Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ಮಲಾಕಿಯ


1 : ಸೇನಾಧೀಶ್ವರ ಸರ್ವೇಶ್ವರ ಯಾಜಕರಿಗೆ ಹೀಗೆ ಹೇಳುತ್ತಾರೆ: “ನಿಮಗೆ ನಾನು ನೀಡುವ ಆಜ್ಞೆಯಿದು:
2 : ನನ್ನ ನಾಮಕ್ಕೆ ಮಹಿಮೆ ಸಲ್ಲಿಸಬೇಕು. ಇದನ್ನು ನೀವು ಮನದಟ್ಟು ಮಾಡಿಕೊಳ್ಳಬೇಕು. ನನ್ನ ಈ ಮಾತಿಗೆ ಕಿವಿಗೊಡದಿದ್ದರೆ ನಿಮಗೆ ಶಾಪವನ್ನು ತರುವೆನು. ನಿಮ್ಮ ವರಮಾನಗಳನ್ನೆಲ್ಲ ಶಾಪವಾಗಿ ಮಾರ್ಪಡಿಸುವೆನು; ಈಗಾಗಲೇ ಮಾರ್ಪಡಿಸಿರುವೆನು. ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಂಡಿಲ್ಲ.
3 : ಆದ್ದರಿಂದ ಇದನ್ನು ಗಮನವಿಟ್ಟು ಕೇಳಿ: ನಿಮ್ಮ ಸಂತಾನವನ್ನು ಖಂಡಿಸುವೆನು. ನಿಮ್ಮ ಮುಖಕ್ಕೆ ಸಗಣಿ ಬಳಿಯುವೆನು. ನಿಮ್ಮ ಯಜ್ಞಪಶುಗಳ ಸಗಣಿಯನ್ನೇ ಎರಚುವೆನು. ನೀವು ಆ ಸಗಣಿ ತಿಪ್ಪೆಯ ಪಾಲಾಗುವಿರಿ.
4 : ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಊರ್ಜಿತವಾಗಬೇಕೆಂದೇ ಈ ಅಪ್ಪಣೆಯನ್ನು ನಿಮಗೆ ಕೊಟ್ಟಿದ್ದೇನೆಂದು ಆಗ ನಿಮಗೆ ಗೊತ್ತಾಗುವುದು.” ಇದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ನುಡಿ.ನಡೆದುಕೊಂಡರು; ನನ್ನ ನಾಮಕ್ಕೆ ಅಂಜಿ ಬಾಳಿದರು.
5 : “ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಜೀವದಾತ ಹಾಗು ಬದುಕಿನಲ್ಲಿ ಶಾಂತಿ ತರುವಂಥ ಒಡಂಬಡಿಕೆ. ಅವರು ಭಯ ಭಕ್ತಿಯಿಂದ ಬಾಳಲೆಂದೇ ನಾನು ಅದನ್ನು ಅವರಿಗೆ ವಿಧಿಸಿದ್ದು. ಅಂತೆಯೇ ಹಿಂದೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನಡೆದುಕೊಂಡರು; ನನ್ನ ನಾಮಕ್ಕೆ ಅಂಜಿ ಬಾಳಿದರು.
6 : ಸತ್ಯಬೋಧೆ ಅವರ ಬಾಯಲ್ಲಿ ನೆಲೆಸಿತ್ತು. ಅವರ ತುಟಿಗಳಿಂದ ಅಪರಾಧವಾದುದೇನೂ ಹೊರಬರಲಿಲ್ಲ. ಶಾಂತಿಯಿಂದ, ಸದ್ಧರ್ಮದಿಂದ ಅವರು ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡರು. ಹಲವರನ್ನು ಪಾಪಕ್ಕೆ ವಿಮುಖರಾಗಿಸಿದರು.
7 : ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ದೂತನು.”
8 : “ನೀವು ನನ್ನ ಮಾರ್ಗವನ್ನು ಅನುಸರಿಸಲಿಲ್ಲ. ಧರ್ಮಶಾಸ್ತ್ರವನ್ನು ಬೋಧಿಸುವಾಗ ಪಕ್ಷಪಾತ ಮಾಡಿದ್ದೀರಿ. ಆದ್ದರಿಂದ ಎಲ್ಲ ಜನರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು. ಅವಿಧೇಯ ಗೃಹಸ್ಥರಿಗೆ ಶಾಪ
9 : “ನೀವು ನನ್ನ ಮಾರ್ಗವನ್ನು ಅನುಸರಿಸಲಿಲ್ಲ. ಧರ್ಮಶಾಸ್ತ್ರವನ್ನು ಬೋಧಿಸುವಾಗ ಪಕ್ಷಪಾತ ಮಾಡಿದ್ದೀರಿ. ಆದ್ದರಿಂದ ಎಲ್ಲ ಜನರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.
10 : ನಮ್ಮೆಲ್ಲರಿಗೂ ತಂದೆ ಒಬ್ಬರೇ ಅಲ್ಲವೇ? ನಮ್ಮೆಲ್ಲರನ್ನು ಸೃಷ್ಟಿಸಿದ ದೇವರು ಒಬ್ಬರೇ ಅಲ್ಲವೇ? ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹ ಮಾಡುವುದೇಕೆ? ದೇವರು ನಮ್ಮ ಪೂರ್ವಜರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನಾವು ಉಲ್ಲಂಘಿಸುವುದೇಕೆ?
