1 : ಹಮ್ಮಿಲ್ಲ ಪ್ರಭು,
ನನ್ನೆದೆಯೊಳು /
ನನಗಿಲ್ಲ ಸೊಕ್ಕಿನ ಕಣ್ಣುಗಳು //
ಶಕ್ತಿವಿೂರಿದ ಕಾರ್ಯಕೆ ನಾ ಕೈ ಹಾಕಿಲ್ಲ /
ಅಸಾಧ್ಯವಾದುದನು ನಾ ಕೈಗೊಂಡಿಲ್ಲ
2 : ಎಂದೇ ನನ್ನಾತ್ಮ ಸಮಾಧಾನದಿಂದಿದೆ / ಮೌನದಿಂದಿದೆ ತಾಯ್ಮಡಿಲಾ ಕೂಸಂತೆ / ನೆಮ್ಮದಿಯಿಂದಿದೆ ತಾಯ್ಮಡಿಲಾ ಶಿಶುವಂತೆ
3 : ಇಸ್ರಯೇಲೆ, ಪ್ರಭುವಿನಲಿ ನಂಬಿಕೆಯಿಂದಿರು /
ಇಂದಿಗೂ ಎಂದೆಂದಿಗೂ ಭರವಸೆಯಿಂದಿರು //
ಸನಾತನ ರಾಜವೈಭವದ ಪುನಃಸ್ಥಾಪನೆ