Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ನೆಹೆಮೀಯ


1 : ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಬುರುಜಿನವರೆಗೆ ಗೋಡೆಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು.
2 : ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಜೆರಿಕೋವಿನವರು; ಆಚೆಗೆ ಇಮ್ರಿಯ ಮಗನಾದ ಜಕ್ಕೂರನು.
3 : ಮೀನುಬಾಗಿಲನ್ನು ಕಟ್ಟಿದವರು ಹಸ್ಸೆನಾಹನ ಮನೆಯವರು. ಇವರು ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿದರು.
4 : ಅಲ್ಲಿಂದ ಮುಂದಕ್ಕೆ ಗೋಡೆಯನ್ನು ದುರಸ್ತಿಮಾಡಿಸಿದವನು ಊರೀಯನ ಮಗನೂ ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್; ಆಮೇಲ್ ಬೆರೆಕ್ಕನ ಮಗನೂ ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ಆಚೆಗೆ ಬಾನನ ಮಗ ಚಾದೋಕ್; ಮುಂದಕ್ಕೆ ತೆಕೋವದವರು.
5 : ತೆಕೋವದ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.
6 : ಹಳೆಯದು ಎಂಬ ಬಾಗಿಲನ್ನು ದುರಸ್ತಿ ಮಾಡಿದವರು ಪಾಸೇಹನ ಮಗ ಯೋಯಾದನು ಹಾಗು ಬೆಸೋದ್ಯನ ಮಗ ಮೆಷುಲ್ಲಾಮನು. ಇವರು ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದ, ತಿರುಗಣಿ ಅಗುಳಿಗಳನ್ನು ಹಚ್ಚಿದರು.
7 : ಅಲ್ಲಿಂದ ನದಿಯಾಚೆಯ ರಾಜ್ಯಪಾಲನ ನ್ಯಾಯಸ್ಥಾನದವರೆಗೆ ಗಿಬ್ಯೋನಿನವನಾದ ಮೆಲೆಟ್ಯ, ಮೇರೋನೋತಿನವನಾದ ಯಾದೋನ್ ಇವರೂ ಗಿಬ್ಯೋನ್ ಮತ್ತು ಮಿಚ್ಚ ಊರುಗಳವರು ದುರಸ್ತಿ ಮಾಡಿದರು.
8 : ಇವರ ಆಚೆಗೆ ಹರ್ಹಯನ ಮಗನಾದ ಅಕ್ಕಸಾಲಿಗರ ಉಜ್ಜೀಯೇಲ್; ಆಮೇಲೆ ಬುಕ್ಕಿಟ್ಟುಗಾರರ ಹನನ್ಯ; ಇವರು ಅಗಲ ಗೋಡೆಯೆನಿಸಿಕೊಳ್ಳುವ ಗೋಡೆಯ ಈಚೆಗಿರುವ ಜೆರುಸಲೇಮಿನ ಭಾಗವನ್ನು ಗೋಡೆಯೊಳಗೆ ಸೇರಿಸಲಿಲ್ಲ.
9 : ಇದರ ಆಚೆಗೆ ಜೆರುಸಲೇಮಿನ ಅರೆನಾಡೊಡೆಯನೂ ಹೂರನ ಮಗನೂ ಆದ ರೆಫಾಯ.
10 : ಇವನ ಮುಂದಕ್ಕೆ ಹರೂಮಫನ ಮಗ ಯೆದಾಯ; ಇವನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ದುರಸ್ತಿಮಾಡಿದನು. ಇವನ ಆಚೆಗೆ ಹಷಬ್ನೇಯನ ಮಗ ಹಟ್ಟೂಷ್,
11 : ಗೋಡೆಯ ಇನ್ನೊಂದು ಬಾಗವನ್ನೂ ಒಲೆ ಬುರುಜನ್ನೂ ಸರಿಪಡಿಸಿದವರು ಹಾರೀಮನ ಮಗ ಮಲ್ಕೀಯನು ಹಾಗು ಪಹತ್ ಮೋವಾಬ್ಯನಾದ ಹಷೂಬನು.
12 : ಇವನ ಸಮೀಪದಲ್ಲಿ ಗೋಡೆಯನ್ನು ದುರಸ್ತುಮಾಡಿದವರು ಜೆರುಸಲೇಮಿನ ಅರೆನಾಡೊಡೆಯನೂ ಹಲ್ಲೊ ಹೇಷನ ಮಗನೂ ಆದ ಶಲ್ಲೂಮನು ಹಾಗು ಅವನ ಕುಮಾರಿಯರು.
