Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ಕೀರ್ತನೆ


1 : ಒಳ್ಳೆಯವನಾದ ಪ್ರಭುವಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
2 : ದೇವಾದಿ ದೇವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
3 : ಮಹೋನ್ನತ ಪ್ರಭುವಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
4 : ಮಹತ್ಕಾರ್ಯವೆಸಗಬಲ್ಲ ಆ ಏಕೈಕನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
5 : ಜ್ಞಾನದಿಂದ ಜಗವನು ನಿರ್ಮಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
6 : ಜಲರಾಶಿಯ ಮೇಲೆ ಭೂಮಿಯನು ಹಾಸಿದವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
7 : ಮಹಾ ಜ್ಯೋತಿರ್ಮಂಡಲವನು ಸೃಷ್ಟಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
8 : ಹಗಲನ್ನಾಳಲು ಸೂರ್ಯನನ್ನು ಸೃಜಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
9 : ರಾತ್ರಿಯನ್ನಾಳಲು ಚಂದ್ರ ನಕ್ಷತ್ರಗಳನ್ನು ಸೃಷ್ಟಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
10 : ಈಜಿಪ್ಟಿನ ಚೊಚ್ಚಲುಗಳನು ಸಂಹರಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
11 : ಇಸ್ರಯೇಲರನು ಅಲ್ಲಿಂದ ಹೊರತಂದವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
12 : ಭುಜಬಲದಿಂದ ಕೈಚಾಚಿ ಅವರನು ಬಿಡಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
13 : ಕೆಂಪು ಕಡಲನು ಇಬ್ಭಾಗಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
14 : ಇಸ್ರಯೇಲರನು ಅದರ ನಡುವೆ ದಾಟಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
15 : ಫರೋಹನನ್ನೂ ಅವನ ಸೈನ್ಯವನ್ನೂ ಆ ಕಡಲಲ್ಲಿ ಮುಳುಗಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
16 : ತನ್ನ ಪ್ರಜೆಯನು ಅರಣ್ಯಮಾರ್ಗವಾಗಿ ಕರೆತಂದವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
17 : ಬಲವಂತ ರಾಜರನು ಉರುಳಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
18 : ಪ್ರಖ್ಯಾತ ರಾಜರನ್ನು ಸಂಹರಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
19 : ಅಮೋರಿಯರ ರಾಜನಾದ ಸೀಹೋನನ್ನು ಕೊಂದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
20 : ಬಾಷಾನಿನ ಅರಸನಾದ ಓಗನನ್ನು ಸಂಹರಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
21 : ಅವರ ನಾಡನ್ನು ಇಸ್ರಯೇಲರಿಗೆ ಕೊಟ್ಟಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
22 : ಅದನ್ನು ದಾಸರಾದ ನಮಗೆ ಸೊತ್ತಾಗಿ ನೀಡಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
23 : ಹೀನ ಸ್ಥಿತಿಯಲ್ಲಿದ್ದ ನಮ್ಮನ್ನು ಜ್ಞಾಪಿಸಿ ಕೊಂಡಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
24 : ಶತ್ರುಹಗೆಗಳಿಂದ ನಮ್ಮನ್ನು ಬಿಡಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
25 : ಸಕಲ ಜೀವಿಗಳಿಗೆ ಆಹಾರ ನೀಡುವಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
26 : ಪರಲೋಕದಲ್ಲಿರುವ ದೇವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.

· © 2017 kannadacatholicbible.org Privacy Policy