1 : ಎಷ್ಟುಕಾಲ ಪ್ರಭು, ನೀ ಎನ್ನ ಪೂರ್ತಿ ಮರೆತಿರುವೆ? / ಇನ್ನೆಷ್ಟರ ತನಕ ನೀನೆನಗೆ ವಿಮುಖನಾಗಿರುವೆ? //
2 : ಎನಿತುಕಾಲ ನಾ ಚಿಂತೆಯಿಂದಿರಬೇಕು?/
ದಿನವೆಲ್ಲಾ ಮನದಲ್ಲಿ ನೊಂದಿರಬೇಕು?/
ನನ್ನ ಮೇಲೆ ವೈರಿ ದೊರೆತನ ಮಾಡಬೇಕು?//
3 : ಹೇ ಪ್ರಭು, ಹೇ ದೇವ, ಎನ್ನ ವೀಕ್ಷಿಸಿ ಸದುತ್ತರ
ಪಾಲಿಸು /
ಮರಣನಿದ್ರೆ ಬಾರದಂತೆ ನನ್ನ ನೇತ್ರಗಳನು
ಬೆಳಗಿಸು //
4 : ತಾನು ಜಯಗಳಿಸಿದೆನೆಂದು ಶತ್ರು ಹೇಳಿ
ಕೊಳ್ಳದಿರಲಿ /
ನಾನು ಜಾರಿ ಬಿದ್ದೆನೆಂದು ವೈರಿ
ಹಿರಿಹಿಗ್ಗದಿರಲಿ //
5 : ನಿನ್ನಚಲ ಪ್ರೀತಿಯಲ್ಲಿದೆ ನನಗಿದೆ ವಿಶ್ವಾಸ /
ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ /
6 : ಪ್ರಭು ಮಾಡಿದ ಮಹೋಪಕಾರಗಳಿಗಾಗಿ /
ಹಾಡುವೆ ಗೀತವನು ಮನಃಪೂರ್ವಕವಾಗಿ //