13 : ಕಣಿವೆಯ ಬಾಗಿಲನ್ನು ಸರಿಪಡಿಸಿದವರು ಹಾನೂನನು ಹಾಗು ಜಾನೋಹ ಊರಿನವರು. ಇವರು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿ ಅಲ್ಲಿಂದ ತಿಪ್ಪೆ ಬಾಗಿಲಿನವರೆಗೂ ಸಾವಿರ ಮೊಳದ ಗೋಡೆಯನ್ನು ಕಟ್ಟಿದರು.
14 : ತಿಪ್ಪೆಬಾಗಿಲನ್ನು ಸರಿಪಡಿಸಿದವನು ಬೇತ ಹಕ್ಕೆರೆಮಿನ ನಾಡೊಡೆಯನೂ ರೇಕಾಬನ ಮಗನೂ ಆದ ಮಲ್ಕೀಯನು; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿದನು.
15 : ಬುಗ್ಗೆಬಾಗಿಲನ್ನು ದುರಸ್ತಿಪಡಿಸಿದವನು ಮಿಚ್ಪದ ನಾಡೊಡೆಯನೂ ಕೊಲ್ರ್ಹೇಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ, ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ, ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು.
16 : ಇವನ ಆಚೆ ಅಂದರೆ, ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ, ಇವುಗಳವರೆಗೂ ದುರಸ್ತು ಮಾಡಿದವನು ಬೇತ್ಚೂರಿನ ಅರೆನಾಡೊಡೆಯನೂ ಅಜ್ಬೂಕನ ಮಗನೂ ಆದ ನೆಹೆಮೀಯನು.
17 : ಇವನ ಆಚೆ ದುರಸ್ತಿ ಕಾರ್ಯವನ್ನು ಕೈಗೊಂಡವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್, ಇವನ ಸಮೀಪದಲ್ಲಿ ತನ್ನ ನಾಡಿನವರೊಡನೆ ಕಟ್ಟುತ್ತಿದ್ದ ಕೆಯೀಲದ ಅರೆನಾಡೊಡೆಯನಾದ ಹಷಬ್ಯ ಇವರು.
18 : ಇವರ ಆಚೆ, ಇವರ ಬಂಧುಗಳಲ್ಲಿ ಕೆಯೀಲದ ಎರಡನೆಯ ಅರೆನಾಡೊಡೆಯನೂ ಹೇನಾದಾದನ ಮಗನೂ ಆದ ಬಲ್ವೈ.
19 : ಇವನ ಸಮೀಪದಲ್ಲಿ ಗೋಡೆಯ ಇನ್ನೊಂದು ಭಾಗವನ್ನು ಅಂದರೆ, ಗೋಡೆಯ ಮೂಲೆಯಲ್ಲಿರುವ ಆಯುಧಶಾಲೆಗೆ ಹೋಗುವ ಮೆಟ್ಟಲುಗಳ ಎದುರಿಗಿರುವ ಭಾಗವನ್ನು ಮಿಚ್ಪದ ಅಧಿಕಾರಿಯೂ ಯೇಷೂವನ ಮಗನೂ ಆದ ಏಜೆರನು ಸರಿಪಡಿಸಿದನು.
20 : ಇವನ ಆಚೆ, ಗೋಡೆಯ ಇನ್ನೊಂದು ಭಾಗವನ್ನು ಅಂದರೆ, ಮೂಲೆಯಿಂದ ಮಹಾಯಾಜಕನಾದ ಎಲ್ಯಾಷೀಬನ ಮನೆಯ ಬಾಗಿಲಿನವರೆಗೆ, ಜಕ್ಕೈಯ ಮಗನಾದ ಬಾರೂಕನು ಆಸಕ್ತಿ ಇಂದ ಭದ್ರಪಡಿಸಿದನು.
21 : ಇವನ ಆಚೆ, ಗೋಡೆಯ ಇನ್ನೊಂದು ಭಾಗವನ್ನು ಅಂದರೆ, ಎಲ್ಲಾಷೀಬನ ಮನೆಯ ಬಾಗಿಲಿನಿಂದ ಅದೇ ಮನೆಯ ಕೊನೆಯವರೆಗೆ, ಹಕ್ಕೋಚನ ಮೊಮ್ಮಗನೂ ಊರೀಯನ ಮಗನೂ ಆದ ಮೆರೇಮೋತನು ದುರಸ್ತಿಮಾಡಿಸಿದನು.
