Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

1ಪೂರ್ವ


1 : ಇಇಸ್ರಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ವಿವಿಧ ಸೇವೆಯನ್ನು ಮಾಡಬೇಕಾಗಿದ್ದ ವರ್ಗಗಳ ಅಧಿಪತಿಗಳು ಹಾಗು ಇವರ ಕಾರ್ಯಕ್ರಮಗಳ ಪಟ್ಟಿ: ವರ್ಷದ ಎಲ್ಲಾ ತಿಂಗಳುಗಳಲ್ಲಿ, ತಿಂಗಳಿಗೆ ಒಂದು ವರ್ಗದಂತೆ, ಸರದಿಯ ಮೇಲೆ ಕೆಲಸಕ್ಕಾಗಿ ಬರುತ್ತಿದ್ದ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು.
2 : ಪೆರೆಚನ ಸಂತಾನದವನೂ ಜಬ್ದೀಯೇಲನ ಮಗನೂ ಆದ ಯಾಷೊಬ್ಬಾಮನು ಮೊದಲನೆಯ ವರ್ಗದ ನಾಯಕ.
3 : ಆಗ ದೇವರು ನನಗೆ, ‘ನೀನು ಮಹಾಯುದ್ಧಗಳನ್ನು ನಡೆಸಿ, ಬಹಳ ರಕ್ತವನ್ನು ಸುರಿಸಿದವನು; ನನ್ನ ಹೆಸರಿಗೆ ನೀನು ಆಲಯವನ್ನು ಕಟ್ಟಿಸಬಾರದು,’ ಎಂದು ಹೇಳಿದರು.
4 : ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕ; ಆ ವರ್ಗದಲ್ಲಿ ಮಿಕ್ಲೋತನೆಂಬವನೂ ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
5 : ಯಾಜಕನಾದ ಯೆಹೋಯಾದನ ಮಗನೂ ಪ್ರಧಾನನೂ ಆದ ಬೆನಾಯನು ಮೂರನೆಯ ವರ್ಗದ ನಾಯಕ. ಮೂರನೆಯ ತಿಂಗಳಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
6 : ಈ ಬೆನಾಯನು ಮೂವತ್ತು ಮಂದಿಯಲ್ಲಿ ಪ್ರಸಿದ್ಧ ರಣವೀರನೂ ಅವರ ಮುಖ್ಯಸ್ಥನೂ ಆಗಿದ್ದನು. ಅವನ ವರ್ಗದಲ್ಲಿ ಅವನ ಮಗನಾದ ಅಮ್ಮೀಜಾಬಾದನೂ ಇದ್ದನು.
7 : ಯೋವಾಬನ ತಮ್ಮನಾದ ಅಸಾಹೇಲನೂ ಅವನು ಸತ್ತನಂತರ ಅವನ ಮಗ ಜೆಬದ್ಯನೂ ನಾಲ್ಕನೆಯ ವರ್ಗದ ನಾಯಕರು; ನಾಲ್ಕನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವರ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
8 : ಇಜ್ರಾಹ್ಯನಾದ ಶಮ್ಹೂತನು ಐದನೆಯ ವರ್ಗದ ನಾಯಕ. ಐದನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
9 : ತೆಕೋವಿನ ಇಕ್ಕೇಷನ ಮಗ ಈರ ಎಂಬವನು ಆರನೆಯ ವರ್ಗದ ನಾಯಕ. ಆರನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
10 : ಎಫ್ರಯಿಮ್ ಕುಲದ ಪೆಲೋನ್ಯನಾದ ಹೆಲೆಚನು ಏಳನೆಯ ವರ್ಗದ ನಾಯಕ; ಏಳನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
11 : ಹುಷ ಊರಿನ ಜೆರಹೀಯನಾದ ಸಿಬ್ಬೆಕ್ಕೆಯು ಎಂಟನೆಯ ವರ್ಗದ ನಾಯಕ. ಎಂಟನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
12 : ಬೆನ್ಯಾಮೀನ್ ಕುಲದ ಅನತೋತ್ ಊರಿನವನಾದ ಅಬ್ಬೀಯೆಜೆರನು ಒಂಬತ್ತನೆಯ ವರ್ಗದ ನಾಯಕ. ಒಂಬತ್ತನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
13 : ನೆಟೋಫ ಊರಿನ ಜಿರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕ; ಹತ್ತನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
14 : ಆರಾಧನೆಯ ಎಲ್ಲಾ ಸಾಮಗ್ರಿಗಳು, ಇವುಗಳ ಬಗ್ಗೆ ತಾವು ನಿರ್ಣಯಿಸಿ ಕೊಂಡದ್ದೆಲ್ಲವನ್ನೂ ವಿವರವಾಗಿ ತಿಳಿಸಿದನು.
