Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ಯೆಜೆಕಿಯೇಲ


1 : ಆಮೇಲೆ ದೇವರು, “ಈ ಪಟ್ಟಣವನ್ನು ದಂಡಿಸಲಿರುವವರೇ, ನೀವೆಲ್ಲರೂ ನಿಮ್ಮ ಹತ್ಯದ ಆಯುಧಗಳನ್ನು ಹಿಡಿದು ಸಮೀಪಿಸಿರಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು.
2 : ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು.
3 : ಇಷ್ಟರಲ್ಲಿ ಇಸ್ರಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಸರ್ವೇಶ್ವರ ಕೂಗಿ ಅವನಿಗೆ,
4 : “ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು.
5 : ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ;
6 : ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ”, ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸ ತೊಡಗಿದರು.
7 : ದೇವರು ಅವರಿಗೆ, “ಹೊರಡಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿ,” ಎಂದು ಅಪ್ಪಣೆಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.
8 : ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಸರ್ವೇಶ್ವರನಾದ ದೇವರೇ, ನೀವು ಜೆರುಸಲೇಮಿನ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿಸಿ ಇಸ್ರಯೇಲಿನ ಶೇಷವನ್ನೆಲ್ಲಾ ನಾಶಮಾಡುವಿರೋ?” ಎಂದು ಮೊರೆಯಿಟ್ಟೆ.
9 : ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿ ಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ;
10 : ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿ ಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ;
11 : ಕೂಡಲೆ ನಾರಿನ ಬಟ್ಟೆಯನ್ನು ಹೊದ್ದುಕೊಂಡು ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನು “ನಿಮ್ಮ ಅಪ್ಪಣೆಯಂತೆಯೇ ಮಾಡಿದ್ದೇನೆ,” ಎಂದು ಅರಿಕೆ ಮಾಡಿದನು.

· © 2017 kannadacatholicbible.org Privacy Policy