1 : ದಾವೀದನ ಕಡೇ ಮಾತುಗಳಿವು: ಜೆಸ್ಸೆಯನ ಮಗ ದಾವೀದನ ನುಡಿಗಳಿವು: ಉನ್ನತಸ್ಥಾನವನ್ನು ಅಲಂಕರಿಸಿದವನು, ಯಕೋಬ ದೇವರಿಂದ ಅಭಿಷಿಕ್ತನಾದವನು, ಇಸ್ರಯೇಲರ ವರಕವಿ ಆಡಿದ ವಚನಗಳಿವು:
2 : ನನ್ನೊಳು ಉಸಿರಾಡಿತು ಸರ್ವೇಶ್ವರನಾತ್ಮ
ನನ್ನ ಬಾಯೊಳಿತ್ತು ಆತನ ವಾಕ್ಯ.
3 : ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು:
4 : ದೇವರಲ್ಲಿ ಭಯಭಕ್ತಿಯುಳ್ಳ ರಾಜನು ನೀತಿಯಿಂದ ಪ್ರಜೆಗಳನಾಳುವಾತನು ಉದಯಕಾಲದ ಸೂರ್ಯನಿಗೆ ಸಮಾನನು ಏರುವನಾತ ಮೇಘರಹಿತ ಪ್ರಾತಃ ಕಾಲದೊಳು ತೇಜೋಮಯನ್ನಾಗಿ ಮೊಳೆಯಿಸುವನು ಪಚ್ಚೆಪಸಿರನು ಮಳೆ ತೋಯ್ದ ನೆಲದೊಳು ಹುಲುಸಾಗಿ.
5 : ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ
ಮನೆತನ ಸುಸ್ಥಿರ
ಆತನೊಂದಿಗೆ ನಾ ಮಾಡಿಲ್ಲವೆ
ಚಿರವಾದ ಒಪ್ಪಂದ?
ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ
ನಿರ್ಭೀತ.
ಆತನೇ ನನ್ನುದ್ಧಾರಕ್ಕೆ ಮೂಲಾಧಾರ
ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ.
6 : ದುರುಳರಾದರೊ ದೂರವೆಸೆದ
ಕಾಡುಮುಳ್ಳುಗಳು
ಮುಟ್ಟಲಾಗದು ಅವುಗಳನು ಬರಿಗೈಯಿಂದ,
ಬಳಸಬೇಕು ಕಬ್ಬಿಣದಾಯುಧವನು,
ಮೊನೆ ಭರ್ಜಿಯನು,
ಇಲ್ಲವೆ ಸುಡಬೇಕು ಇದ್ದಲ್ಲೇ ಬೆಂಕಿಯಿಂದ.
7 : ದಾವೀದನ ರಣವೀರರ ಪಟ್ಟಿ: ತಹ್ಯೆಮೋನ್ಯನಾದ ಯೋಷೆಬಷ್ಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಎನ್ನಿಸಿಕೊಳ್ಳುವ ಇವನು ಒಮ್ಮೆಗೆ ಎಂಟುನೂರು ಮಂದಿಯನ್ನು ಕೊಂದನು.
8 : ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗ ಎಲ್ಲಾಚಾರನು. ಫಿಲಿಷ್ಟಿಯರು ಅಲ್ಲಿ ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ಪ್ರತಿಭಟಿಸಲು ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.
8 : ದಾವೀದನ ರಣವೀರರ ಪಟ್ಟಿ: ತಹ್ಯೆಮೋನ್ಯನಾದ ಯೋಷೆಬಷ್ಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಎನ್ನಿಸಿಕೊಳ್ಳುವ ಇವನು ಒಮ್ಮೆಗೆ ಎಂಟುನೂರು ಮಂದಿಯನ್ನು ಕೊಂದನು.
9 : ಇಸ್ರಯೇಲರು ಹೋದನಂತರ ಇವನು ಅಲ್ಲೇ ನಿಂತು, ಕತ್ತಿ ಹಿಡಿದು ಕೈಸೋತು ಮರಗಟ್ಟಿ ಹೋಗುವತನಕ, ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನ ಸರ್ವೇಶ್ವರ ಮಹಾಜಯವನ್ನುಂಟುಮಾಡಲು ಇಸ್ರಯೇಲರು ಸುಲಿದುಕೊಳ್ಳುವುದಕ್ಕಾಗಿಯೇ, ಹಿಂದಿರುಗಿದ್ದರು.
