Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ಕೀರ್ತನೆ


1 : ಎತ್ತಿರುವೆ ಪ್ರಭೂ, ಹೃನ್ಮನಗಳನು ನಿನ್ನತ್ತ / ಇಟ್ಟಿರುವೆ ಭರವಸೆ ನಿನ್ನಲೆ ದೇವಾ ಸನ್ನುತ //
2 : ಶತ್ರುಗಾಗದಿರಲಿ ಸಡಗರ / ನನಗೊದಗದಿರಲಿ ಮುಜಗರ //
3 : ಆಗಲಿ ಆಶಾಭಂಗ ನಿನ್ನೆದುರಾಳಿಗಳಿಗೆ / ಹಾಗಾಗದಿರಲಿ ನಿನ್ನ ನಿರೀಕ್ಷಿಸುವವರಿಗೆ //
4 : ನಿನ್ನ ಮಾರ್ಗವನು ಪ್ರಭು ನನಗೆ ತೋರಿಸು / ನೀನೊಪ್ಪುವ ಪಥದಲಿ ನಾ ನಡೆಯ ಕಲಿಸು //
5 : ಸನ್ಮಾರ್ಗದಲಿ ಮುನ್ನಡೆಸೆನ್ನ ದೇವಾ, ಮುಕ್ತಿದಾತ / ಕಲಿಸೆನಗೆ, ನಿನಗಾಗಿ ಕಾದಿರುವೆ ಸತತ //
6 : ನೆನೆಸಿಕೋ ಪ್ರಭು, ನಿನ್ನ ನಿರಂತರ ಕರುಣೆಯನು / ಆದಿಯಿಂದ ನೀ ತೋರಿದಚಲ ಪ್ರೀತಿಯನು //
7 : ಯೌವನದೆನ್ನ ಪಾಪ ಪ್ರವೃತ್ತಿಗಳ ಮನದಲ್ಲಿಟ್ಟುಕೊಳ್ಳಬೇಡ / ನಿನ್ನೊಲುಮೆ ನಲ್ಮೆಗಳ ನಿಮಿತ್ತ ಪ್ರಭು, ನನ್ನ ನೆನೆಯದಿರಬೇಡ //
8 : ತ್ಯಸ್ವರೂಪನು, ದಯಾವಂತನು ಪ್ರಭು / ದಾರಿತಪ್ಪಿದವರಿಗೆ ಬೋಧಕನು ವಿಭು //
9 : ದೀನರನು ನಡೆಸುವನು ತನ್ನ ವಿಧಿಗನುಸಾರ / ದಲಿತರಿಗೆ ಕಲಿಸುವನು ತನ್ನ ಧರ್ಮಾಚಾರ //
10 : ಪ್ರಭುವಿನೊಪ್ಪಂದಗಳ ಪಾಲಕರಿಗೆ ಆತನ ಮಾರ್ಗಗಳು ಸನ್ನುತ / ಆತನ ವಿಧಿ ನಿಬಂಧನೆಗಳ ಪರಿಪಾಲಕರಿಗೆ ಅವುಗಳು ಸುಪ್ರೀತ //
11 : ನಿನ್ನ ನಾಮದ ನಿಮಿತ್ತ ನನ್ನನು ಈಕ್ಷಿಸು / ಎನ್ನ ಘೋರ ಪಾಪವನು ಪ್ರಭು ಕ್ಷಮಿಸು //
12 : ಪ್ರಭುವಿನ ಭಯಭಕುತಿಯುಳ್ಳವನಿಗೆ / ಲಭಿಪುದು ಖಚಿತ ಋಜುಮಾರ್ಗದ ಕಲಿಕೆ //
13 : ಬಾಳುವನಂಥವನು ಸುಖಸೌಭಾಗ್ಯದಿಂದ ಬದುಕುವುದವನ ಸಂತತಿ ನಾಡಿನೊಡೆತನದಿಂದ //
14 : ಬಾಳುವನಂಥವನು ಸುಖಸೌಭಾಗ್ಯದಿಂದ ಬದುಕುವುದವನ ಸಂತತಿ ನಾಡಿನೊಡೆತನದಿಂದ //
15 : ತಿರುಗಿದೆ ಎನ್ನ ನಯನ ಪ್ರಭುವಿನತ್ತ / ಉರುಲಿಂದ ಕಾಲನು ಕಳಚಿದನಾತ //
16 : ಒಬ್ಬೊಂಟಿಗನಾದೆ, ಸಿಕ್ಕಿಕೊಂಡೆ ಸಂಕಟಕೆ / ಕಟಾಕ್ಷಿಸೋ ಪ್ರಭು, ಕರುಣೆತೋರೋ ತಬ್ಬಲಿಗೆ //
17 : ನಿವಾರಿಸೆನ್ನ ಮನಕ್ಲೇಶವನು / ಪರಿಹರಿಸೆನ್ನ ದುಃಖದುಗುಡವನು //
18 : ನೋಡೆನ್ನ ಬಾಧೆ ಬವಣೆಗಳನು / ತೊಡೆದು ಹಾಕೆನ್ನ ಪಾಪಗಳನು //
19 : ಶತ್ರುಗಳಿಹರು ನೋಡು ಸಹಸ್ರಾರು / ಕ್ರೋಧದಿಂದೆನ್ನ ಹಗೆ ಮಾಡುತಿಹರು //
20 : ಕಾಪಾಡು ಪ್ರಭು, ರಕ್ಷಿಸೆನ್ನ ಪ್ರಾಣವನು / ನಿರಾಶೆಗೊಳಿಸಬೇಡ, ಶರಣಾಗತನು ನಾನು //
21 : ನಿರ್ದೋಷ, ನಿಷ್ಕಪಟ ನಡತೆ ನನಗೆ ರಕ್ಷೆ / ನೀನೆ ಪ್ರಭು ನನಗಿರುವ ದೃಢ ನಿರೀಕ್ಷೆ //
22 : ಉದ್ಧರಿಸು ದೇವಾ, ಇಸ್ರಯೇಲರನು / ಸಮಸ್ತ ಬೇನೆ ಬವಣೆಗಳಿಂದವರನು //

· © 2017 kannadacatholicbible.org Privacy Policy