15 : ನೆಟೋಫ ಊರಿನವನೂ ಒತ್ನೀಯೇಲನ ಸಂತಾನದವನೂ ಆದ ಹೆಲ್ದೈಯು ಹನ್ನೆರಡನೆಯ ವರ್ಗದ ನಾಯಕ; ಹನ್ನೆರಡನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
16 : ಇಸ್ರಯೇಲ್ ಕುಲಗಳ ಅಧ್ಯಕ್ಷರುಗಳು: ಕುಲ ಅಧ್ಯಕ್ಷ ರೂಬೇನ್ : ಜಿಕ್ರಿಯ ಮಗ ಎಲೀಯೆಜೆರ್ ಸಿಮೆಯೋನ : ಮಾಕನ ಮಗ ಶೆಫಟ್ಯ
17 : ಲೇವಿ : ಕೆಮುವೇಲನ ಮಗ ಹಷಬ್ಯ
18 : ಆರೋನ : ಚಾದೋಕ್ ಯೂದ : ಎಲೀಹು, ಅರಸ ದಾವೀದನ ಸಹೋದರರಲ್ಲಿ ಒಬ್ಬ ಇಸ್ಸಾಕಾರ : ಮೀಕಾಯೇಲನ ಮಗ ಒಮ್ರಿ
19 : ಜೆಬೂಲೂನ : ಓಬದ್ಯನ ಮಗ ಇಷ್ಮಾಯ ನಫ್ತಾಲಿ : ಅಜ್ರೀಯೇಲನ ಮಗ ಯೆರೀಮೋತ್
20 : ಎಫ್ರಯಿಮ : ಅಜಜ್ಯನ ಮಗ ಹೊಷೇಯ ಪಶ್ಚಿಮ ಮನಸ್ಸೆ : ಪೆದಾಯನ ಮಗ ಯೋವೇಲ್
21 : ಪೂರ್ವ ಮನಸ್ಸೆ : ಜೆಕರ್ಯನ ಮಗ ಇದ್ದೋ ಬೆನ್ಯಾಮೀನ : ಅಬ್ನೇರನ ಮಗ ಯಗಸೀಯೇಲ್
22 : ದಾನ : ಯೆರೋಹಾಮನ ಮಗ ಅಜರೇಲ್
23 : ಇಸ್ರಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂದು ಸರ್ವೇಶ್ವರ ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆಯಾದ ವಯಸ್ಸುಳ್ಳವರನ್ನು ಲೆಕ್ಕಿಸಲಿಲ್ಲ.
24 : ಚೆರೂಯಳ ಮಗ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಯೇಲರ ಮೇಲೆ ದೇವರ ಕೋಪವುಂಟಾಗಿ, ಅದನ್ನು ಪೂರ್ತಿಗೊಳಿಸಲಿಲ್ಲ. ಈ ಜನಗಣತಿ ದಾವೀದನ ರಾಜ್ಯದ ಇತಿಹಾಸದಲ್ಲಿ ಲಿಖಿತವಾಗಲಿಲ್ಲ.
25 : ಅರಸ ದಾವೀದನ ಸೊತ್ತಿನ ಮೇಲ್ವಿಚಾರಕರಾಗಿ ನೇಮಕಗೊಂಡವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗ ಅಜ್ಮಾವೆತ್; ಹೊಲದಲ್ಲು, ಪಟ್ಟಣಗಳಲ್ಲು, ಹಳ್ಳಿಗಳಲ್ಲು ಹಾಗೂ ಬುರುಜುಗಳ ಮೇಲೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗ ಯೋನಾತಾನ್;
26 : ಹೊಲಗಳನ್ನು ವ್ಯವಸಾಯ ಮಾಡುವ ಆಳುಗಳ ಮೇಲೆ ಕೆಲೂಬನ ಮಗನಾದ ಎಜ್ರೀ;
27 : ದ್ರಾಕ್ಷಿತೋಟಗಳ ಮೇಲೆ ರಾಮಾ ಊರಿನ ಶಿಮ್ಮೀ; ದ್ರಾಕ್ಷಿತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಷ್ಮೀಯನಾದ ಜಬ್ದೀ;
28 : ಎಣ್ಣೇಮರದ ತೋಪುಗಳ ಮೇಲೆ ಹಾಗೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆ ಗೆದೆರೂರಿನವನಾದ ಬಾಳ್ಷಾನಾನ್; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್;
29 : ಶಾರೋನಿನಲ್ಲಿ ಮೇಯುವ ದನಗಳ ಮೇಲೆ ಶಾರೋನ್ಯನಾದ ಶಿಟ್ರೈ; ಕಣಿವೆಗಳಲ್ಲಿ ಮೇಯುವ ದನಗಲ ಮೇಲೆ ಅದ್ಲೈಯ ಮಗನಾದ ಶಾಫಾಟ್;
30 : ಒಂಟೆಗಳ ಮೇಳೆ ಇಷ್ಮಾಯೇಲ್ಯನಾದ ಓಬೀಲ್; ಹೆಣ್ಣು ಕತ್ತೆಗಳ ಮೇಲೆ ಮೇರೊನೋತ್ಯನಾದ ಯೆಹ್ದೆಯ;
31 : ಆಡುಕುರಿಗಳ ಮೇಲೆ ಹಗ್ರೀಯನಾದ ಯಾಜೀಜ್.
32 : ವಿವೇಕಿಯೂ ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು ಮಂತ್ರಿಯಾಗಿದ್ದನು; ಹಕ್ಮೋನಿಯ ಮಗ ಯೆಹೀಯೇಲನು ರಾಜಪುತ್ರ ಪಾಲಕನಾಗಿದ್ದನು.
33 : ಅಹೀತೋಫೆಲನು ಅರಸನ ಮಂತ್ರಿ; ಅಕೀರ್ಯನಾದ ಹೂಷೈಯು ಅವನ ಮಿತ್ರ;
34 : ಬೆನಾಯನ ಮಗ ಯೆಹೋಯಾದಾವನೂ ಎಬ್ಯಾತಾರನೂ ಅಹೀತೋಫೆಲನ ಉತ್ತರಾಧಿಕಾರಿಗಳು; ಯೋವಾಬನು ಅರಸನ ಸೈನ್ಯಾಧಿಪತಿ.

· © 2017 kannadacatholicbible.org Privacy Policy