1 : ದಾವೀದನು ಹಣ್ಣುಹಣ್ಣು ಮುದುಕನಾದಾಗ ತನ್ನ ಮಗ ಸೊಲೊಮೋನನನ್ನು ಇಸ್ರಯೇಲರ ಅರಸನನ್ನಾಗಿ ಮಾಡಿದನು.
2 : ಆಗ ಇಸ್ರಯೇಲರ ಎಲ್ಲಾ ಅಧಿಪತಿಗಳನ್ನು, ಯಾಜಕರನ್ನು ಹಾಗು ಲೇವಿಯರನ್ನು ತನ್ನ ಬಳಿಯಲ್ಲಿ ಸಭೆ ಸೇರಿಸಿದನು.
3 : ಮೂವತ್ತು ವರ್ಷ ಮೊದಲ್ಗೊಂಡು ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆ ಮೂವತ್ತೆಂಟು ಸಾವಿರವಿತ್ತು.
4 : ಈಗ ನೀವು ಮಾಡತಕ್ಕದ್ದೇನೆಂದರೆ - ಸಬ್ಬತ್‍ದಿನ ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.
5 : ದ್ವಾರಪಾಲಕರನ್ನಾಗಿ ನಾಲ್ಕು ಸಾವಿರ ಹಾಗು ತಾನು ಒದಗಿಸಿದ್ದ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನು ದಾವೀದನು ನೇಮಿಸಿದನು.
6 : ಯಾಜಕರು ಹಾಗು ಸೇವೆಯಲ್ಲಿರುವ ಲೇವಿಯರು ಇವರನ್ನು ಬಿಟ್ಟು ಬೇರೆ ಯಾರೂ ಸರ್ವೇಶ್ವರನ ಆಲಯದೊಳಗೆ ಬರಬಾರದು. ಇವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರು ಸರ್ವೇಶ್ವರನ ಆಜ್ಞಾನುಸಾರ ಹೊರಗಿರಬೇಕು.
7 : ಲೇವಿಯರು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ನಿಂತು ಆಲಯದೊಳಕ್ಕೆ ನುಗ್ಗುವವರನ್ನು ಸಂಹರಿಸಬೇಕು. ಅರಸನು ಹೋಗಿ ಬರುವಾಗಲೆಲ್ಲಾ ಅವರು ಅವನ ಜೊತೆಯಲ್ಲೇ ಇರಬೇಕು,” ಎಂದು ಹೇಳಿದನು.
8 : ಲೇವಿಯರೂ ಎಲ್ಲ ಯೆಹೂದ್ಯರೂ ಯಾಜಕ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್ ದಿನದಲ್ಲಿ ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನುಸಬ್ಬತ್‍ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈ ಕೆಳಗಿನವರನ್ನು ಕೂಡಿಸಿಕೊಂಡನು.
9 : ದೇವಾಲಯದಲ್ಲಿಟ್ಟಿದ್ದ ದಾವೀದ ಅರಸನ ಬರ್ಜಿ, ಗುರಾಣಿ, ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು.
10 : ಆಯುಧ ಪಾಣಿಗಳಾದ ಎಲ್ಲ ಜನರನ್ನು ಅರಸನ ಸುತ್ತಲು ದೇವಾಲಯದ ದಕ್ಷಿಣದಿಕ್ಕಿನ ಮೂಲೆಯಿಂದ ಬಲಿಪೀಠದವರೆಗೂ ಅಲ್ಲಿಂದ ಉತ್ತರದಿಕ್ಕಿನ ಮೂಲೆಯವರೆಗೂ ಅಲ್ಲಿಂದ ಉತ್ತರದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಲ್ಲಿಸಿದನು.
11 : ಇವರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನು. ಯೆಯೂಷ್, ಬೆರೀಯರಿಗೆ ಬಹಳ ಮಂದಿ ಮಕ್ಕಳು ಇರಲಿಲ್ಲವಾದ್ದರಿಂದ ಅವರಿಬ್ಬರೂ ಒಂದೇ ಕುಟುಂಬ ಹಾಗೂ ವರ್ಗವಾಗಿ ಎಣಿಕೆಯಾಗಿದ್ದರು.
12 : ಕೆಹಾತನಿಗೆ ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಎಂಬ ನಾಲ್ಕು ಮಂದಿ ಮಕ್ಕಳಿದ್ದರು.
13 : ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತೂರಿಗಳನ್ನು ಊದುವವರು ಅರಸನ ಹತ್ತಿರವಿದ್ದರು; ಜನಸಾಮಾನ್ಯರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನಪದ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆ ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.
14 : ದೈವಪುರುಷನಾದ ಮೋಶೆಯ ಸಂತಾನದವರು ಸಾಧಾರಣ ಲೇವಿಯರೊಳಗೆ ಲೆಕ್ಕಿತರಾಗಿದ್ದರು.
15 : ಮೋಶೆಯ ಮಕ್ಕಳು ಗೇರ್ಷೋಮ್ ಹಾಗೂ ಎಲೀಯೆಜೆರ್ ಎಂಬವರು.
16 : ಮುಖ್ಯಸ್ಥನಾದ ಶೆಬೂವೇಲನು ಗೇರ್ಷೋಮನ ಮಗ.
17 : ಮುಖ್ಯಸ್ಥನಾದ ರೆಹಬ್ಯ ಎಲೀಯೆಜೆರನ ಮಗ. ಎಲೀಯೆಜೆರನಿಗೆ ಬೇರೆ ಮಕ್ಕಳಿರಲಿಲ್ಲ. ಆದರೆ ರೆಹಬ್ಯನಿಗೆ ಅನೇಕ ಮಂದಿ ಮಕ್ಕಳಿದ್ದರು.
