Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ಯಾಜಕಕಾಂಡ


1 : ಸರ್ವೇಶ್ವರಸ್ವಾಮಿ ಮೋಶೆ ಮತ್ತು ಆರೋನರಿಗೆ ಹೀಗೆಂದರು:
2 : “ನೀವು ಇಸ್ರಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ - ಒಬ್ಬ ವ್ಯಕ್ತಿಯ ಜನನೇಂದ್ರಿಯದಿಂದ ಮೇಹಸ್ರಾವವಾದರೆ ಆ ಕಾರಣ ಆ ವ್ಯಕ್ತಿ ಅಶುದ್ಧನು.
2 : ಅಂತೆಯೇ ಆ ಇಸ್ರಯೇಲರೆಲ್ಲರು ಏಳನೆಯ ತಿಂಗಳಾದ ಆಶ್ವಯುಜ ಮಾಸದಲ್ಲಿ ಜಾತ್ರೆಯಾಗಿ ಅರಸ ಸೊಲೊಮೋನನ ಬಳಿಗೆ ಕೂಡಿಬಂದರು.
3 : ಆ ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಆ ದೇಹಸ್ಥಿತಿಯಿಂದ ಅವನು ಅಶುದ್ಧನು.
4 : ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಕೂತಿರುವ ಪ್ರತಿಯೊಂದು ಆಸನವೂ ಅಶುದ್ಧ.
5 : ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಅವನು ಆ ದಿನದ ಸಂಜೆಯವರೆಗೆ ಅಶುದ್ಧನು.
6 : ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.
7 : ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.
8 : ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.
9 : ಸ್ರಾವವುಳ್ಳವನು ಕುಳಿತಿದ್ದ ತಡಿಯು ಅಶುದ್ಧ.
10 : ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಆ ಸಂಜೆಯವರೆಗೆ ಅಶುದ್ಧನಾಗಿರುವನು. ಅಂಥ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.
11 : ಸ್ರಾವಉಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾರನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.
12 : ಸ್ರಾವ ಉಳ್ಳವನು ಮುಟ್ಟಿದ ಮಣ್ಣಿನಪಾತ್ರೆಯನ್ನು ಒಡೆದು ಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು.
13 : “ಸ್ರಾವವುಳ್ಳವನ ಸ್ರಾವವು ನಿಂತು ವಾಸಿ ಆದಾಗ ಅವನು ಶುದ್ಧ ಮಾಡಿಸಿಕೊಳ್ಳುವುದಕ್ಕೆ ಆಗಿನಿಂದ ಏಳು ದಿನಗಳನ್ನು ಎಣಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಒರತೆ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.
14 : ಎಂಟನೆಯ ದಿನ ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿಪಾರಿವಾಳಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಸರ್ವೇಶ್ವರನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.
15 : ಯಾಜಕನು ದೋಷಪರಿಹಾರ ಬಲಿಯಾಗಿ ಒಂದನ್ನೂ ದಹನಬಲಿ ಆಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ಪರವಾಗಿ ದೋಷಪರಿಹಾರ ಮಾಡುವನು.
16 : “ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗಸ್ನಾನ ಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
17 : ಯಾವ ಬಟ್ಟೆಯ ಮೇಲಾಗಲಿ, ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದವರೆಗೆ ಅಶುದ್ಧವಾಗಿರುವುದು.
18 : ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನ ಮಾಡಿಕೊಳ್ಳಬೇಕು; ಅವರು ಸಂಜೆಯವರೆಗೆ ಅಶುದ್ಧರಾಗಿರುವರು.
19 : “ಮಹಿಳೆಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಂಜೆಯವರೆಗೆ ಅಶುದ್ಧರಾಗುವರು.
20 : ಅವಳು ಮುಟ್ಟಾಗಿ ಇರುವಾಗ ಯಾವುದರ ಮೇಲೆ ಮಲಗಿದರೂ ಕುಳಿತುಕೊಂಡರೂ ಅದು ಅಶುದ್ಧವಾಗಿರುವುದು.
21 : ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಸಂಜೆಯವರೆಗೆ ಅಶುದ್ಧನಾಗಿರುವನು.
22 : ಅವಳು ಯಾವುದರ ಮೇಲೆ ಕುಳಿತಿದ್ದಳೋ ಅದನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಸಂಜೆಯವರೆಗೆ ಅಶುದ್ಧನಾಗಿರುವನು.
23 : ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ, ಕುಳಿತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವುದನ್ನಾದರೂ ಮುಟ್ಟಿದವನು ಸಂಜೆಯವರೆಗೆ ಅಶುದ್ಧನಾಗಿರುವನು.
24 : ಪುರುಷನು ಒಂದು ವೇಳೆ ಅಂಥವಳೊಡನೆ ಸಂಗಮಿಸಿ ಅವಳ ರಜಸ್ಸು ಅವನಿಗೆ ತಗಲಿದರೆ ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವುದು.
25 : “ಮಹಿಳೆಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲೂ ರಕ್ತಸ್ರಾವವಾದರೆ, ಇಲ್ಲವೆ ಮುಟ್ಟಿನ ಕಾಲಕ್ಕೆ ತಕ್ಕದ್ದಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ, ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ಧಳೋ ಹಾಗೆಯೇ ಆ ಸ್ರಾವವಾಗುವ ದಿನಗಳೆಲ್ಲಾ ಅಶುದ್ಧಳಾಗಿರುವಳು.
26 : ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ, ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ, ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತು ಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು.
27 : ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದುದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಂಜೆಯವರೆಗೆ ಅಶುದ್ಧನಾಗಿರುವನು.
28 : ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕಿಸಿಕೊಂಡು ತರುವಾಯ ಶುದ್ಧಳಾಗುವಳು.
29 : ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.
30 : ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಗಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಪರಿಶುದ್ಧತೆಯ ವಿಷಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವಳ ಪರವಾಗಿ ದೋಷಪರಿಹಾರ ಮಾಡುವನು.
31 : “ಇಸ್ರಯೇಲರು ಅಶುದ್ಧತೆಗೆ ದೂರವಾಗಿ ಇರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆ ಮಾಡಿದರೆ ನಾಶವಾದಾರು.
32 : “ಮೇಹಸ್ರಾವವುಳ್ಳವನು, ವೀರ್ಯಸ್ಖಲನದಿಂದ ಅಶುದ್ಧನಾದವನು.
33 : ಮುಟ್ಟಾದ ಮಹಿಳೆ, ಸ್ರಾವವುಂಟಾಗುವ ಸ್ತ್ರೀಪುರುಷರು ಹಾಗು ಅಶುದ್ಧಳಾದ ಮಹಿಳೆಯನ್ನು ಸಂಗಮಿಸಿದವನು ಇವರ ವಿಷಯವಾದ ನಿಯಮಗಳು ಇವು.”

· © 2017 kannadacatholicbible.org Privacy Policy