1 :
ಬೆನ್ಯಮೀನ್ ಕುಲದವರೇ, ಜೆರುಸಲೇಮಿನಿಂದ ವಲಸೆ ಹೋಗಿರಿ. ತೆಕೋವದಲ್ಲಿ ಕೊಂಬನ್ನೂದಿರಿ. ಬೇತ್‍ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಅತಿ ವಿನಾಶಕರವಾದ ವಿಪತ್ತು ಉತ್ತರದಿಂದ ತಲೆದೋರುತ್ತಿದೆ.
2 : ಸುಂದರವೂ, ಸೊಂಪಾದ ಹಸಿರುಗಾವಲಿಗೆ ಸಮಾನವೂ ಆದ ಸಿಯೋನ್ ನಗರ ನಾಶವಾಗಲಿದೆ.
3 : ಅರಸ ಯೋಷೀಯನ ಕಾಲದಲ್ಲಿ ಸರ್ವೇಶ್ವರಸ್ವಾಮಿ ನನಗೆ ಹೀಗೆಂದು ಹೇಳಿದರು – “ಭ್ರಷ್ಟಳಾದ ಇಸ್ರಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ನನ್ನನ್ನು ತೊರೆದುಬಿಟ್ಟು ಎತ್ತರವಾದ ಗುಡ್ಡಗಳನ್ನೆಲ್ಲ ಹತ್ತಿ, ಹುಲುಸಾಗಿ ಬೆಳೆದ ಎಲ್ಲ ಮರಗಳ ಕೆಳಗೆ ಹೋಗಿ ವೇಶ್ಯೆಯಂತೆ ವರ್ತಿಸುತ್ತಿದ್ದಾಳೆ.
3 : ವೈರಿಗಳಾದ ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅದರ ಎದುರಿಗೆ ಹಾಗೂ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು. ಪ್ರತಿಯೊಬ್ಬನೂ ತನಗೆ ಇಷ್ಟಬಂದ ಸ್ಥಳದಲ್ಲೇ ಮೇಯಿಸಿಬಿಡುವನು.
4 : ಅವರು: “ಸಿಯೋನಿಗೆ ವಿರುದ್ಧ ಯುದ್ಧಸನ್ನದ್ಧರಾಗಿರಿ. ಏಳಿ, ನಡು ಮಧ್ಯಾಹ್ನದಲ್ಲೆ ಅದರ ಮೇಲೆ ನುಗ್ಗುವ. ಅಯ್ಯೋ, ಇದೇನು ಹೊತ್ತು ಮೀರಿ ಹೋಗುತ್ತಿದೆ ಅಲ್ಲಾ, ಸಂಜೆಯ ನೆರಳು ಉದ್ದುದ್ದವಾಗುತ್ತಿದೆಯಲ್ಲಾ!
5 : ಎದ್ದು ರಾತ್ರಿಯಲ್ಲೆ ಅದರ ಮೇಲೆ ಬಿದ್ದು ಅಲ್ಲಿನ ಅರಮನೆಗಳನ್ನು ಹಾಳು ಮಾಡೋಣ,” ಎಂದುಕೊಳ್ಳುತ್ತಿದ್ದಾರೆ.
6 : ಸರ್ವಶಕ್ತನಾದ ಸರ್ವೇಶ್ವರಸ್ವಾಮಿ ಹೀಗೆ ಎನ್ನುತ್ತಾರೆ: “ಸಿಯೋನ್ ಸುತ್ತಣ ಮರಗಳನ್ನು ಕಡಿದುಬಿಡಿ. ಜೆರುಸಲೇಮ್ ಎದುರಿಗೆ ದಿಬ್ಬಗಳನ್ನು ಎಬ್ಬಿಸಿರಿ. ನೀವು ದಂಡಿಸಬೇಕಾದ ನಗರ ಇದುವೆ. ದರೋಡೆ ದಬ್ಬಾಳಿಕೆಗಳಿಂದ ಅದು ತುಂಬಿದೆ.
7 : ತೊಟ್ಟಿ ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ನಗರ ತನ್ನಲ್ಲಿನ ನೀಚತನವನ್ನು ನಿಚ್ಚಳವಾಗಿ ಇಟ್ಟು ಕೊಂಡಿದೆ. ಇಲ್ಲಿಂದ ಕೇಳಿಬರುವುದೆಲ್ಲ ಹಿಂಸಾಚಾರದ ಹಾಗೂ ಕೊಳ್ಳೆಯ ಸುದ್ದಿಯೆ. ರೋಗ ರುಜಿನಗಳೂ ಗಾಯಹುಣ್ಣುಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತಿವೆ.
8 : ಜೆರುಸಲೇಮ್, ಎಚ್ಚರಿಕೆಯಿಂದ ನಡೆದುಕೊ. ಇಲ್ಲವಾದರೆ ನಾನು ನಿನ್ನನ್ನು ಅಗಲಿ ಬಿಡುವೆನು. ನಿನ್ನನ್ನು ಪಾಳುಬಿದ್ದ ನಿರ್ಜನ ಪ್ರದೇಶವಾಗಿಸುವೆನು.”
