1 : ಪ್ರಭು ಕುರಿಗಾಹಿಯಾಗಿರಲು ನನಗೆ /
ಕುಂದುಕೊರತೆಗಳೆಲ್ಲಿಯವು ಎನಗೆ? //
2 : ಹಸಿರುಗಾವಲುಗಳಲೆನ್ನ ತಂಗಿಸುವನು /
ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು //
3 : ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ |
ಸನ್ಮಾರ್ಗದಲಿ ನಡೆಸುವನು ತನ್ನ
ನಾಮನಿಮಿತ್ತ ||
4 : ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು,
ಅಂಜೆನು ಕೇಡಿಗೆ |
ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು
ತರುವುದೆನಗೆ |
ಕಾಣೆನೆಂದಿಗೂ ನಾ ದಿಗಿಲನು, ನೀನಿರಲು
ನನ್ನೊಂದಿಗೆ ||
5 : ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ
ನನಗೌತಣವನು |
ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ
ಪಾನಪಾತ್ರೆಯನು ||
6 : ಶುಭಶಾಂತಿಯಿಂದ ನಾ ಬಾಳುವೆ
ಜೀವಮಾನವೆಲ್ಲ /
ದೇವಮಂದಿರದಲಿ ನಾ ವಾಸಿಸುವೆ
ಚಿರಕಾಲವೆಲ್ಲ //