Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ಎಜ್ರನು


1 : ಸೈರಸನು ಪರ್ಷಿಯ ದೇಶದ ಅರಸ. ಆತನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಸರ್ವೇಶ್ವರ ಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸಿದರು. ಅದಕ್ಕಾಗಿಯೆ ಅರಸ ಸೈರಸನನ್ನು ಪ್ರೇರೇಪಿಸಿ ಅವನ ರಾಜ್ಯದಲ್ಲೆಲ್ಲಾ ಡಂಗುರ ಹಾಗು ಪತ್ರಗಳ ಮೂಲಕ ಹೀಗೆ ಪ್ರಕಟಿಸುವಂತೆ ಮಾಡಿದರು:
2 : “ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತನ್ನು ಕೇಳಿರಿ: ಪರಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೊಟ್ಟಿದ್ದಾರೆ; ‘ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು’ ಎಂದು ಅವರು ಆಜ್ಞಾಪಿಸಿದ್ದಾರೆ.
3 : ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅಂಥವರು ಜುದೇಯ ನಾಡಿನ ಜೆರುಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ
4 : ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ, ಒಂದು ದೇವಾಲಯವನ್ನು ಕಟ್ಟಲಿ; ಅವರ ಸಂಗಡ ಅವರ ದೇವರಿರಲಿ! ಯಾಳುಗಳಾಗಿ ಅಳಿದುಳಿದವರು ಯಾವ ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರಿನ ಜನರು ಜೆರುಸಲೇಮಿನ ದೇವಾಲಯಕ್ಕಾಗಿ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕುಸಾಮಾಗ್ರಿ, ಪ್ರಾಣಿಪಶು, ಇವುಗಳನ್ನು ಕೊಟ್ಟು ಅವರಿಗೆ ಸಹಾಯ ಮಾಡಲಿ,” ಎಂದು ಪ್ರಚುರಪಡಿಸಿದನು.
5 : ಈ ಪ್ರಕಟನೆಯನ್ನು ಕೇಳಿ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಕ್ಕೆ ಸೇರಿದ ಮುಖ್ಯಸ್ಥರು, ಯಾಜಕರು, ಲೇವಿಯರು ಹಾಗು ದೈವಪ್ರೇರಿತರಾದ ಎಲ್ಲರು ಜೆರುಸಲೇಮಿನಲ್ಲಿ ಸರ್ವೇಶ್ವರನಿಗೆ ಪುನಃ ಆಲಯಕಟ್ಟುವುದಕ್ಕಾಗಿ ಹೊರಟರು.
6 : ಅವರ ನೆರೆಯವರೆಲ್ಲರು ಕೊಡುಗೆಗಳನ್ನು ಕೊಟ್ಟರು; ಬೆಳ್ಳಿ ಸಾಮಾನುಗಳು, ಬಂಗಾರದ ಆಭರಣಗಳು, ಪಶುಪ್ರಾಣಿಗಳು, ಶ್ರೇಷ್ಠವಸ್ತುಗಳು, ಇತ್ಯಾದಿಗಳನ್ನು ನೀಡಿ ಸಹಕರಿಸಿದರು.
7 : ಜೆರುಸಲೇಮಿನಿಂದ ಕೊಳ್ಳೆಹೊಡೆದು ತಂದಿದ್ದ ಸಾಮಾನುಗಳನ್ನು ನೆಬೂಕದ್ನೆಚ್ಚರನು ತನ್ನ ದೇವರ ಗುಡಿಯಲ್ಲಿ ಇಟ್ಟಿದ್ದನು..
8 : ಪರ್ಷಿಯಾದ ರಾಜ ಸೈರಸನು, ಸರ್ವೇಶ್ವರನ ಆಲಯಕ್ಕೆ ಸೇರಿದ್ದ ಸಾಮಾನುಗಳನ್ನು ಅಲ್ಲಿಂದ ತೆಗೆದಿ ಖಜಾಂಚಿಯಾಗಿದ್ದ ಮಿತ್ರದಾತನಿಗೆ ಒಪ್ಪಿಸಿದನು. ಮಿತ್ರದಾತನು ಅವುಗಳನ್ನು ಜುದೇಯದ ರಾಜ್ಯಪಾಲನಾದ ಶೆಷ್ಪಚ್ಚರನಿಗೆ ಲೆಕ್ಕಮಾಡಿಕೊಟ್ಟನು
9 : ಆ ಸಾಮಾನುಗಳ ಪಟ್ಟಿ ಹೀಗಿದೆ:-
10 : ಬಂಗಾರದ ಬೋಗುಣಿಗಳು 30 ಬೆಳ್ಳಿಯ ಬೋಗುಣಿಗಳು 1000 ಇತರ ಬೋಗುಣಿಗಳು 29 ಚಿನ್ನದ ಬಟ್ಟಲುಗಳು 30 ಕಡಿಮೆ ಮಟ್ಟದ ಬೆಳ್ಳಿಯ ಬಟ್ಟಲುಗಳು 410 ಇತರ ಪಾತ್ರೆಗಳು 1000
11 : ಬೆಳ್ಳಿಬಂಗಾರದ ನಾನಾ ಸಾಮಾನುಗಳ ಒಟ್ಟು ಸಂಖ್ಯೆ-5400. ಶೆಷ್ಪಚ್ಚರನು ಸೆರೆಯಲ್ಲಿದ್ದ ವರನ್ನು ಬಾಬಿಲೋನಿನಿಂದ ಜೆರುಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲ ಸಾಮಾನುಗಳನ್ನು ತೆಗೆದುಕೊಂಡು ಬಂದನು.
17 : ಹೇಗೆಂದರೆ, ವಷ್ಟಿರಾಣಿಯ ಈ ವರ್ತನೆ ಇತರ ಎಲ್ಲಾ ಸ್ತ್ರೀಯರಿಗೂ ತಿಳಿದು ಬಂದು ಅವರೂ ತಮ್ಮ ಗಂಡಂದಿರನ್ನು ತಿರಸ್ಕಾರಭಾವದಿಂದ ಕಾಣತೊಡಗುವರು. ‘ಅಹಷ್ಟೇರೋಷನು ರಾಣಿವಷ್ಟಿಗೆ ತನ್ನ ಮುಂದೆ ಬರಲು ಹೇಳಿಕಳುಹಿಸಿದನು; ಆದರೆ, ಆಕೆ ಬರಲು ನಿರಾಕರಿಸಿದಳು,’ ಎಂದು ಹೇಳಿಕೊಂಡು ಹೀಯಾಳಿಸುವರು.

· © 2017 kannadacatholicbible.org Privacy Policy