Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ಕೀರ್ತನೆ


1 : ಪ್ರಭು, ಓ ನಮ್ಮ ಪ್ರಭು, ಎನಿತು ಮಹಿಮಾನ್ವಿತ / ಹರಡಿವೆ ನಿನ್ನ ಸಿರಿನಾಮ ಜಗದಾದ್ಯಂತ / ಬೆಳಗಿದೆ ನಿನ್ನ ವೈಭವ ಗಗನಾದ್ಯಂತ //
2 : ವಿರೋಧಿಗಳ ಬಾಯನು ಮುಚ್ಚಿಸಿದೆ ಬಾಲ ಬಾಲೆಯರ ಬಾಯಿಂದಲೆ / ಹಗೆಗಳನು ದುರ್ಗದಂತೆ ತಡೆದೆ ಮೊಲೆಗೂಸುಗಳ ನಾಲಿಗೆಯಿಂದಲೆ /
3 : ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ / ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ //
4 : ಇಂತಿರಲು, ಮನುಜನು ಎಷ್ಟರವನು ನೀನವನನು ಲಕ್ಷಿಸಲು? / ಏತರದವನು ನರಮಾನವನು ನೀನವನನು ಪರಾಮರಿಸಲು? //
5 : ಆದರೆ ದೇವದೂತರಿಗಿಂತ ಕಿಂಚಿತ್ತೆ ಕೀಳಾಗಿಸಿದೆ ಮನುಜನನು / ಮುಡಿಸಿದೆ ಮುಕುಟವಾಗವನಿಗೆ ಘನ ಮಾನವನು, ಸಿರಿಹಿರಿಮೆಯನು //
6 : ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ / ಒಳಪಡಿಸಿದೆ ಸಕಲವನು ಅವನ ಪಾದದಡಿಗೆ //
7 : ಕುರಿಗಳನು, ಕರುಗಳನು, ಕಾಡು ಮೃಗಗಳನು / ಗರಿಗಳನು, ವಿೂನುಗಳನು, ಜಲಚರಗಳನು /
8 : ಕರಗತ ಮಾಡಿದೆ ನೀ ಅವನಿಗೆಲ್ಲವನು //
9 : ಪ್ರಭು, ಓ ಎಮ್ಮ ಪ್ರಭು, ನಿನ್ನ ನಾಮಾಮೃತ / ಬೆಳಗಿದೆ ತನ್ನ ಮಹಿಮೆಯನು ಭುವನ ಪರ್ಯಂತ //

· © 2017 kannadacatholicbible.org Privacy Policy