11 : ಜುದೇಯದ ಜನರು ದ್ರೋಹ ಮಾಡಿದ್ದಾರೆ. ಇಸ್ರಯೇಲಿನಲ್ಲಿಯೂ ಜೆರುಸಲೇಮಿನಲ್ಲಿಯೂ ದುರಾಚಾರ ನಡೆಯುತ್ತಿದೆ. ಯೆಹೂದ್ಯರು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ, ಸರ್ವೇಶ್ವರಸ್ವಾಮಿಗೆ ಪ್ರಿಯವಾದ ದೇವಾಲಯವನ್ನು ಹೊಲೆಗೆಡಿಸಿದ್ದಾರೆ.
12 : ಇಂಥ ಕೃತ್ಯವನ್ನು ಎಸಗುವವನು ಎಂಥ ಕುಟುಂಬಕ್ಕಾದರೂ ಸೇರಿರಲಿ, ಅವನ ಪರವಾಗಿ ಸಾಕ್ಷಿಕೊಡುವವನೇ ಆಗಿರಲಿ - ಅಂಥವನನ್ನು ಸೇನಾಧೀಶ್ವರ ಸರ್ವೇಶ್ವರ ಯಕೋಬನ ಕುಲದಿಂದ ಹೊರಗೆ ಹಾಕುವರು.
13 : ನೀವು ಇನ್ನೊಂದು ಕೆಲಸವನ್ನು ಮಾಡುತ್ತೀರಿ: ‘ಸರ್ವೇಶ್ವರ ನಮ್ಮ ಕಾಣಿಕೆಗಳನ್ನು ಲಕ್ಷಿಸುವುದಿಲ್ಲ. ನಮ್ಮ ಕೈಯಿಂದ ಅವುಗಳನ್ನು ಪ್ರಸನ್ನತೆಯಿಂದ ಸ್ವೀಕರಿಸುವುದಿಲ್ಲ,’ ಎಂದುಕೊಂಡು ನರಳುತ್ತಾ ಗೋಳಾಡುತ್ತಾ ಕಣ್ಣೀರಿನಿಂದ ಬಲಿಪೀಠವನ್ನೇ ಮುಳುಗಿಸಿಬಿಡುತ್ತೀರಿ.
14 : ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ಕಾರಣ ಇದೇ: ನಿನಗೂ ನಿನ್ನ ಹೆಂಡತಿಗೂ ಯೌವನದಲ್ಲಿ ಆದ ವಿವಾಹದ ಒಪ್ಪಂದಕ್ಕೆ ಸರ್ವೇಶ್ವರಸ್ವಾಮಿಯೇ ಸಾಕ್ಷಿ. ಆದರೂ ನಿನ್ನ ಅರ್ಧಾಂಗಿ ಹಾಗು ನ್ಯಾಯವಾದ ಧರ್ಮಪತ್ನಿ ಆದ ಆಕೆಗೆ ದ್ರೋಹಮಾಡಿರುವೆ.
15 : ದೇವರು ನಿನ್ನ ಮತ್ತು ಆಕೆಯ ತನುಮನಗಳನ್ನು ಒಂದಾಗಿ ಮಾಡಲಿಲ್ಲವೆ? ಅವರ ಉದ್ದೇಶವಾದರೂ ಏನಾಗಿತ್ತು? ದೇವರ ಮಕ್ಕಳಾಗಿ ಬಾಳುವ ಸಂತಾನಪ್ರಾಪ್ತಿಯೇ ಅವರ ಉದ್ದೇಶವಾಗಿತ್ತು. ಆದಕಾರಣ ಯೌವನದಲ್ಲಿ ಮದುವೆಯಾದ ಮಡದಿಗೆ ದ್ರೋಹವೆಸಗದಂತೆ, ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.
16 : ಇಸ್ರಯೇಲಿನ ದೇವರಾದ ಸರ್ವೇಶ್ವರ ಹೀಗೆ ಹೇಳುತ್ತಾರೆ: “ವಿವಾಹ ವಿಚ್ಛೇದನವನ್ನು ದ್ವೇಷಿಸುತ್ತೇನೆ. ತನ್ನ ಮಡದಿಗೆ ನಂಬಿಕೆ ದ್ರೋಹವನ್ನೆಸಗುವವನನ್ನು ಹಾಗು ದೌರ್ಜನ್ಯ ತೋರುವವನನ್ನು ಹಗೆ ಮಾಡುತ್ತೇನೆ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ಆದ ಕಾರಣ ಮನಃಪೂರ್ವಕವಾಗಿ ಎಚ್ಚರಿಕೆಯಿಂದಿರಿ. ನಿಮ್ಮ ಮಡದಿಗೆ ದ್ರೋಹವೆಸಗದಿರಿ.
17 : “ನೀವು ನಿಮ್ಮ ಮಾತುಗಳಿಂದ ಪ್ರಭುವನ್ನು ಬೇಸರಗೊಳಿಸಿದ್ದೀರಿ. ‘ಯಾವ ವಿಷಯದಲ್ಲಿ ಅವರನ್ನು ಬೇಸರಗೊಳಿಸಿದ್ದೇವೆ?’ ಎನ್ನುತ್ತೀರೋ? ‘ಕೆಡುಕರೆಲ್ಲರೂ ದೇವರ ದೃಷ್ಟಿಯಲ್ಲಿ ಒಳ್ಳೆಯವರು. ಅವರೇ ಆತನಿಗೆ ಬೇಕಾದವರು’ ಎಂದು ಹೇಳುವುದರಿಂದ: ‘ನ್ಯಾಯ ತೀರಿಸುವ ದೇವರೆಲ್ಲಿ?’ ಎಂದು ಕೇಳುವುದರಿಂದ.”

· © 2017 kannadacatholicbible.org Privacy Policy