Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ಪ.ಗೀ


1 : ನಲ್ಲೆ : ನನ್ನ ಪ್ರಾಣಕಾಂತನನ್ನು ರಾತ್ರಿಯೆಲ್ಲಾ ಹುಡುಕಿದೆ ಹಾಸಿಗೆಯ ಮೇಲೆ ಹಾತೊರೆದೆ ಹುಡುಕಿ ಹುಡುಕಿ ಸಿಗಲಾರದೆ ಬೇಸತ್ತೆ.
2 : ಎದ್ದು ಊರೆಲ್ಲಾ ಅಲೆದಾಡಿದೆ ಬೀದಿಗಳಲ್ಲಿ, ಚೌಕಗಳಲ್ಲಿ ಹುಡುಕಾಡಿದೆ ಹುಡುಕಿ ಹುಡುಕಿ ಸಿಗಲಾರದೆ ಬೇಸತ್ತೆ.
3 : ಊರಲ್ಲಿ ತಿರುಗುವ ಪಹರೆಯವರ ಕೈಗೆ ಸಿಕ್ಕಿಬಿದ್ದೆ “ನನ್ನ ಪ್ರಾಣಕಾಂತನನ್ನು ಕಂಡಿರಾ?” ಎಂದು ವಿಚಾರಿಸಿದೆ.
4 : ಅವರನ್ನು ಬಿಟ್ಟ ತುಸು ಹೊತ್ತಿನಲ್ಲೆ ನನ್ನ ಪ್ರಾಣಕಾಂತನನ್ನು ಕಂಡುಕೊಂಡೆ. ತಾಯ ಮನೆಗೆ, ನನ್ನ ಹೆತ್ತವಳ ಮನೆಗೆ ಕರೆದೊಯ್ದೆ. ಕೈಯ ಬಿಡದೆಯೆ ಕರೆದುಕೊಂಡು ಹೋದೆ.
5 : ಜೆರುಸಲೇಮಿನ ಮಹಿಳೆಯರೇ, “ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಆತನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಿಮಗೆ ವಿಧಿಸಿರುವೆನು ವನದ ಹುಲ್ಲೆ ಹರಿಣಿಗಳ ಮೇಲೆ ಆಣೆಯಿಟ್ಟು. ಮೂರನೇ ಗೀತೆ
6 : ವರ್ತಕರು ಮಾರುವ ಸಕಲ ಸುಗಂಧ ತೈಲಗಳಿಂದ ರಸಗಂಧ ಸಾಂಬ್ರಾಣಿ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿ ಹೊರಹೊಮ್ಮುತ್ತಿರುವ ಅರಣ್ಯದ ಮಾರ್ಗವಾಗಿ ಬರುತ್ತಿರುವ ಆ ಮೆರವಣಿಗೆ ಯಾರದು?
7 : ಇದೋ, ನೋಡು ಸೊಲೊಮೋನನ ಪಲ್ಲಕ್ಕಿ ಅದರ ಸುತ್ತ ಇಸ್ರಯೇಲಿನ ಶೂರರು ಅರವತ್ತು ಮಂದಿ
8 : ಯುದ್ಧ ಪ್ರವೀಣರಾದ ಅವರಾಗಿಹರು ಶಸ್ತ್ರಧಾರಿ ಕತ್ತಿಯ ಕಟ್ಟಿಹರು ಪ್ರತಿಯೊಬ್ಬರು ಸೊಂಟಕ್ಕೆ ಕತ್ತಲ ದುರಂತಗಳನ್ನು ಎದುರಿಸಲಿಕ್ಕೆ.
9 : ಅರಸ ಸೊಲೊಮೋನನು ಮಾಡಿಸಿಕೊಂಡನು ಲೆಬನೋನಿನ ಮರದಿಂದ ಆ ಪಲ್ಲಕ್ಕಿಯನು.
10 : ಸ್ತಂಭಗಳನ್ನು ಬೆಳ್ಳಿಯಿಂದ ಒರಗನ್ನು ಬಂಗಾರದಿಂದ ಅದರ ಮೆತ್ತೆಯನ್ನು ಸಕಲಾತಿಯಿಂದ ಅದರ ಮಧ್ಯಭಾಗವನ್ನು ಕಸೂತಿಯಿಂದ ಅಲಂಕರಿಸಿಹರು ಜೆರುಸಲೇಮಿನ ಮಹಿಳೆಯರು ಪ್ರೀತಿಯಿಂದ.
11 : ಸಿಯೋನಿನ ಮಹಿಳೆಯರೇ, ಹೊರಟುಬನ್ನಿ ಅರಸ ಸೊಲೊಮೋನನನ್ನು ನೋಡಬನ್ನಿ ಆತನ ವಿವಾಹಮಹೋತ್ಸವ ದಿನದಂದು ಆತನ ತಾಯಿ ತೊಡಿಸಿದ ಮುಕುಟವನ್ನು ಆತ ಧರಿಸಿರುವುದನ್ನು ನೋಡಬನ್ನಿ. ನಲ್ಲ : ಆಹಾ ! ನನ್ನ ಪ್ರಿಯಳೇ, ನೀನೆಷ್ಟು

· © 2017 kannadacatholicbible.org Privacy Policy