Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ಕೀರ್ತನೆ


1 : ಖಂಡಿಸಬೇಡೆನ್ನ ಪ್ರಭು, ರೋಷದಿಂದ / ದಂಡಿಸಬೇಡೆನ್ನನು ಕಡುಕೋಪದಿಂದ //
2 : ಕನಿಕರಿಸು ಹೇ ಪ್ರಭು, ನಾನು ಬಲಹೀನನು / ಗುಣಪಡಿಸು ಸಡಿಲವಾದ ಎನ್ನೆಲುಬುಗಳನು //
3 : ಜೀವಾತ್ಮ ನಾ ಬಳಲಿ ತತ್ತರಿಸುತ್ತಿರುವೆ / ಎಲ್ಲಿಯತನಕ ಪ್ರಭು ನೀ ಕೈಬಿಟ್ಟಿರುವೇ //
4 : ನನ್ನ ಕಡೆ ತಿರುಗಿ ಪ್ರಭು, ನನ್ನನುದ್ಧರಿಸು / ನಿನ್ನಚಲ ಪ್ರೀತಿಯಿಂದ ನನ್ನ ರಕ್ಷಿಸು //
5 : ಸತ್ತವರಲಿ ನಿನ್ನ ಸ್ಮರಿಸುವವರಾರು? / ಪಾತಾಳದಲಿ ನಿನ್ನ ಸ್ತುತಿಸುವವರಾರು?//
6 : ದಣಿದಿರುವೆ ನಾ ದುಃಖದಿಂದ ನರಳಿ ನರಳಿ / ತೊಯ್ದಿದೆ ಹಾಸಿಗೆ ಇರುಳಿರುಳ ಕಂಬನಿಯಲಿ / ತೇಲಿದೆ ಮಂಚ ಈ ಕಣ್ಣೀರ ಪ್ರವಾಹದಲಿ //
7 : ಮಂಕಾದವು ಕಣ್ಣುಗಳು ರೋದನದಿಂದ / ಮಬ್ಬಾದವವು ವೈರಿಗಳ ಬಾಧೆಯಿಂದ //
8 : ದುರ್ಜನರೇ ತೊಲಗಿರಿ ನನ್ನಿಂದ ದೂರ / ಪ್ರಭುವಿನ ಕಿವಿಮುಟ್ಟಿದೆ ನನ್ನಾರ್ತ ಸ್ವರ //
9 : ಆಲಿಸಿಹನು ಪ್ರಭು ಎನ್ನ ಪ್ರಾರ್ಥನೆಯನು / ಅಂಗೀಕರಿಸಿಹನು ಎನ್ನಯ ವಿಜ್ಞಾಪನೆಯನು //
10 : ತತ್ತರಿಸುವರು ಶತ್ರುಗಳೆಲ್ಲ ನಿರಾಶೆಯಿಂದ / ತಟ್ಟನೆ ಹಿಂಜರಿಯುವರವರೆಲ್ಲ ಅತಿ ಲಜ್ಜೆಯಿಂದ //

· © 2017 kannadacatholicbible.org Privacy Policy