Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

1ಅರಸು


1 : ಜುದೇಯ ನಾಡಿನವನಾದ ಒಬ್ಬ ದೈವಭಕ್ತನು ಸರ್ವೇಶ್ವರನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಾರತಿ ಎತ್ತಲು ಪೀಠದ ಹತ್ತಿರ ನಿಂತುಕೊಂಡು.
2 : ಆ ಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಆ ಪೀಠವನ್ನು ಉದ್ದೇಶಿಸಿ, “ಎಲೈ ಪೀಠವೇ, ಪೀಠವೇ, ದಾವೀದನ ಸಂತಾನದಲ್ಲಿ ಯೋಷೀಯ ಎಂಬೊಬ್ಬನು ಹುಟ್ಟುವನು. ಅವನು, ನಿನ್ನ ಮೇಲೆ ಧೂಪಸುಡುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಬಲಿ ಕೊಡುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವುದು ಎಂದು ಸರ್ವೇಶ್ವರ ಹೇಳುತ್ತಾರೆ,” ಎಂದನು.
3 : ಇದಲ್ಲದೆ, “ನನ್ನ ಮಾತು ಸರ್ವೇಶ್ವರನದು ಎಂಬುದಕ್ಕೆ ಈ ಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಗುವುದೇ ಗುರುತಾಗಿರುವುದು,” ಎಂದು ಹೇಳಿದನು.
4 : ಬೇತೇಲಿನ ಪೀಠದ ಬಳಿ ನಿಂತಿದ್ದ ಅರಸನು ಆ ದೈವಭಕ್ತನ ಪೀಠಕ್ಕೆ ವಿರೋಧವಾಗಿ ನುಡಿದದ್ದನ್ನು ಕೇಳಿ ಕೈಚಾಚಿ, “ಅವನನ್ನು ಹಿಡಿಯಿರಿ,” ಎಂದು ಆಜ್ಞಾಪಿಸಿದನು. ಕೂಡಲೆ ಅವನ ಕೈ ಒಣಗಿಹೋಯಿತು. ಅವನು ಅದನ್ನು ಹಿಂತೆಗೆದುಕೊಳ್ಳಲಾಗಲಿಲ್ಲ.
5 : ಬಲಿಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಯಿತು. ಹೀಗೆ ಆ ದೈವಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಹೇಳಿದ ಗುರುತು ನೆರಬೇರಿತು.
6 : ಅರಸನು ಆ ಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರನು ಪ್ರಸನ್ನನಾಗುವಂತೆ ಬೇಡಿಕೊ; ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಅವರನ್ನು ನನ್ನ ಪರವಾಗಿ ಪ್ರಾರ್ಥಿಸು,” ಎಂದು ಕೇಳಿದನು. ಅಂತೆಯೇ ಆ ದೈವಭಕ್ತನು ಸರ್ವೇಶ್ವರನನ್ನು ಬೇಡಿಕೊಂಡನು; ಅರಸನ ಕೈವಾಸಿಯಾಗಿ ಮೊದಲಿನಂತೆ ಆಯಿತು.
7 : ಆಗ ಅರಸನು, “ನನ್ನ ಮನೆಗೆ ಬಾ; ಸ್ವಲ್ಪ ಊಟಮಾಡಿ ಸುಧಾರಿಸಿಕೊ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ,” ಎಂದನು.
8 : ಆ ದೈವಭಕ್ತನು, “ನೀವು ನನಗೆ ನಿಮ್ಮ ಆಸ್ತಿಯಲ್ಲಿ ಅರ್ಧ ಕೊಟ್ಟರೂ ನಾನು ನಿಮ್ಮ ಸಂಗಡ ಬರುವುದಿಲ್ಲ. ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವುದಿಲ್ಲ.
9 : ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಹಿಂದಿರುಗಿ ಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂದೂ ನನಗೆ ಸರ್ವೇಶ್ವರನ ಅಪ್ಪಣೆಯಾಗಿದೆ,” ಎಂದನು.
10 : ಅನಂತರ ಅವನು ಆ ದಾರಿಯನ್ನು ಬಿಟ್ಟು ಇನ್ನೊಂದು ದಾರಿಯನ್ನು ಹಿಡಿದು ಹೊರಟನು.
11 : ಬೇತೇಲಿನಲ್ಲಿ ಒಬ್ಬ ಮುದುಕ ಪ್ರವಾದಿ ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದೈವಭಕ್ತನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಅವನು ಅರಸನಿಗೆ ಹೇಳಿದ್ದನ್ನೂ ತಂದೆಗೆ ತಿಳಿಸಿದರು.
