1 : ಅರಸನಾದ ಡೇರಿಯಸನ ಆಳ್ವಿಕೆಯ ನಾಲ್ಕನೆಯ ವರ್ಷದ ಒಂಭತ್ತನೆಯ ತಿಂಗಳ (ಅಂದರೆ ಕಿಸ್ಲೇವ್ ತಿಂಗಳಿನ) ನಾಲ್ಕನೆಯ ದಿನದಲ್ಲಿ ಸರ್ವೇಶ್ವರ ಜೆಕರ್ಯನಿಗೆ ಒಂದು ಸಂದೇಶವನ್ನು ಅನುಗ್ರಹಿಸಿದರು.
2 : ಅಷ್ಟರಲ್ಲಿ ಬೇತೇಲಿನ ಜನರು ಸರೆಚರನನ್ನು, ರೆಗೆಮ್ ಮೆಲೆಕ್‍ನನ್ನು ಹಾಗೂ ಅವನ ಪರಿಜನರನ್ನು ಸರ್ವೇಶ್ವರಸ್ವಾಮಿಯ ಆಶೀರ್ವಾದವನ್ನು ಕೋರಲು ದೇವಾಲಯಕ್ಕೆ ಕಳುಹಿಸಿದ್ದರು.
3 : ಅಲ್ಲದೆ, ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೇವಾಲಯದ ಯಾಜಕರನ್ನೂ ಪ್ರವಾದಿಗಳನ್ನೂ ಕಂಡು, “ನಾವು ಇಷ್ಟು ವರ್ಷಗಳಿಂದ ಅನುಸರಿಸಿಕೊಂಡು ಬಂದಂತೆ, 5ನೆಯ ತಿಂಗಳಲ್ಲಿ ಉಪವಾಸವಿದ್ದು ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.
ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನಗೆ ಈ ಸಂದೇಶವನ್ನು ದಯಪಾಲಿಸಿದರು:
4 :
ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನಗೆ ಈ ಸಂದೇಶವನ್ನು ದಯಪಾಲಿಸಿದರು:
5 : “ಯಾಜಕರಿಗೂ ನಾಡಿನ ಸಕಲ ಜನರಿಗೂ ಹೀಗೆಂದು ತಿಳಿಸು: ನೀವು ಕಳೆದ ಎಪ್ಪತ್ತು ವರ್ಷಗಳಿಂದ 5ನೇ ಮತ್ತು 7ನೇ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡಿದ್ದು ನನಗೋಸ್ಕರವೋ?
6 : ನೀವು ಭೋಜನ ಮಾಡಿದ್ದು, ಪಾನಮಾಡಿದ್ದು ನಿಮ್ಮ ತೃಪ್ತಿಗಾಗಿಯೇ ಅಲ್ಲವೆ?”
7 : “ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳು ಜನಭರಿತವಾಗಿ ನೆಮ್ಮದಿಯಿಂದಿದ್ದಾಗ ಹಾಗೂ ದಕ್ಷಿಣ ಪ್ರಾಂತ್ಯದಲ್ಲೂ ಬಯಲು ಪ್ರದೇಶದಲ್ಲೂ ಪ್ರಜೆಯು ತುಂಬಿದ್ದಾಗ ಪ್ರವಾದಿಗಳ ಮುಖಾಂತರ ಪ್ರಕಟಿಸಿದ ಸಂದೇಶ ಇದೇ ಅಲ್ಲವೆ?”
8 : ಅಲ್ಲದೆ ಸರ್ವೇಶ್ವರ ಜೆಕರ್ಯನಿಗೆ ಕೊಟ್ಟ ಸಂದೇಶ ಏನೆಂದರೆ:
9 : “ಸತ್ಯಾನುಸಾರ ನ್ಯಾಯ ತೀರಿಸಿರಿ.
10 : ಒಬ್ಬರಿಗೊಬ್ಬರು ಪ್ರೀತಿ ಕರುಣೆಯನ್ನು ತೋರಿಸಿರಿ. ವಿಧವೆಯರು, ಅನಾಥರು, ವಿದೇಶಿಯರು, ಬಡವರು, ಇವರಾರನ್ನೂ ಶೋಷಣೆಮಾಡಬೇಡಿ. ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.
11 : “ನಿಮ್ಮ ಪೂರ್ವಜರು ಕಿವಿಗೊಡದೆ ಹೋದರು: ಹಟಮಾರಿಗಳಾದರು; ಮಂದಮತಿಗಳಾದರು; ಅವರ ಹೃದಯ ಗೋರ್ಕಲ್ಲಿನಂತೆ ಆಯಿತು.
12 : ಧರ್ಮಶಾಸ್ತ್ರವನ್ನಾಗಲೀ ಪೂರ್ವಕಾಲದ ಪ್ರವಾದಿಗಳ ಮೂಖಾಂತರ, ಸೇನಾಧೀಶ್ವರ ಸರ್ವೇಶ್ವರ ಆದ ನಾನು ತಿಳಿಸಿದ ನನ್ನಾತ್ಮ ಪ್ರೇರಿತ ಮಾತುಗಳನ್ನಾಗಲೀ ಕೇಳದೆ ಹೋದರು. ಹೀಗೆ ನನ್ನ ಕಡುಕೋಪಕ್ಕೆ ಗುರಿಯಾದರು.
13 : ಆಗ ಹೀಗೆಂದೆ: ‘ನಾನು ಕೂಗಿದಾಗ ಅವರು ಕೇಳದೆ ಹೋದರು; ಅವರು ಕೂಗಿದಾಗ ನಾನು ಕೇಳಲಿಲ್ಲ.’
14 : ಬಿರುಗಾಳಿಯಂತೆ ಅವರನ್ನು ಅಪರಿಚಿತ ಜನಾಂಗಗಳ ಮಧ್ಯೆ ತೂರಿ ಚದರಿಬಿಟ್ಟೆ; ಹಾಗೆ ಅವರು ಚದರಿಹೋದ ಮೇಲೆ ನಾಡು ಹಾಳಾಯಿತು. ಅಲ್ಲಿ ಯಾರೂ ಉಳಿಯದಂತಾಯಿತು. ಅವರ ನಿಮಿತ್ತ ಚೆಲುವ ನಾಡು ನಿರ್ಜನ ಪ್ರದೇಶವಾಯಿತು.”