Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ಯೆರೆವಿೂಯ


1 : ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಲ್ಲಿ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ಸಕಲ ಸೈನ್ಯಸಮೇತ ಬಂದು ಜೆರುಸಲೇಮನ್ನು ಮುತ್ತಿದನು.
2 : ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿನದಲ್ಲಿ ನಗರದ ಪೌಳಿಗೋಡೆ ಒಡಕು ಬಿದ್ದು ಜೆರುಸಲೇಮ್ ಶತ್ರುವಶವಾಯಿತು.
3 : ನೇರ್ಗಲ್‍ಸರೆಚರ್, ಸಮ್ಗರ್‍ನೆಬೊ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥ ನೇರ್ಗಲ್‍ಸರೆಚರ್, ಹೀಗೆ ಬಾಬಿಲೋನಿಯದ ಅರಸನ ಎಲ್ಲ ಪದಾಧಿಕಾರಿಗಳು ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಕುಳಿತುಕೊಂಡರು.
4 : ಇವರನ್ನು ನೋಡಿ, ಜುದೇಯದ ಅರಸ ಚಿದ್ಕೀಯನು ಮತ್ತು ಸಮಸ್ತ ಸೈನಿಕರು ಅದೇ ರಾತ್ರಿಯಲ್ಲಿ ಹೊರಟು, ಅರಸನ ಉದ್ಯಾನ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ನಗರವನ್ನು ಬಿಟ್ಟು, ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
5 : ಬಾಬಿಲೋನಿಯದ ಸೈನಿಕರು ಅವರನ್ನು ಹಿಂದಟ್ಟುತ್ತಾ ಜೆರಿಕೋವಿನ ಬೈಲಿನಲ್ಲಿ ಚಿದ್ಕೀಯನನ್ನು ಹಿಡಿದರು. ಹಮಾತ್ ನಾಡಿನ ರಿಬ್ಲದಲ್ಲಿದ್ದ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದರು.
6 : ಆ ಬಾಬಿಲೋನಿಯದ ಅರಸನು ಅಲ್ಲೆ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿದನು. ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಜುದೇಯದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.
7 : ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಬೇಡಿಹಾಕಿಸಿ, ಬಾಬಿಲೋನಿಗೆ ಸಾಗಿಸಿದನು.
8 : ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬಾಬಿಲೋನಿಯದವರು ಬೆಂಕಿಯಿಂದ ಸುಟ್ಟು ಜೆರುಸಲೇಮಿನ ಸುತ್ತಣವಿದ್ದ ಗೋಡೆಗಳನ್ನು ಕೆಡವಿದರು.
9 : ರಕ್ಷಾದಳದ ನಾಯಕನಾದ ನೆಬೂಜರದಾನನು ನಗರದಲ್ಲಿ ಉಳಿದಿದ್ದವರನ್ನು ಹಾಗು ಮೊದಲೇ ತನ್ನನ್ನು ಮರೆಹೊಕ್ಕಿದವರನ್ನು ಮತ್ತಿತರ ಕೆಲಸಗಾರರನ್ನೆಲ್ಲಾ ಬಾಬಿಲೋನಿಗೆ ಸೆರೆ ಒಯ್ದನು.
10 : ಆದರೆ ಏನೂ ಇಲ್ಲದ ಬಡಜನರನ್ನು ಜುದೇಯದ ನಾಡಿನಲ್ಲೆ ಬಿಟ್ಟು ಅವರಿಗೆ ಹೊಲತೋಟಗಳನ್ನು ಕೊಟ್ಟನು.
11 : ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ರಕ್ಷಾದಳದ ನಾಐಕ ನೆಬೂಜರದಾನನಿಗೆ,
12 : ಇವನನ್ನು ಕರೆದುಕೊಂಡುಹೋಗಿ ಚೆನ್ನಾಗಿ ನೋಡಿಕೊ. ಯಾವ ಹಾನಿಯನ್ನು ಮಾಡಕೂಡದು. ಬೇಡುವುದನ್ನೆಲ್ಲ ಕೊಡು,” ಎಂದು ಆಜ್ಞಾಪಿಸಿದನು.
13 : ಅಂತೆಯೇ ನೆಬೂಜರದಾನನು ಹಾಗು ಕಂಚುಕಿಯರ ಮುಖ್ಯಸ್ಥ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥ ನೇರ್ಗಲ್‍ಸರೆಚರ್ ಮತ್ತು ಬಾಬಿಲೋನಿಯದ ಅರಸನ ಎಲ್ಲ ಪದಾಧಿಕಾರಿಗಳು ಸೇರಿ ಯೆರೆಮೀಯನನ್ನು ಕಾರಾಗೃಹದಿಂದ ಕರೆತರಿಸಿದರು.
14 : ಆಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಅವನನ್ನು ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ವಾಡಿಕೆಯ ಪ್ರಕಾರ ಜನರ ನಡುವೆ ವಾಸಮಾಡಿದನು.
15 : ಯೆರೆಮೀಯನು ಇನ್ನೂ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಸರ್ವೇಶ್ವರನ ಈ ವಾಣಿ ಕೇಳಿಸಿತು:
16 : ನೀನು ಹೋಗಿ ಸುಡಾನಿನ ಎಬೆದ್ಮೆಲೆಕನಿಗೆ ಹೀಗೆ ತಿಳಿಸು: “ಈ ಇಸ್ರಯೇಲರ ದೇವರೂ ಸೇನಾಧೀಶ್ವರನೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ನಾನು ನುಡಿದ ಮೇಲನ್ನು ಅಲ್ಲ, ಕೇಡನ್ನೇ ಈ ನಗರದ ಮೇಲೆ ಬರಮಾಡುವೆನು. ಅದು ನಿನ್ನ ಕಣ್ಣೆದುರಿಗೇ ಆ ದಿನದಂದು ನಡೆಯುವುದು.
17 : ಆದರೆ ಆ ದಿನದಲ್ಲಿ ನಿನ್ನನ್ನು ನಾನು ಉದ್ಧರಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ. ನೀನು ಯಾರಿಗಾಗಿ ಭಯಪಡುತ್ತಿಯೋ ಅವರ ಕೈಗೆ ಸಿಕ್ಕುವುದಿಲ್ಲ.
18 : ನೀನು ನನ್ನಲ್ಲಿ ಭರವಸೆಯಿಟ್ಟ ಕಾರಣ ನಿನ್ನನ್ನು ರಕ್ಷಿಸಿಯೇ ರಕ್ಷಿಸುವೆನು. ನೀನು ಕತ್ತಿಗೆ ತುತ್ತಾಗಲಾರೆ. ಅದರ ಬಾಯಿಂದ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ. ಇದು ಸರ್ವೇಶ್ವರನಾದ ನನ್ನ ವಾಣಿ.”

· © 2017 kannadacatholicbible.org Privacy Policy