Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ಯೆಜೆಕಿಯೇಲ


1 : ಇಸ್ರಯೇಲಿನ ಹಿರಿಯರಲ್ಲಿ ಕೆಲವರು ಬಂದು,
2 : ನನ್ನ ಮುಂದೆ ಕುಳಿತುಕೊಂಡು ಇರುವಾಗ ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ ದಿ:
3 : “ನರಪುತ್ರನೇ, ಈ ಜನರು ವಿಗ್ರಹಗಳನ್ನು, ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೆ. ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಅಲ್ಲ.
4 : “ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ – ಇಸ್ರಯೇಲ್ ವಂಶದವರಲ್ಲಿ ಯಾರು ಯಾರು ವಿಗ್ರಹಗಳನ್ನು ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೋ, ಪಾಪಕಾರಿಯಾದ ಆ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೋ ಅಂಥವರು ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬಂದರೆ ಅವರು ಪಾತಕಕ್ಕೆ ಅಂದರೆ, ಅವರ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಸರ್ವೇಶ್ವರನಾದ ನಾನೇ ಅವರಿಗೆ ಉತ್ತರಕೊಡುವೆನು.
5 : ಇಸ್ರಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದ್ದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.
6 : “ಆದಕಾರಣ ನೀನು ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿರಿ; ನಿಮ್ಮ ಎಲ್ಲಾ ಅಸಹ್ಯ ವಸ್ತುಗಳ ಕಡೆಗೆ ಬೆನ್ನುಮಾಡಿರಿ.
7 : “ಏಕೆಂದರೆ ಇಸ್ರಯೇಲ್ ವಂಶದವರಲ್ಲಾಗಲಿ ಇಸ್ರಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ ಅವನಿಗೆ ಸರ್ವೇಶ್ವರನಾದ ನಾನೇ ಉತ್ತರಕೊಡುವೆನು.
8 : ಅವನಿಗೆ ವಿಮುಖನಾಗಿ ಅವನ ದುರ್ಗತಿಯು ಎಚ್ಚರಿಕೆಗೆ ಗುರುತಾಗಿಯೂ ಕಟ್ಟು ಗಾದೆಗಳಿಗೆ ವಸ್ತುವಾಗಿಯೂ ಆಗುವಂತೆ ಮಾಡುವೆನು; ಅವನನ್ನು ನನ್ನ ಜನರಿಂದ ಹೊರಹಾಕುವೆನು; ಹೀಗೆ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.
9 : “ಒಬ್ಬ ಪ್ರವಾದಿ ಮರುಳುಗೊಂಡು ದೈವೋಕ್ತಿಯೊಂದನ್ನು ನುಡಿದರೆ, ಆ ಪ್ರವಾದಿಯನ್ನು ಮರಳುಗೊಳಿಸಿದವನು ಸರ್ವೇಶ್ವರನಾದ ನಾನೇ. ನಾನು ಅವನ ಮೇಲೆ ಕೈಯೆತ್ತಿ ಇಸ್ರಯೇಲರಾದ ನನ್ನ ಜನರಿಂದ ತೆಗೆದುಹಾಕಿ ಅವನನ್ನು ನಿರ್ನಾಮ ಮಾಡುವೆನು.
10 : ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆ ಕೇಳುವವನ ದೋಷವೂ ಅಷ್ಟೇ; ಉಭಯರೂ ತಮ್ಮ ತಮ್ಮ ದೋಷಫಲವನ್ನು ಅನುಭವಿಸುವರು.
11 : ಹೀಗಾದರೆ ಇಸ್ರಯೇಲ್ ವಂಶದವರು ಇನ್ನು ನನ್ನನ್ನು ತೊರೆಯರು, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆಮಾಡಿಕೊಳ್ಳರು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿ ಇರುವೆನು; ಇದು ಸರ್ವೇಶ್ವರನಾದ ದೇವರ ನುಡಿ.”
