Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ಕೀರ್ತನೆ


1 : ಇದೆ ಪ್ರಭುವಿನ ಕೈಯಲಿ ರಾಜ್ಯಾಧಿಕಾರ / ಉಲ್ಲಾಸಿಸಲಿ ಧರಣಿಮಂಡಲದಾದ್ಯಂತ / ಸಂತೋಷಿಸಲಿ ಕಡಲಿನ ದ್ವೀಪಗಳೆಲ್ಲ //
2 : ಇವೇ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು / ನ್ಯಾಯ-ನೀತಿ ಆತನ ಗದ್ದುಗೆಯಸ್ತಿವಾರಗಳು //
3 : ಚಲಿಸುತ್ತಿದೆ ಬೆಂಕಿ ಆತನ ಮುಂದುಗಡೆ / ಸುಡುತ್ತದೆ ಆತನ ವೈರಿಗಳನು ಎಲ್ಲೆಡೆ //
4 : ಇಳೆಯನು ಬೆಳಗಿಸುತ್ತದೆ ಆತನ ಮಿಂಚು | ನಡುಗುತ್ತದೆ ಭೂಮಿ ಅದಕೆ ಬೆಚ್ಚುಬಿದ್ದು ||
5 : ಸಾರ್ವಭೌಮನಾದ ಪ್ರಭುವಿನ ಮುಂದೆ / ಕರಗುತ್ತವೆ ಬೆಟ್ಟಗುಡ್ಡಗಳು ಮೇಣದಂತೆ //
6 : ಘೋಷಿಸುತ್ತದೆ ಗಗನಮಂಡಲ ಆತನ ನೀತಿಯನು / ಕಾಣುತ್ತವೆ ಸಕಲ ಜನಾಂಗ ಆತನ ಮಹಿಮೆಯನು //
7 : ನಾಚಲಿ ವ್ಯರ್ಥವಿಗ್ರಹಗಳನು ಪೂಜಿಸಿ ಹಿಗ್ಗುವವರು / ಪ್ರಭುವಿಗೆ ಅಡ್ಡಬೀಳಲಿ ಆ ದೇವರುಗಳೆಲ್ಲರು //
8 : ಪ್ರಭು, ನಿನ್ನ ನ್ಯಾಯತೀರ್ಪನು ಕುರಿತು / ಸಿಯೋನ್ ನಗರವು ಆನಂದಪಟ್ಟಿತು / ಜುದೇಯ ಪ್ರಾಂತ್ಯವು ಹರ್ಷಗೊಂಡಿತು //
9 : ಸರ್ವಾಧಿಕಾರಿ ನೀನು ಲೋಕಕ್ಕೆಲ್ಲಾ / ಮಹೋನ್ನತನು ನೀನು ದೇವರುಗಳಿಗೆಲ್ಲಾ //
10 : ಕೇಡನು ಹಗೆಮಾಡುವವನಿಗೆ ಪ್ರಭು ಒಲಿವನು / ತನ್ನ ಭಕ್ತರ ಪ್ರಾಣವನು ಕಾಪಾಡುವನು / ದುಷ್ಟರ ಕೈಯಿಂದವರನು ಬಿಡಿಸುವನು //
11 : ಉದಯವಾಗುವುದು ಜ್ಯೋತಿ ಸಜ್ಜನರಿಗೆ / ಆನಂದವಿದೆ ಯಥಾರ್ಥ ಹೃದಯಿಗಳಿಗೆ //
12 : ಸಜ್ಜನರೇ, ಪ್ರಭುವಿನಲಿ ಆನಂದಿಸಿರಿ / ಆತನ ಶ್ರೀನಾಮವನು ಕೊಂಡಾಡಿರಿ //

· © 2017 kannadacatholicbible.org Privacy Policy