1 : ಪ್ರಭುವಿನಾಲಯಕೆ
ಹೋಗೋಣ ಬಾ ಎಂದಾಗ /
ಆಯಿತೆನಗೆ ಆನಂದ, ಜನರೆನ್ನ ಕರೆದಾಗ
2 : ನಮ್ಮ ಕಾಲುಗಳು ಓ ಜೆರುಸಲೇಮೇ /
ತಲುಪಿವೆ ನಿನ್ನ ಪುರದ್ವಾರಗಳನೇ
3 : ನೋಡು, ಜೆರುಸಲೇಮ್ ಪಟ್ಟಣವಿದು /
ಗಟ್ಟಿಯಾಗಿಯೆ ಕಟ್ಟಲ್ಪಟ್ಟಿಹುದು
4 : ಕುಲಗಳು ಯಾತ್ರೆಯಾಗಿ ಬರುವುವು ಇಲ್ಲಿಗೆ /
ಮಾಡುವರಿಲ್ಲಿಯೆ ಪ್ರಭುವಿನ ನಾಮ ಕೀರ್ತನೆ /
ಪಾಲಿಪರಿಂತು ಇಸ್ರೇಲರಿಗೆ ವಿಧಿಸಿದಾಜ್ಞೆ
5 : ಸ್ಥಾಪಿತವಾಗಿವೆಯಿಲ್ಲಿ ನ್ಯಾಯಪೀಠಗಳು /
ದಾವೀದನ ಮನೆತನದವರ ಸಿಂಹಾಸನ
ಗಳು
6 : ಜೆರುಸಲೇಮಿನ ಶುಭಕ್ಕಾಗಿ ಮಾಡಿರಿ
ಪ್ರಾರ್ಥನೆ /
“ಜೆರುಸಲೇಮ್, ನಿನ್ನಭಿಮಾನಿಗಳಿಗೆ
ಪ್ರವರ್ಧನೆ
7 : ಶುಭವಿರಲೀ ನಿನ್ನೀ - ಪೌಳಿಗೋಡೆಗಳೊಳಗೆ /
ಸಂರಕ್ಷಣೆ ಇರಲಿ ನಿನ್ನ ಅರಮನೆಗಳೊಳಗೆ”
8 : ನನ್ನ ಬಂಧುಬಳಗದವರ ನಿಮಿತ್ತ /
“ನಿನಗೆ ಶುಭವಿರಲಿ” ಎಂಬುದು ನನ್ನ ಮತ
9 : ನಮ್ಮ ಸ್ವಾಮಿದೇವರ ಮಂದಿರದ ನಿಮಿತ್ತ /
ಹರಸುವೆ ನಿನ್ನ ಸುಕ್ಷೇಮವನು ಹಾರೈಸುತ //