12 : ಸರ್ವೇಶ್ವರ ದಯಪಾಲಿಸಿದ ವಾಣಿ ನನಗೆ ಹೀಗೆಂದಿತು:
13 : “ನರಪುತ್ರನೇ, ಒಂದು ನಾಡು ಅಪರಾಧವನ್ನು ನಡೆಸಿ ನನಗೆ ವಿರುದ್ಧ ಪಾಪ ಮಾಡಿದ ಮೇಲೆ ನಾನು ಕೈಯೆತ್ತಿ, ಅದರ ಜೀವನಾಧಾರವನ್ನು ನಿಲ್ಲಿಸಿಬಿಟ್ಟು, ಕ್ಷಾಮವನ್ನು ಬರಮಾಡಿ, ಜನ ಹಾಗೂ ಜಾನುವಾರುಗಳನ್ನು ಅದರಿಂದ ನಿರ್ಮೂಲ ಮಾಡುತ್ತೇನೆ.
14 : “ನರಪುತ್ರನೇ, ಒಂದು ನಾಡು ಅಪರಾಧವನ್ನು ನಡೆಸಿ ನನಗೆ ವಿರುದ್ಧ ಪಾಪ ಮಾಡಿದ ಮೇಲೆ ನಾನು ಕೈಯೆತ್ತಿ, ಅದರ ಜೀವನಾಧಾರವನ್ನು ನಿಲ್ಲಿಸಿಬಿಟ್ಟು, ಕ್ಷಾಮವನ್ನು ಬರಮಾಡಿ, ಜನ ಹಾಗೂ ಜಾನುವಾರುಗಳನ್ನು ಅದರಿಂದ ನಿರ್ಮೂಲ ಮಾಡುತ್ತೇನೆ.
15 : “ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ಆ ನಾಡಿನಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳಿಸಿ, ಹಾಳುಮಾಡಿ, ಯಾರೂ ಹಾದುಹೋಗದಂತೆ ಹೆದರಿಸುವ ಪಕ್ಷದಲ್ಲಿ
16 : ಈ ಮೂವರು ವ್ಯಕ್ತಿಗಳು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ನಾಡು ಹಾಳಾಗಿ ಹೋಗುವುದು; ಇದು ಸರ್ವೇಶ್ವರನಾದ ದೇವರ ನುಡಿ.
17 : “ ‘ಖಡ್ಗವೇ, ಆ ನಾಡನ್ನು ಹೊಕ್ಕು ಹೋಗು’ ಎಂದು ಆಜ್ಞಾಪಿಸಿ ನಾನು ಅದನ್ನು ಆ ನಾಡಿಗೆ ತಂದು, ಜನ ಹಾಗು ಜಾನುವಾರುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ
18 : ಈ ಮೂವರು ಪುರುಷರು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.
19 : “ನಾನು ಆ ನಾಡಿನ ಮೇಲೆ ಕೋಪಕಾರಿ, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನ ಜಾನುವಾರುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ
20 : ನೋಹ, ದಾನಿಯೇಲ, ಯೋಬ, ಎಂಬವರು ಅದರಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಗನನ್ನಾಗಲಿ ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.”
21 : ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಖಡ್ಗ, ಕ್ಷಾಮ, ದುಷ್ಟಮೃಗ, ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಜೆರುಸಲೇಮಿನ ಮೇಲೆ ಒಟ್ಟಿಗೆ ಬರಮಾಡಿ ಜನ ಜಾನುವಾರುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು !
22 : ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಅವರು ನಿಮ್ಮ ಬಳಿ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕøತ್ಯಗಳನ್ನು ಕಂಡು, ನಾನು ಜೆರುಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲ ಕೇಡುಗಳ ವಿಷಯವಾಗಿ, ಸಮಾಧಾನ ಹೊಂದುವಿರಿ.
23 : ನೀವು ಅವರ ದುರ್ಮಾರ್ಗ, ದುಷ್ಕøತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಜೆರುಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ಆಗ ತಿಳಿಯುವುದು. ಇದು ಸರ್ವೇಶ್ವರನಾದ ದೇವರ ನುಡಿ.”

· © 2017 kannadacatholicbible.org Privacy Policy