12 : “ಅವನು ಯಾವ ದಾರಿಯಿಂದ ಹೋದ?” ಎಂದು ತಂದೆ ಅವರನ್ನು ಕೇಳಲು, ಅವರು ಜುದೇಯ ನಾಡಿನ ಆ ದೈವಭಕ್ತ ಹೋದ ದಾರಿಯನ್ನು ತೋರಿಸಿದರು.
13 : ಆಗ ಅವನು ತನ್ನ ಮಕ್ಕಳಿಗೆ, “ಕತ್ತೆಗೆ ತಡಿಹಾಕಿರಿ,” ಎಂದು ಆಜ್ಞಾಪಿಸಲು ಅವರು ಹಾಕಿದರು. ಅವನು ಕತ್ತೆಯ ಮೇಲೆ ಕುಳಿತುಕೊಂಡು
14 : ಆ ದೈವಭಕ್ತನ ಹಿಂದೆಯೇ ಹೋಗಿ ಏಲಾವೃಕ್ಷದ ಕೆಳಗೆ ಕುಳಿತಿದ್ದ ಅವನನ್ನು ಕಂಡು, “ಜುದೇಯದಿಂದ ಬಂದ ದೈವಭಕ್ತನು ನೀನೋ?” ಎಂದು ಕೇಳಿದನು. ಅವನು ಹೌದೆಂದನು.
15 : ಆಗ ಆ ಮುದುಕನು, “ನೀನು ನನ್ನ ಮನೆಗೆ ಬಂದು ಊಟಮಾಡು,” ಎಂದು ಹೇಳಿದನು.
16 : ಅದಕ್ಕೆ ಅವನು, “ನಾನು ನಿನ್ನ ಸಂಗಡ ಬರಕೂಡದು;
17 : ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಬಂದ ದಾರಿಯನ್ನು ಬಿಟ್ಟು ಬೇರೆ ದಾರಿಯಿಂದ ಹಿಂದಿರುಗಿ ಹೋಗಬೇಕೆಂದೂ ನನಗೆ ಸರ್ವೇಶ್ವರನ ಅಪ್ಪಣೆಯಾಗಿದೆ,” ಎಂದು ಉತ್ತರಕೊಟ್ಟನು.
18 : ಆಗ ಆ ಮುದುಕನು, “ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಸಿಕೊಂಡು ನಿನ್ನನ್ನು ಕರೆದುಕೊಂಡು ಬರಬೇಕೆಂದು ಸರ್ವೇಶ್ವರನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ,” ಎಂದು ಹೇಳಿದನು. ಆದರೆ ಈ ಮಾತು ಸುಳ್ಳಾಗಿತ್ತು.
19 : ದೈವಭಕ್ತನು ಹಿಂದಿರುಗಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.
20 : ಅವರು ಊಟಮಾಡುತ್ತಿರುವಾದ ದೈವಭಕ್ತನನ್ನು ಹಿಂದಕ್ಕೆ ಕರೆದುತಂದ ಆ ಪ್ರವಾದಿಗೆ ಸರ್ವೇಶ್ವರ ಒಂದು ಸಂದೇಶವನ್ನು ದಯಪಾಲಿಸಿದರು.
21 : ಅವನು ಜುದೇಯನಾಡಿನ ಆ ದೈವಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರ ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದು ಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಅವರ ಆಜ್ಞೆಯನ್ನು ಮೀರಿ, ಅವಿಧೇಯನಾಗಿ
22 : ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕಾಗಿ ಹಿಂದಿರುಗಿ ಬಂದುದರಿಂದ ನಿನ್ನ ಶವ ನಿನ್ನ ಕುಟುಂಬ ಸ್ಮಶಾನ ಭೂಮಿಯನ್ನು ಸೇರುವುದೇ ಇಲ್ಲವೆಂದು ಸರ್ವೇಶ್ವರ ಹೇಳುತ್ತಾರೆ,” ಎಂದನು.
23 : ಅನ್ನಪಾನಗಳನ್ನು ತೆಗೆದುಕೊಂಡನಂತರ ಆ ಮುದುಕ ಪ್ರವಾದಿ ತಾನು ಕರೆದುತಂದ ಪ್ರವಾದಿಯನ್ನು ಕಳುಹಿಸಲು ಕತ್ತೆಗೆ ತಡಿಹಾಕಿಸಿದನು.