9 : ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗ ಎಲ್ಲಾಚಾರನು. ಫಿಲಿಷ್ಟಿಯರು ಅಲ್ಲಿ ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ಪ್ರತಿಭಟಿಸಲು ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.
10 : ಇಸ್ರಯೇಲರು ಹೋದನಂತರ ಇವನು ಅಲ್ಲೇ ನಿಂತು, ಕತ್ತಿ ಹಿಡಿದು ಕೈಸೋತು ಮರಗಟ್ಟಿ ಹೋಗುವತನಕ, ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನ ಸರ್ವೇಶ್ವರ ಮಹಾಜಯವನ್ನುಂಟುಮಾಡಲು ಇಸ್ರಯೇಲರು ಸುಲಿದುಕೊಳ್ಳುವುದಕ್ಕಾಗಿಯೇ, ಹಿಂದಿರುಗಿದ್ದರು.
11 : ಮೂರನೆಯವನು ಹರಾರ್ಯನಾದ ಅಗೇಯನ ಮಗ ಶಮ್ಮ ಎಂಬವನು. ಫಿಲಿಷ್ಟಿಯರು ದೊಡ್ಡ ಗುಂಪಾಗಿ ಒಂದು ಅಲಸಂದೆಯ ಹೊಲಕ್ಕೆ ಬಂದರು.
12 : ಇಸ್ರಯೇಲರು ಅವರ ಎದುರಿನಿಂದ ಓಡಿಹೋದಾಗ ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು ಫಿಲಿಷ್ಟಿಯರನ್ನು ಕೊಂದು ಹೊಲವನ್ನು ಕಾಪಾಡಿದನು. ಹೀಗೆ ಸರ್ವೇಶ್ವರ ಮಹಾಜಯವನ್ನುಂಟು ಮಾಡಿದರು.
13 : ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ಮೂರು ಮಂದಿ, ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ, ಸುಗ್ಗೀಕಾಲದಲ್ಲಿ ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿಬಂದು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಾಗ
14 : ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೆತ್ಲೆಹೇಮಿನಲ್ಲಿ ಕಾವಲುದಂಡನ್ನಿಟ್ಟಿದ್ದರು.
15 : ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ, “ಬೆತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು,” ಎಂದನು.
16 : ಕೂಡಲೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿಹೋಗಿ ಬೆತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ಅವನು ಅದನ್ನು ಕುಡಿಯಲು ಒಪ್ಪಲಿಲ್ಲ.
17 : “ಸರ್ವೇಶ್ವರಾ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ. ಇದು ಜೀವದಾಶೆ ತೊರೆದವರ ರಕ್ತ; ಇದನ್ನು ಕುಡಿಯುವುದೇ ಇಲ್ಲ,” ಎಂದು ಹೇಳಿ ಅದನ್ನು ಸರ್ವೇಶ್ವರನಿಗೆ ಸಮರ್ಪಣೆಯಾಗಿ ಹೊರಗೆ ಹೊಯ್ದುಬಿಟ್ಟನು. ಆ ಮೂರು ಮಂದಿ ಪರಾಕ್ರಮಿಗಳ ಕೃತ್ಯಗಳಿವು.
18 : ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಭರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದುದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.
19 : ಇವರಲ್ಲಿ ಘನತೆ ಗೌರವ ಪಡೆದ ನಾಯಕ ಇವನೇ. ಆದರೂ ಇವನು ಮೊದಲಿನ ಮೂರು ಮಂದಿಗೆ ಸಮಾನವಾಗಿರಲಿಲ್ಲ.
20 : ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ನಡೆಸಿದ್ದನು. ಉದಾಹರಣೆಗೆ: ಒಮ್ಮೆ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಸಿಂಹವೊಂದು ಗುಂಡಿಯಲ್ಲಿ ಬಿದ್ದಿತ್ತು. ಇವನು ಆ ಗುಂಡಿಗೆ ಇಳಿದುಹೋಗಿ ಅದನ್ನು ಕೊಂದನು.