9 :
ಸರ್ವಶಕ್ತರಾದ ಸರ್ವೇಶ್ವರಸ್ವಾಮಿ ನನಗೆ ಹೀಗೆಂದರೆ: “ಇಸ್ರಯೇಲಿನ ಅಳಿದುಳಿದವರನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯ್ದುಕೊ. ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನಿನ್ನ ಕೈಯನ್ನು ಮತ್ತೆ ರೆಂಬೆಗಳಿಗೆ ಹಾಕು.”
10 : ಅದಕ್ಕೆ ನಾನು, “ಅಯ್ಯೋ! ಯಾರ ಸಂಗಡ ನಾನು ಮಾತಾಡಿ ಅವರು ಗಮನಿಸುವಂತೆ ಮಾಡಲಿ? ಅವರ ಕಿವಿ ಮಂದ. ಅವರು ಕೇಳಿಸಿಕೊಳ್ಳುವುದಿಲ್ಲ. ಸರ್ವೇಶ್ವರ ಆದ ನಿಮ್ಮ ಮಾತು ಎಂದರೆ ಅವರಿಗೆ ತಿರಸ್ಕಾರ. ಅದು ಅವರಿಗೆ ರುಚಿಸುವುದಿಲ್ಲ.
11 : ಆದಕಾರಣವೇ ನಿಮ್ಮ ಕೋಪ ನನ್ನಲ್ಲೂ ತುಂಬಿತುಳುಕುತ್ತಿದೆ. ಅದನ್ನು ತಡೆದು ತಡೆದು ನನಗೆ ಸಾಕಾಗಿದೆ,” ಎಂದೆನು.
ಆಗ ಸರ್ವೇಶ್ವರ ನನಗೆ: “ಹಾಗಾದರೆ ಆ ಕೋಪವನ್ನು ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಕೂಟಗಳ ಮೇಲೂ ಕಾರಿಬಿಡು. ಗಂಡ ಹೆಂಡತಿಯರನ್ನೂ ಮುದುಕರನ್ನೂ ವಯೋವೃದ್ಧರನ್ನೂ ಅಪಹರಿಸಲಾಗುವುದು.
12 : ಅವರ ಹೆಂಡತಿ, ಮನೆ, ಹೊಲ, ಗದ್ದೆ ಎಲ್ಲವೂ ಅನ್ಯರ ಪಾಲಾಗುವುದು.”
“ನಾಡಿನ ನಿವಾಸಿಗಳ ಮೇಲೆ ಕೈಮಾಡುವೆನೆಂಬುದು ಖಚಿತ. ಇದು ಸರ್ವೇಶ್ವರನಾದ ನನ್ನ
13 : ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾ ಇದ್ದಾರೆ.
14 : ಅವರು, ನನ್ನ ಜನರ ಗಾಯಗಳು ಗುಣವಾಗದಿದ್ದರೂ ಅವು ಕೇವಲ ಮಚ್ಚೆಗಳೋ ಎಂಬಂತೆ ‘ಎಲ್ಲ ಚೆನ್ನಾಗಿದೆ’ ಎಂದು ಸಮಾಧಾನ ಹೇಳಿ ವಂಚಿಸುತ್ತಿದ್ದಾರೆ.
15 : ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಅವರಿಗೆ ಲಜ್ಜೆಯ ಗಂಧವೂ ಇಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದರು.
16 :
ಸರ್ವೇಶ್ವರಸ್ವಾಮಿ ತಮ್ಮ ಜನರಿಗೆ: “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.”
ಆದರೆ ಆ ಜನರು: “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.
17 : ಸರ್ವೇಶ್ವರ ಸ್ವಾಮಿ ಕಾವಲುಗಾರರನ್ನು ನೇಮಿಸಿ, “ಕಹಳೆಯ ಕೂಗನ್ನು ಕೇಳಿ” ಎಂದರು. ಅವರು “ಇಲ್ಲ, ಕೇಳುವುದಿಲ್ಲ” ಎಂದು ಉತ್ತರಿಸಿದರು.
18 : ಆದುದರಿಂದ ಸರ್ವೇಶ್ವರ: “ರಾಷ್ಟ್ರಗಳೇ ಆಲಿಸಿ. ನನ್ನ ಜನರಿಗೆ ಸಂಭವಿಸಲಿರುವುದನ್ನು ಗಮನಿಸಿ.
19 : ಜಗವೇ ಕೇಳು. ಇದೋ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮ ಬೋಧನೆಯನ್ನು ಅಸಡ್ಡೆಮಾಡಿದ್ದಾರೆ. ಆದ್ದರಿಂದ ಅವರ ಮೇಲೆ ಕೇಡನ್ನು ಬರಮಾಡುವೆನು. ಅವರ ಯೋಜನೆಗಳಿಗೆ ಅದೇ ತಕ್ಕ ಪ್ರತಿಫಲ.
