Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ನೆಹೆಮೀಯ


1 : ಗೋಡೆಯನ್ನು ಕಟ್ಟಿ ಮುಗಿಸಿದನಂತರ ನಾನು ಕದಗಳನ್ನು ಹಚ್ಚಿಸಿದೆ; ದ್ವಾರಪಾಲಕರನ್ನೂ ಗಾಯಕರನ್ನೂ ಲೇವಿಯರನ್ನೂ ನೇಮಿಸಲಾಯಿತು.
2 : ಆಮೇಲೆ ನನ್ನ ತಮ್ಮ ಹನಾನಿಗೆ ಹಾಗು ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ ದುರ್ಗಾ ಅಧಿಕಾರಿಯೂ ಆಗಿದ್ದ ಹನನ್ಯನಿಗೆ ಜೆರುಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆ.
3 : ಅವರಿಗೆ, “ಬಿಸಿಲೇರುವುದಕ್ಕಿಂತ ಮೊದಲೇ ಜೆರುಸಲೇಮಿನ ಬಾಗಿಲುಗಳನ್ನು ತೆರೆಯಬಾರದು; ಕಾವಲುಗಾರರು ಇನ್ನೂ ಇರುವಲ್ಲೇ ಕದಗಳನ್ನು ಮುಚ್ಚಿ ಭದ್ರಪಡಿಸಬೇಕು. ಇದಲ್ಲದೆ, ಜೆರುಸಲೇಮಿನ ನಿವಾಸಿಗಳಲ್ಲೇ ಕಾವಲುಗಾರರನ್ನು ಗೊತ್ತುಮಾಡಿರಿ. ಪ್ರತಿಯೊಬ್ಬನನ್ನು ಅವನವನ ಮನೆಯ ಎದುರಿನಲ್ಲೇ ಕಾವಲಿರುವಂತೆ ನೇಮಿಸಿರಿ,” ಎಂದು ಆಜ್ಞಾಪಿಸಿದೆ.
4 : ಪಟ್ಟಣವೇನೊ ಸವಿಸ್ತಾರವಾಗಿತ್ತು. ಆದರೆ ಅದರೊಳಗಿದ್ದ ಜನ ಬಹಳ ಸ್ವಲ್ಪ ಮಂದಿ. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.
5 : ಜನ ಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷಮದಲ್ಲಿ ಗ್ರಂಥವನ್ನು ತೆರೆದ ಕೂಡಲೆ, ಎಲ್ಲರು ಎದ್ದುನಿಂತರು.
5 : ಹೀಗಿರಲು, ನಾನು ನನ್ನ ದೇವರ ಪ್ರೇರಣೆಯಿಂದ ಶ್ರೀಮಂತರನ್ನು, ಅಧಿಕಾರಿಗಳನ್ನು ಹಾಗು ಜನಸಾಮಾನ್ಯರನ್ನು ಜನಗಣತಿಗಾಗಿ ಸಭೆಸೇರಿಸಿದೆ. ಆಗ ಜೆರುಸಲೇಮಿಗೆ ಮೊದಲು ಹಿಂದಿರುಗಿ ಬಂದವರ ಹೆಸರುಗಳ ಪಟ್ಟಿ ನನಗೆ ಸಿಕ್ಕಿತು. ಅದರಲ್ಲಿ ಹೀಗೆ ಬರೆದಿತ್ತು:
6 : ಸೆರೆಯಿಂದ ಹಿಂತಿರುಗಿ ಬಂದ ಯೆಹೂದ ಜನಾಂಗದವರ ಪಟ್ಟಿ: ಬಾಬಿಲೋನಿನ ಅರಸ ನೆಬೂಕದ್ನೆಚ್ಚರನಿಂದ ಸೆರೆಗೆ ಒಯ್ಯಲ್ಪಟ್ಟವರಲ್ಲಿ ಜೆರುಸಲೇಮಿಗೂ ಜುದೇಯ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಹಿಂದಿರುಗಿದವರು ಇವರು: ಅ. ಇವರ ನಾಯಕರಲ್ಲಿ
7 : ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕ್ಕೆ, ಬಿಲ್ಷಾನ್, ಮಿಸ್ಪೆರತ್, ಬಿಗ್ವೈ, ನೆಹೂಮ್ ಹಾಗು ಬಾಣ ಎಂಬವರು: ಆ. ಅವರ ಜನಸಾಮಾನ್ಯರಲ್ಲಿ :
8 : ಪರೋಷಿನವರು 2172
9 : ಶೆಫಟ್ಯನವರು 372
10 : ಆರಹನವರು
11 : ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬ್ ಸಂತಾನದವರು 2818