21 : ಮತ್ತೊಮ್ಮೆ ಬಲಿಷ್ಟನಾದ ಒಬ್ಬ ಈಜಿಪ್ಟಿನವನನ್ನು ಕೊಂದನು. ಆ ಈಜಿಪ್ಟಿನವನ ಕೈಯಲ್ಲಿ ಒಂದು ಭರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಭರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನೇ ಕೊಂದನು.
22 : ಆ ಪರಾಕ್ರಮ ಕೃತ್ಯದಿಂದ ಯೆಹೋಯಾದಾವನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುಗೊಂಡನು.
23 : ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ನೇಮಿಸಿದ್ದನು.
24 : ಆ ಮೂವತ್ತು ಮಂದಿ ರಣವೀರರ ಪಟ್ಟಿ ಇದು: ಯೋವಾಬನ ತಮ್ಮನಾದ ಅಸಾಹೇಲನು, ಬೆತ್ಲೆಹೇಮಿನ ದೋದೋವಿನ ಮಗನಾದ ಎಲ್ಹಾನನು,
25 : ಹರೋದಿನವರಾದ ಶಮ್ಮ ಎಲೀಕರು, ಪೆಲೆಟಿನವನಾದ ಹೆಲೆಚ್,
26 : ತೆಕೋವದ ಇಕ್ಕೇಷನ ಮಗನಾದ ಈರಾ, ಅಣತೋತಿನವನಾದ ಅಬೀಯೆಜೆರ್,
27 : ಹುಷಾ ಊರಿನವನಾದ ಮೆಬುನ್ಹೈ,
28 : ಅಹೋಹಿನವನಾದ ಚಲ್ಮೋನ್, ನೆಟೋಫದವನಾದ ಮಹರೈ,
29 : ನೆಟೋಪದವನಾದ ಬಾಣನ ಮಗ ಹೇಲೆಬ್, ಬೆನ್ಯಾಮೀನ್ ನಾಡಿನ ಗಿಬೆಯ ಊರಿನ ರೀಬೈ ಎಂಬವನ ಮಗ ಇತ್ರೈ, ಪಿರಾತೋನ್ಯನಾದ ಬೆನಾಯ,
30 : ನಹಲೇಗಾಷಿನವನಾದ ಹಿದ್ದೈ,
31 : ಅರಾಬಾ ತಗ್ಗಿನವನಾದ ಅಬೀಅಲ್ಬೋನ್,
32 : ಬಹುರಿಮ್ಯನಾದ ಅಜ್ಮಾವೇತ್, ಶಾಲ್ಬೋನ್ಯನಾದ ಎಲೆಯಖ್ಬಾ ಯಾಷೇನನ ಮಕ್ಕಳು, ಯೋನಾತಾನನು,
33 : ಯರಾರ್ಯನಾದ ಶಮ್ಮ, ಹರಾರ್ಯನಾದ ಶಾರಾರನ ಮಗ ಅಹೀಯಾಮ್,
34 : ಮಾಕಾ ಊರಿನ ಅಹಸ್ಬೈ ಎಂಬುವನ ಮಗ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ್ ಎಂಬವನ ಮಗ ಎಲೀಯಾಮ್,
35 : ಕರ್ಮೆಲ್ಯನಾದ ಹೆಚ್ರೋ, ಅರ್ಬೀಯನಾದ ಪಾರೈ,
36 : ಚೋಬ ಊರಿನ ನಾತಾನ್ ಎಂಬವನ ಮಗ ಇಗಾಲ್, ಗಾದ್ಯನಾದ ಬಾನೀ,
37 : ಅಮ್ಮೋನಿಯನಾದ ಚೆಲೆಕ್, ಬೇರೋತ್ಯನೂ ಚೆರೂಯಳ ಮಗ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ,
38 : ಇತ್ರೀಯರಾದ ಈರಾ ಗಾರೇಬರು, ಹಿತ್ತಿಯನಾದ ಊರೀಯ,
39 : ಹೀಗೆ ಒಟ್ಟಿಗೆ ಮೂವತ್ತೇಳು ಮಂದಿ ರಣಧೀರರಿದ್ದರು.