20 : ಅವರು ಶೆಬದ ಧೂಪವನ್ನಾಗಲಿ, ದೂರ ದೇಶದ ಒಳ್ಳೆಯ ಸುಗಂಧವನ್ನಾಗಲಿ ತಂದು ನನಗೆ ಅರ್ಪಿಸುವುದರಿಂದ ನನಗೆ ಏನೂ ಪ್ರಯೋಜನವಿಲ್ಲ. ಅವರು ಒಪ್ಪಿಸುವ ದಹನ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಯಜ್ಞಬಲಿಗಳು ನನಗೆ ಇಷ್ಟವಿಲ್ಲ.
21 : ಆದಕಾರಣ ಈ ಜನರಿಗೆ ಅಡ್ಡಿಆತಂಕಗಳನ್ನು ಒಡ್ಡುವೆನು. ಹೆತ್ತವರೂ ಮಕ್ಕಳೂ ಎಡವಿಬೀಳುವರು, ನೆಂಟರಿಷ್ಟರೂ ನಾಶವಾಗಿ ಹೋಗುವರು. ಇದು ಸರ್ವೇಶ್ವರನಾದ ನನ್ನ ನುಡಿ.”
22 :
ಮತ್ತೆ ಸರ್ವೇಶ್ವರಸ್ವಾಮಿ, “ಇಗೋ, ಉತ್ತರದಿಂದ ಒಂದು ರಾಷ್ಟ್ರ ಬರುತ್ತಿದೆ. ಅದು ಮಹಾ ಬಲಿಷ್ಠ ರಾಷ್ಟ್ರ. ಜಗದ ಕಟ್ಟಕಡೆಯಿಂದ ಹೊರಟುಬರುತ್ತಿದೆ.
23 : ಅವರು ಬಿಲ್ಲನ್ನೂ ಈಟಿಯನ್ನೂ ಹಿಡಿದಿದ್ದಾರೆ. ಅವರು ಕ್ರೂರಿಗಳು, ನಿಷ್ಕರುಣಿಗಳು. ಅವರ ಧ್ವನಿ ಸಮುದ್ರದಂತೆ ಭೋರ್ಗರೆಯುತ್ತಿದೆ. ಕುದುರೆಗಳನ್ನು ಏರಿದ್ದಾರೆ. ಎಲೌ ಸಿಯೋನ್ ನಗರಿಯೇ, ಆ ಶತ್ರುಸೈನ್ಯ ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ.”
24 : ಜೆರುಸಲೇಮಿನ ಜನರು: “ಈ ಸುದ್ದಿಯನ್ನು ಕೇಳಿದಾಗ ನಮ್ಮ ಕೈಗಳು ಜೋಲು ಬಿದ್ದುವು. ಪ್ರಸವವೇದನೆಯಂಥ ಯಾತನೆ ನಮ್ಮನ್ನು ಆವರಿಸಿತು.
25 : ಊರ ಹೊರಗೆ ಹೋಗುವಂತಿಲ್ಲ, ದಾರಿಯಲ್ಲಿ ನಡೆಯುವಂತಿಲ್ಲ. ಸುತ್ತ ಮುತ್ತಲೂ ಶತ್ರುವಿನ ಕತ್ತಿ, ಎಲ್ಲೆಲ್ಲೂ ದಿಗಿಲು ಎಂದರೆ ದಿಗಿಲು!”
26 : ಸರ್ವೇಶ್ವರ ಜನರಿಗೆ: “ನನ್ನ ಪ್ರಜೆಯೆಂಬ ಕುವರಿಯೇ, ಗೋಣಿತಟ್ಟನ್ನು ಸುತ್ತಿಕೊ, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡವಳಂತೆ ದುಃಖಪಟ್ಟು ಘೋರವಾಗಿ ಪ್ರಲಾಪಮಾಡು. ಕೊಳ್ಳೆಗಾರ ತಟ್ಟನೆ ನಿನ್ನ ಮೇಲೆ ಬೀಳಲಿದ್ದಾನೆ ಎಂಬುದನ್ನು ಮನದಲ್ಲಿಡು.”
27 : ಸರ್ವೇಶ್ವರ ಯೆರೆಮೀಯನಿಗೆ ಹೀಗೆ ಎಂದರು: “ನಿನ್ನನ್ನು ನನ್ನ ಜನವೆಂಬ ಅದುರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ. ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು.
28 : ಅವರೆಲ್ಲರು ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ತಾಮ್ರ, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು.
29 : ತಿದಿ ಬುಸು ಬುಸುಗುಟ್ಟುತ್ತದೆ. ಸೀಸ ಉರಿಯಿಂದ ಸುಟ್ಟು ಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ಅವನ ಶ್ರಮವೆಲ್ಲ ವ್ಯರ್ಥ. ಏಕೆಂದರೆ ಕಲ್ಮಷವನ್ನು ಅವನಿಂದ ತೆಗೆಯಲಾಗಲಿಲ್ಲ.
30 : ಸರ್ವೇಶ್ವರ ಆದ ನಾನು ಅವರನ್ನು ತಳ್ಳಿ ಬಿಟ್ಟಿರುವುದರಿಂದ ಅವರು ಕಂದುಬೆಳ್ಳಿ ಎನಿಸಿಕೊಳ್ಳುವರು.”