12 : ಏಲಾಮಿನವರು 1254
13 : ಜತ್ತೂವಿನವರು 845
14 : ಜಕ್ಕೈಯವರು 760
15 : ಬಿನ್ನೂಯವರು 648
16 : ಬೇಬೈಯವರು 628
17 : ಅಜ್ಗಾದಿನವರು 2322
18 : ಅದೋನೀಕಾಮಿನವರು 667
19 : ಬಿಗ್ವೈಯವರು 2067
20 : ಅದೀನನವರು 665
21 : ಅಟೇರಿನವರಾದ ಹಿಜ್ಕೀಯನ ಸಂತಾನದವರು
22 : ಹಾಷುಮಿನವರು 328
23 : ಬೇಷೈಯವರು 324
24 : ಹಾರಿಫಿನವರು 112
25 : ಗಿಬ್ಯೋನಿನವರು 95
26 : ಬೆತ್ಲೆಹೇಮ್ ನೆಟೋಫ ಊರುಗಳವರು 188
27 : ಅನಾತೋತ್ ಊರಿನವರು 128
28 : ಬೇತಜ್ಮಾವೇತಿನವರು 42
29 : ಕಿರ್ಯತ್ಯಾರೀಮ್ ಕೆಫೀರಾ ಬೇರೋತ್ ಊರುಗಳವರು 743
30 : ರಾಮಾ, ಗೆಬ ಊರುಗಳವರು 621
31 : ಮಿಕ್ಮಾಸಿನವರು 122
32 : ಬೇತೇಲ್, ಅಯಿ ಎಂಬ ಊರುಗಳವರು 123
33 : ಎರಡನೆಯ ನೆಬೋನಿನವರು 52
34 : ಎರಡನೆಯ ಏಲಾಮಿನವರು 1254
35 : ಹಾರಿಮನವರು 320
36 : ಜೆರಿಕೋವಿನವರು 345
37 : ಲೋದ್, ಹಾದೀದ್, ಓನೋ ಎಂಬ ಊರುಗಳವರು 721
38 : ಸೆನಾಹನವರು 3930
39 : ಯಾಜಕರಲ್ಲಿ - ಯೆದಾಯನವರಾದ ಯೇಷೂವನ ಮನೆಯವರು 973
40 : ಇಮ್ಮೇರನವರು 1052
41 : ಪಷ್ಹೂರನವರು 1247
42 : ಹಾರಿಮನವರು 1017
43 : ಲೇವಿಯರಲ್ಲಿ - ಹೋದವ್ಯನವರಾದ ಯೇಷೂವ, ಕದ್ಮೀಯೇಲ್ ಇವರ ಸಂತಾನದವರು 74
44 : ಗಾಯಕರಲ್ಲಿ - ಆಸಾಫ್ಯರು 148
45 : ದ್ವಾರಪಾಲಕರಲ್ಲಿ - ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟಾ, ಶೋಬೈ ಇವರ ಸಂತಾನದವರು ಒಟ್ಟು 138
46 : ದೇವಸ್ಥಾನ ಪರಿಚಾರಕರಲ್ಲಿ -ಜೀಹ, ಹಸೂಫ, ಟಬ್ಬಾವೋತ್, ಕೇರೋಸ್, ಸೀಯ,
47 : ಪಾದೋನ್, ಲೆಬಾನ, ಹಗಾಬ,
48 : ಸಲ್ಮೈ, ಹಾನಾನ್, ಗಿದ್ದೇಲ್,
49 : ಗಹರ್, ರೆವಾಯ, ರೆಚೀನ್,
50 : ನೆಕೋದ, ಗಜ್ಜಾಮ್,
51 : ಉಜ್ಜ, ಪಾಸೇಹ,
52 : ಬೇಸೈ, ಮೆಯನೀಮ್, ನೆಫೀಷೆಸೀಮ್
53 : ಬಕ್ಬೂಕ್, ಹಕ್ಕೂಫ, ಹರ್ಹೂರ್, ಬಚ್ಲೂತ್, ಮೆಹೀದ,
54 : ಹರ್ಷ, ಬರ್ಕೋಸ್,
55 : ಸೀಸೆರ, ತೆಮಹ,
56 : ನೆಚೀಹ, ಹಟೀಫ ಇವರ ಸಂತಾನದವರು.
57 : ಸೊಲೊಮೋನನ ದಾಸರಲ್ಲಿ -ಸೋಟೈ, ಸೋಫೆರೆತ್, ಪೆರೀದ, ಯಾಲ, 58ದರ್ಕೋನದ, ಗಿದೇಲ್, ಶೆಫಟ್ಯ, ಹಟ್ಟೀಲ್, 59ಪೋಕೆರೆತ್ ಹಚ್ಚೆಬಾಯೀಮ್, ಆಮೋನ್ ಇವರ ಸಂತಾನದವರು.
58 : ದರ್ಕೋನದ, ಗಿದೇಲ್, ಶೆಫಟ್ಯ, ಹಟ್ಟೀಲ್
59 : ಪೋಕೆರೆತ್ ಹಚ್ಚೆಬಾಯೀಮ್, ಆಮೋನ್ ಇವರ ಸಂತಾನದವರು.
