1 :
ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.
2 : ಅಂತೆಯೇ ಅವನು ತನ್ನ ಆರುನೂರು ಮಂದಿ ಸೈನಿಕರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.
2 : ದಾವೀದನು, “ಹೌದು, ತಮ್ಮ ಸೇವಕನ ಸಾಹಸ ತಮಗೇ ಗೊತ್ತಾಗುವುದು,” ಎಂದನು. ಆಕೀಷನು, “ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇಮಿಸಿಕೊಳ್ಳುತ್ತೇನೆ,” ಎಂದನು.
3 : ಅವನೂ ಅವನ ಜನರೂ ತಮ್ಮ ತಮ್ಮ ಕುಟುಂಬಸಹಿತವಾಗಿ ಆಕೀಷನ ಊರಾದ ಗತ್ ಊರಿನಲ್ಲಿ ನೆಲಸಿದರು. ದಾವೀದನ ಹೆಂಡತಿಯರಾಗಿದ್ದ ಜೆಸ್ರೀಲಿನವಳಾದ ಅಹೀನೋವಮಳು ಹಾಗು ಕರ್ಮೆಲ್ಯನಾದ ನಾಬಾಲನ ಹೆಂಡತಿ ಆಗಿದ್ದ ಅಬೀಗೈಲಳು ಅವನ ಸಂಗಡ ಇದ್ದರು.
4 : ದಾವೀದನು ತಪ್ಪಿಸಿಕೊಂಡು ಗತ್ ಊರಿಗೆ ಹೋದನೆಂಬ ವರ್ತಮಾನವನ್ನು ಸೌಲನು ಕೇಳಿದಮೇಲೆ ಅವನನ್ನು ಬೆನ್ನಟ್ಟಿ ಹೋಗುವುದನ್ನು ಬಿಟ್ಟುಬಿಟ್ಟನು.
5 : ಒಂದು ದಿನ ದಾವೀದನು ಆಕೀಷನಿಗೆ, “ನಿಮ್ಮ ಸೇವಕನಾದ ನಾನು ನಿಮ್ಮ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದಾದರೆ ಯಾವುದಾದರೊಂದು ಹಳ್ಳಿಯಲ್ಲಿ ನನಗೆ ಸ್ಥಳ ಕೊಡಿಸಿ; ನಾನು ಅಲ್ಲೆ ವಾಸಿಸುವೆನು,” ಎಂದನು.
6 : ಆಕೀಷನು ಕೂಡಲೆ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟನು. ಆದುದರಿಂದ “ಚಿಕ್ಲಗ್” ಎಂಬುದು ಇಂದಿನವರೆಗೂ ಯೆಹೂದ ಅರಸರಿಗೆ ಸೇರಿದೆ.
7 : ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರ್ಷ ಮತ್ತು ನಾಲ್ಕು ತಿಂಗಳು ವಾಸವಾಗಿದ್ದನು.
8 : ಈ ಅವಧಿಯಲ್ಲಿ ಅವನು ಮತ್ತು ಅವನ ಜನರು ಗೆಷೂರ್ಯರ ಮೇಲೆ, ಗಿಜ್ರೀಯರ ಮೇಲೆ ಹಾಗು ಅಮಾಲೇಕ್ಯರ ಮೇಲೆ ದಾಳಿಮಾಡುತ್ತಿದ್ದರು. ಇವರುಗಳ ಪ್ರಾಂತ್ಯಗಳು ತೇಲಾಮಿನಿಂದ ಶೂರಿನವರೆಗೂ ಹಾಗು ಈಜಿಪ್ಟಿನವರೆಗೂ ವಿಸ್ತರಿಸಿತ್ತು.
9 : ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ನಿವಾಸಿಗಳನ್ನೆಲ್ಲ ಕೊಂದು, ದನ, ಕುರಿ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ದಾವೀದನು ಆಕೀಷನ ಬಳಿಗೆ ಹೋಗುತ್ತಿದ್ದನು.
10 : ಆಕೀಷನು, “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ?” ಎಂದು ಕೇಳುತ್ತಿದ್ದನು. ದಾವೀದನು ಅವನಿಗೆ, ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುತ್ತಿದ್ದನು.
11 : ದಾವೀದನು ತನ್ನ ಕೃತ್ಯವನ್ನು ಜನರು ಹರಡಬಹುದೆಂದು ನೆನೆಸಿ ಅವನು ಯಾರನ್ನೂ ಗತ್ ಊರಿಗೆ ತಾರದೆ ಸ್ತ್ರೀಪುರುಷರನ್ನೆಲ್ಲ ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಅವಧಿಯಲ್ಲಿ ಇದೇ ರೀತಿ ಮಾಡುತ್ತಿದ್ದನು.
12 : “ದಾವೀದನ ಹೆಸರು ಸ್ವಜನರಾದ ಇಸ್ರಯೇಲರಲ್ಲೇ ತಿರಸ್ಕøತವಾಗಿದೆ. ಆದುದರಿಂದ ಇವನು ಎಂದೆಂದಿಗೂ ತನ್ನ ಅಧೀನನಾಗಿಯೇ ಇರುವನು,” ಎಂದು ಆಕೀಷನು ನಂಬಿದ್ದನು.