಖ್ಯೆಯಲ್ಲಿ ಸಜ್ಜು ಮಾಡಿದನು.
6 : ಇದಲ್ಲದೆ, ಆ ಲೇವಿಯರನ್ನು ಗೇರ್ಷೋನ್ಯರು, ಕೆಹಾತ್ಯರು, ಮೆರಾರೀಯರು ಎಂಬ ಮೂರು ವರ್ಗಗಳಾಗಿ ವಿಂಗಡಿಸಿದನು.
7 : ಗೇರ್ಷೋನ್ಯರ ಮೂಲಪುರುಷರು ಲದ್ದಾನ್ ಹಾಗೂ ಶಿಮ್ಮೀ ಎಂಬವರು.
8 : ಲದ್ದಾನನ ಮಕ್ಕಳಾದ ಯೆಹೀಯೇಲ್, ಜೇತಾಮ್, ಯೋವೇಲ್ ಎಂಬ ಮೂರು ಮಂದಿ ಮುಖ್ಯಸ್ಥರಾಗಿದ್ದರು.
9 : ಶಿಮ್ಮೀಯ ಮಕ್ಕಳು ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಂದಿ. ಇವರು ಲದ್ದಾನ್ಯರ ಗೋತ್ರ ಪ್ರಧಾನರು.
10 : ಶಿಮ್ಮೀಗೆ ಯಹತ್, ಜೀನ, ಯೆಯೂಷ್, ಬೆರೀಯ ಎಂಬ ನಾಲ್ಕು ಮಂದಿ ಮಕ್ಕಳಿದ್ದರು.
11 : “ನನ್ನ ಮಗನೇ, ನೀನು ಕೃತಾರ್ಥನಾಗಬೇಕು; ನಿನ್ನ ದೇವರಾದ ಸರ್ವೇಶ್ವರ ನನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟಬೇಕು. ಆ ಸರ್ವೇಶ್ವರ ನಿನ್ನೊಂದಿಗಿರಲಿ!
12 : ಅವನು ಆರು ವರ್ಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿ ಇದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು. ರಾಣಿ ಅತಲ್ಯಳ ವಿರುದ್ಧ ದಂಗೆ (2 ಅರಸು 11.4-16)
13 : ಅಮ್ರಾಮನ ಮಕ್ಕಳು ಆರೋನ್, ಮೋಶೆ ಎಂಬವರು. ಆರೋನನೂ ಅವನ ಸಂತಾನದವರೂ ಮಹಾಪರಿಶುದ್ಧ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟಿದ್ದರು. ಇವರು ಸರ್ವೇಶ್ವರನ ಸನ್ನಿಧಿಯಲ್ಲಿ ಸದಾ ಧೂಪಾರತಿ ಎತ್ತುವವರೂ ಸೇವೆ ಮಾಡುವವರೂ ಸರ್ವೇಶ್ವರನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿರಬೇಕಿತ್ತು.
14 : ಇಗೋ, ನಾನು ಬಹಳ ಪ್ರಯಾಸಪಟ್ಟು ಸರ್ವೇಶ್ವರನ ಆಲಯಕ್ಕಾಗಿ 3,400 ಮೆಟ್ರಿಕ್ ಟನ್ ಬಂಗಾರವನ್ನು 34,000 ಮೆಟ್ರಿಕ್ ಟನ್ ಬೆಳ್ಳಿಯನ್ನು ಹಾಗು ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ, ಕಲ್ಲುಮರಗಳನ್ನೂ ಕೂಡಿಸಿದ್ದೇನೆ.
15 : ನೀನು ಇನ್ನೂ ಹೆಚ್ಚು ಕೂಡಿಸುವೆ. ಇದಲ್ಲದೆ, ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಮಂದಿ ಕಲ್ಲುಕುಟಿಗರು, ಶಿಲ್ಪಿಗಳು, ಬಡಗಿಯವರು ಹಾಗು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ ಈ ಮುಂತಾದ ಕೆಲಸವನ್ನು ಮಾಡುವ ನಿಪುಣರು ನಿನಗಿರುತ್ತಾರೆ; ಅವರನ್ನು ಲೆಕ್ಕಿಸುವುದಕ್ಕಾಗುವುದಿಲ್ಲ.
16 : ಏಳು, ಕೆಲಸಕ್ಕೆ ಕೈಹಾಕು; ಸರ್ವೇಶ್ವರ ನಿನ್ನೊಂದಿಗಿರಲಿ!” ಎಂದು ಹೇಳಿದನು.
17 : ತನ್ನ ಮಗ ಸೊಲೊಮೋನನಿಗೆ ನೆರವಾಗಬೇಕೆಂದು ಇಸ್ರಯೇಲರ ಎಲ್ಲ ಅಧಿಪತಿಗಳಿಗೆ ದಾವೀದನು ಆಜ್ಞಾಪಿಸಿದನು.
18 : “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲೂ ನಿಮಗೆ ನೆಮ್ಮದಿಯನ್ನು ಅನುಗ್ರಹಿಸಿದ್ದಾರೆ. ನಾಡಿನ ಮೂಲನಿವಾಸಿಗಳನ್ನು ನನ್ನ ಕೈಗೊಪ್ಪಿಸಿದ್ದಾರೆ. ನೀವೆ ನೋಡುವ ಹಾಗೆ ನಾಡು ಸರ್ವೇಶ್ವರನಿಗೂ ಅವರ ಪ್ರಜೆಗಳಿಗೂ ಸ್ವಾಧೀನವಾಗಿದೆ.
19 : ಆದುದರಿಂದ ನೀವು ಪೂರ್ಣಮನಸ್ಸಿನಿಂದ, ಪೂರ್ಣಪ್ರಾಣದಿಂದ ನಿಮ್ಮ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸಿರಿ. ಏಳಿ, ನಿಮ್ಮ ದೇವರಾದ ಸರ್ವೇಶ್ವರನ ಪವಿತ್ರಾಲಯವನ್ನು ಕಟ್ಟಿರಿ. ಸರ್ವೇಶ್ವರನ ನಿಬಂಧನ ಮಂಜೂಷವನ್ನೂ ದೇವಾರಾಧನೆಗೆ ಬೇಕಾದ ಸಾಮಗ್ರಿಗಳನ್ನೂ ಸರ್ವೇಶ್ವರನ ಹೆಸರಿಗಾಗಿ ಕಟ್ಟಲಾಗುವ ಮಂದಿರದಲ್ಲಿ ಇಡಿ,” ಎಂದು ಹೇಳಿದನು.

· © 2017 kannadacatholicbible.org Privacy Policy