60 : ಎಲ್ಲಾ ದೇವಸ್ಥಾನ ಪರಿಚಾರಕರು ಹಾಗು ಸೊಲೊಮೋನನ ಸೇವಕರು ಒಟ್ಟು - 392 ಮಂದಿ.
61 : ತೇಲ್ಮೆಲಹ, ತೇಲ್ಹರ್ಷ, ಕೆರೂಬದ್ದೋನ್, ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ ತಾವು ಇಸ್ರಯೇಲರೆಂಬುದನ್ನು ಸ್ಥಾಪಿಸಲಾರದವರಾದ 62ದೆಲಾಯ ಟೋಬೀಯ ನೆಕೋದ ಇವರ ಸಂತಾನದವರು
62 : ದೆಲಾಯ ಟೋಬೀಯ ನೆಕೋದ ಇವರ ಸಂತಾನದವರು
63 : ಯಾಜಕರಲ್ಲಿ ಹೋಬಾಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು ತಮ್ಮ ವಂಶಾವಳಿಯನ್ನು ತೋರಿಸಲಾರದೆ ಹೋದರು. (ಈ ಬರ್ಜಿಲ್ಲೈ ಎಂಬುವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನು ಇಟ್ಟುಕೊಂಡಿದ್ದನು.)
64 : ಇವರು ತಮ್ಮ ವಂಶಾವಳಿ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅಶ್ಮದ್ಧರೆಂದು ಯಾಜಕಾ ಸೇವೆಯಿಂದ ಬಹಿಷ್ಕøತರಾದರು.
65 : ಊರಿಮ್‍ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳನ್ನು ಭೋಜನ ಮಾಡಬಾರದೆಂಬುದಾಗಿ ರಾಜ್ಯಪಾಲ ತೀರ್ಪು ಮಾಡಿದನು.
66 : ಸರ್ವಸಮೂಹದವರ ಒಟ್ಟು ಸಂಖ್ಯೆ - ನಾಲ್ವತ್ತೆರಡು ಸಾವಿರದ ಮುನ್ನೂರರುವತ್ತು.
67 : ಈ ಸಂಖ್ಯೆಯಲ್ಲಿ ಎಣಿಕೆಯಾಗದ ಅವರ ದಾಸದಾಸಿಯರು ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ. ಅವರ ಗಾಯಕರೂ ಗಾಯಕಿಯರೂ ಇನ್ನೂರ ನಾಲ್ವತ್ತೈದು ಮಂದಿ.
68 : ಅವರಿಗೆ ಏಳುನೂರ ಮೂವತ್ತಾರು ಕುದುರೆಗಳೂ ಇನ್ನೂರ ನಾಲ್ವತ್ತೈದು ಹೇಸರಕತ್ತೆಗಳೂ
69 : ನಾನೂರ ಮೂವತ್ತೈದು ಒಂಟೆಗಳೂ ಆರು ಸಾವಿರದ ಏಳುನೂರಿಪ್ಪತ್ತು ಕತ್ತೆಗಳೂ ಇದ್ದವು.
70 : ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕ್ಕೆ ಬೇಕಾದ ದ್ರವ್ಯಸಹಾಯ ನೀಡಿದರು. ತಿರ್ಷಾತಾ ಎನಿಸಿಕೊಳ್ಳುವ ರಾಜ್ಯಪಾಲ ಭಂಡಾರಕ್ಕೆ ಕೊಟ್ಟದ್ದು - ಎಂಟು ಕಿಲೋಗ್ರಾಂ ಬಂಗಾರ. ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.
71 : ಬೇರೆ ಕೆಲವು ಮಂದಿ ಗೋತ್ರ ಪ್ರಧಾನರು ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು ನೂರ ಅರವತ್ತೆಂಟು ಕಿಲೋಗ್ರಾಂ ಬಂಗಾರ; ಸಾವಿರದ ಇನ್ನೂರ ಐವತ್ತು ಕಿಲೋಗ್ರಾಂ ಬೆಳ್ಳಿ
72 : ಉಳಿದ ಜನರು ಕೊಟ್ಟದ್ದು - ನೂರ ಅರವತ್ತೆಂಟು ಕಿಲೋಗ್ರಾಂ ಬಂಗಾರ; ನೂರ ನಲವತ್ತು ಕಿಲೋಗ್ರಾಂ ಬೆಳ್ಳಿ, ಅರವತ್ತೇಳು ಯಾಜಕವಸ್ತ್ರಗಳು.
73 : ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಜನಸಾಮಾನ್ಯರು, ದೇವಸ್ಥಾನದ ಪರಿಚಾರಕರು ಅಂತೂ ಇಸ್ರಯೇಲರೆಲ್ಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.

· © 2017 kannadacatholicbible.org Privacy Policy