18 : ಮುಖ್ಯಸ್ಥ ಶೆಲೋಮೋತನು ಇಚ್ಹಾರನ ಮಗ.
19 : ಹೆಬ್ರೋನನ ಮಕ್ಕಳಲ್ಲಿ ಯೇರಿಯ ಮುಖ್ಯಸ್ಥ; ಅಮರ್ಯ ಎರಡನೆಯವನು, ಯಹಜೀಯೇಲ್ ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು.
20 : ಉಜ್ಜೀಯೇಲನ ಮಕ್ಕಳಲ್ಲಿ ಮೀಕನೂ ಮುಖ್ಯಸ್ಥ; ಇಷೀಯನು ಎರಡನೆಯವನು.
21 : ಮೆರಾರೀಯ ಮಕ್ಕಳು ಮಹ್ಲೀ ಹಾಗೂ ಮೂಷೀ ಎಂಬವರು. ಮಹ್ಲೀಯ ಮಕ್ಕಳು ಎಲ್ಲಾಜಾರ್ ಹಾಗೂ ಕೀಷ್ ಇವರು.
22 : ಎಲ್ಲಾಜಾರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣುಮಕ್ಕಳು ಮಾತ್ರ ಇದ್ದರು; ಇವರು ತಮ್ಮ ಬಂಧುಗಳಾದ ಕೀಷನ ಮಕ್ಕಳನ್ನು ಮದುವೆಯಾದರು.
23 : ಮೂಷಿಗೆ ಮೆಹ್ಲೀ, ಏದೆರ್, ಯೆರೇಮೋತ್ ಎಂಬ ಮೂರು ಮಂದಿ ಮಕ್ಕಳಿದ್ದರು.
24 : ಲೇವಿಯರ ಪಟ್ಟಿಯಲ್ಲಿ ಬರೆದಿರುವ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಮುಖ್ಯಸ್ಥರು. ಇವರಲ್ಲಿ ಇಪ್ಪತ್ತು ವರ್ಷ ಮೊದಲ್ಗೊಂಡು ಹೆಚ್ಚು ವಯಸ್ಸುಳ್ಳವರು ಸರ್ವೇಶ್ವರನ ಆಲಯದಲ್ಲಿ ಸೇವೆಮಾಡಲು ಅರ್ಹರಾಗಿದ್ದರು.
25 : ಇಸ್ರಯೇಲ್ ದೇವರಾದ ಸರ್ವೇಶ್ವರ, ತಮ್ಮ ಪ್ರಜೆಗೆ ನೆಮ್ಮದಿಯನ್ನು ಅನುಗ್ರಹಿಸಿ, ಸದಾ ಜೆರುಸಲೇಮಿನಲ್ಲಿ ವಾಸಿಸುವವರಾದ ಕಾರಣ,
26 : ಲೇವಿಯರು ಇನ್ನು ಮುಂದೆ ಅವರ ಗುಡಾರವನ್ನೂ ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲವೆಂದುಕೊಂಡು, ದಾವೀದನು ಈ ಪ್ರಕಾರ ವಿಧಿಸಿದನು:
27 : ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷ ಮೊದಲ್ಗೊಂಡು ಹೆಚ್ಚು ವಯಸ್ಸುಳ್ಳವರೆಲ್ಲರೂ ಲೆಕ್ಕಿಸಲ್ಪಟ್ಟರು.
28 : ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಸರ್ವೇಶ್ವರನ ಆಲಯದ ಪರಿಚರ್ಯೆಯನ್ನು ನಡೆಸಬೇಕಾಗಿತ್ತು. ಅವರ ಕೆಲಸ ಕಾರ್ಯ ಇವು: ಅಂಗಳವನ್ನೂ ಅಲ್ಲಿಯ ಕೋಣೆಗಳನ್ನೂ ನೋಡಿಕೊಳ್ಳುವುದು, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದು, ದೇವಾಲಯದಲ್ಲಿ ಸೇವೆಮಾಡುವುದು;
29 : ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿ ಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವುದು; ಸೇರು, ಅಳತೆಗೋಲು ಇವುಗಳನ್ನು ಪರೀಕ್ಷಿಸುವುದು;
30 : ಪ್ರತಿದಿನ ಬೆಳಿಗ್ಗೆ, ಸಂಜೆ ಮತ್ತು ನಿಯಮಿತ ಸಂಖ್ಯೆಗೆ ಸರಿಯಾಗಿ ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ
31 : ಇವುಗಳಲ್ಲಿ ಸರ್ವೇಶ್ವರನ ಮುಂದೆ ತಪ್ಪದೆ ನಡೆಯುವ ದಹನಬಲಿ ಸಮರ್ಪಣೆಯ ಹೊತ್ತಿನಲ್ಲಿ, ಸರ್ವೇಶ್ರನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದು.
32 : ಹೀಗೆ ಅವರು ತಮ್ಮ ಸಹೋದರರಾದ ಆರೋನ್ಯರ ಸಹಾಯಕರಾಗಿದ್ದು, ದೇವದರ್ಶನದ ಗುಡಾರವನ್ನೂ ಪರಿಶುದ್ಧವಾದ ಎಲ್ಲಾ ಸಾಮಾನುಗಳನ್ನೂ ನೋಡಿಕೊಳ್ಳುವುದೇ ಸರ್ವೇಶ್ವರನ ಆಲಯದಲ್ಲಿ ಅವರು ಮಾಡಬೇಕಾಗಿದ್ದ ಪರಿಚರ್ಯೆ.