24 : ಆ ದೈವಭಕ್ತನು ಸ್ವಲ್ಪ ದೂರ ಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದುಹಾಕಿತು. ಅವನ ಶವ ದಾರಿಯಲ್ಲಿಯೇ ಬಿದ್ದಿತ್ತು; ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.
25 : ಹಾದು ಹೋಗುವವರು ಆ ಶವವು ದಾರಿಯಲ್ಲಿ ಬಿದ್ದು ಇರುವುದನ್ನೂ ಸಿಂಹವು ಅದರ ಬಳಿಯಲ್ಲೆ ನಿಂತಿರುವುದನ್ನೂ ಕಂಡು ಮುದುಕ ಪ್ರವಾದಿಯ ಊರಿಗೆ ಬಂದು ಅದನ್ನು ತಿಳಿಸಿದರು.
26 : ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿ, ಈ ಸುದ್ದಿಯನ್ನು ಕೇಳಿ, “ಆ ಶವವು ದೈವಭಕ್ತನದೇ ಆಗಿರಬೇಕು. ಅವನು ಸರ್ವೇಶ್ವರನ ಆಜ್ಞೆಗೆ ಅವಿಧೇಯನಾದುದರಿಂದ ಸರ್ವೇಶ್ವರ ಅವನ ವಿಷಯದಲ್ಲಿ ತಾವು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದರು. ಅದು ಅವನ ಮೇಲೆ ಹಾಗಿ ಅವನನ್ನು ಕೊಂದುಬಿಟ್ಟಿತು,” ಎಂದು ಹೇಳಿ,
27 : ಕತ್ತೆಗೆ ತಡಿಹಾಕಬೇಕೆಂದು ಮಕ್ಕಳಿಗೆ ಆಜ್ಞಾಪಿಸಿದನು. ಅವರು ಹಾಕಿದರು.
28 : ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಂiÀಲ್ಲಿ ನಿಂತಿರುವುದನ್ನೂ ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ. ಕತ್ತೆಯನ್ನು ಕೊಲ್ಲಲೂ ಇಲ್ಲ.
29 : ಪ್ರವಾದಿಯು ಆ ದೈವಭಕ್ತನ ಶವವನ್ನು ಹೂಳಿ ಗೋಳಾಡಬೇಕೆಂದು, ಕತ್ತೆಯ ಮೇಲೆ ಹಾಕಿ,
30 : ತನ್ನ ಊರಿಗೆ ತೆಗೆದುಕೊಂಡು ಬಂದು, ತನ್ನ ಸ್ಮಶಾನ ಭೂಮಿಯಲ್ಲಿ ಅದನ್ನು ಸಮಾಧಿಮಾಡಿದನು. ಅವರು, “ಅಯ್ಯೋ, ನನ್ನ ಸಹೋದರನೇ,” ಎಂದು ಗೋಳಾಡಿದರು.
31 : ಅನಂತರ ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ ನನ್ನ ಶವವನ್ನು ಆ ದೈವಭಕ್ತನ ಶವ ಇರುವಲ್ಲೇ ಸಮಾಧಿಮಾಡಿರಿ; ನನ್ನ ಎಲುಬುಗಳನ್ನು ಅವನ ಎಲುಬುಗಳಿರುವಲ್ಲೇ ಇಡಿ.
32 : ಅವನು ಸರ್ವೇಶ್ವರನ ಅಪ್ಪಣೆಯಿಂದ ಬೇತೇಲಿನ ಬಲಿಪೀಠಕ್ಕೆ ವಿರುದ್ಧ ಹಾಗು ಸಮಾರಿಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳಿಗೆ ವಿರುದ್ಧ ಹೇಳಿದ ಮಾತುಗಳು ನಿಸ್ಸಂದೇಹವಾಗಿ ನೆರವೇರುವುವು,” ಎಂದನು.
33 : ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ ಪದೇ ಪದೇ ಜನ ಸಾಮಾನ್ಯರನ್ನು ಉನ್ನತಸ್ಥಾನಗಳಿಗೆ ನೇಮಿಸಿದನು; ಮನಸ್ಸಿಗೆ ಬಂದವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.
34 : ಈ ಕಾರಣ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ವಿಸರ್ಜಿತರಾಗಿ ನಿರ್ನಾಮವಾದರು.

· © 2017 kannadacatholicbible.org Privacy Policy