22 : ಮುಂದಿನ ಭಾಗವನ್ನು ಕಟ್ಟಿದವರು ಜೋರ್ಡನ್ ನದಿಯ ಕಣಿವೆಯಲ್ಲಿ ವಾಸಿಸುತ್ತಿದ್ದ ಯಾಜಕರು.
23 : ಇವರ ಆಚೆ, ಬೆನ್ಯಾಮೀನ್ ಹಷೂಬರು; ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ದುರಸ್ತಿಮಾಡಿಸಿದರು. ಇವರ ಆಚೆ, ಅನನ್ಯನ ಮೊಮ್ಮಗನೂ ಮಾಸೇಯನ ಮಗನ ಆದ ಅಜರ್ಯ; ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಸರಿಪಡಿಸಿದನು.
24 : ಇವನ ಆಚೆ, ಅಜರ್ಯನ ಮನೆಯಿಂದ ಮೂಲೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ದುರಸ್ತಿಮಾಡಿದವನು ಹೇನಾದಾದನ ಮಗನಾದ ಬಿನ್ನೂಯ್.
25 : ಸೆರೆಮನೆಯ ಅಂಗಳದ ಹತ್ತಿರ ಮೇಲಣ ಅರಮನೆಯ ಗೋಡೆಯನ್ನು ಮೀರಿ ಬರುವ ಮೂಲೆ ಬುರುಜಿನ ಎದುರಿನ ಭಾಗವನ್ನು ಊಜೈಯ ಮಗ ಪಾಲಾಲನೂ ಇವನ ಆಚೆಯಲ್ಲಿ ಪರೊಷನ ಮಗ ಪೆದಾಯನೂ ಸರಿಪಡಿಸಿದರು.
26 : ಆ ಮೂಲೆ ಬುರುಜಿನ ಮತ್ತು ನೀರು ಬಾಗಿಲಿನ ಪೂರ್ವ ದಿಕ್ಕಿಗಿರುವ ಓಫೇಲ್ ಗುಡ್ಡವು ದೇವಸ್ಥಾನ ಪರಿಚಾರಕರ ನಿವಾಸಸ್ಥಾನ.
27 : ಆ ದೊಡ್ಡ ಮೂಲೆಬುರುಜಿನ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ದುರಸ್ತಿಮಾಡಿದರು.
28 : ಯಾಜಕರು ಕುದುರೆಬಾಗಿಲಿನ ಆಚೆ ದಿಣ್ಣೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಸರಿಮಾಡಿದರು.
29 : ಇವರ ಆಚೆ, ಇಮ್ಮೇರನ ಮಗ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ದುರಸ್ತಿಮಾಡಿದನು. ಇವನ ಆಚೆ, ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು.
30 : ಇವನ ಆಚೆ ಶೆಲೆಮ್ಯನ ಮಗನಾದ ಹನನ್ಯ; ಗೋಡೆಯ ಇನ್ನೊಂದು ಭಾಗವನ್ನು ಸರಿಮಾಡಿದವನು ಚಾಲಾಫನ ಆರನೆಯ ಮಗನಾದ ಹಾನೂನ್; ಇವನ ಆಚೆ, ಅಂದರೆ ತನ್ನ ಸ್ವಂತ ಕೊಠಡಿಯ ಮುಂದೆ ಬರೆಕ್ಕನ ಮಗನಾದ ಮೆಷುಲ್ಲಾಮ್.
31 : ಇನ್ನೂ ಮುಂದಕ್ಕೆ ಅಕ್ಕಸಾಲಿಗರ ಮಲ್ಕೀಯ; ಇವನು ದಂಡುಕೂಡುವ ಬಾಗಿಲಿನ ಎದುರಿನಲ್ಲಿರುವ ದೇವಸ್ಥಾನ ಪರಿಚಾರಕರ ಮತ್ತು ವರ್ತಕರ ಕೇರಿಯವರೆಗೂ ಮೂಲೆ ಯುಪ್ಪರಿಗೆಯವರೆಗೂ ದುರಸ್ತಿಮಾಡಿದನು.
32 : ಈ ಮೂಲೆಯುಪ್ಪರಿಗೆಗೂ ಕುರಿಬಾಗಿಲಿಗೂ ನಡುವೆಯಿದ್ದ ಗೋಡೆಯನ್ನು ಸರಿಮಾಡಿದವರು ಅಕ್ಕಸಾಲಿಗರು ಹಾಗು ವರ್ತಕರು.

· © 2017 kannadacatholicbible.org Privacy Policy