1 : ನಿರ್ಣಯಿಸು ನನ್ನ ನ್ಯಾಯವನು
ಓ ದೇವಾ /
ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ /
ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ //
2 : ನನಗೆ ಕೋಟೆ ನೀನಲ್ಲವೇ? ನನ್ನ ಕೈ ಬಿಟ್ಟಿರುವೆ
ಏಕೆ?/
ಶತ್ರು ಬಾಧೆಯಿಂದ ಭಿಕಾರಿಯಂತೆ
ನಾನಲೆಯಬೇಕೆ?//
3 : ಕಳುಹಿಸು ನಿನ್ನ ಜ್ಯೋತಿಯನು, ನಿನ್ನ ಸತ್ಯವನ್ನು
ನನ್ನ ನಡೆಸಲಿಕೆ /
ಸೇರಿಸಲೆನ್ನನು ನಿನ್ನ ಪವಿತ್ರ ಪರ್ವತಕೆ, ನಿನ್ನಯ
ನಿವಾಸಕೆ //
4 : ಬರುವೆನಾಗ ನಿನ್ನ ಬಲಿಪೀಠದ ಬಳಿಗೆ /
ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ /
ವೀಣೆ ನುಡಿಸಿ ದೇವಾ, ನಿನ್ನ ಸ್ತುತಿಸಲಿಕೆ //
5 : ಎನ್ನ ಮನವೆ, ಚಿಂತಿಸುವೆಯೇಕೆ?
ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ /
ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ
ಪರಮಾತ್ಮ ಆತನೆನಗೆ //