1 : ಸರ್ವೇಶ್ವರಸ್ವಾಮಿ ಮೋಶೆ - ಆರೋನರಿಗೆ ಕೊಟ್ಟ ಆಜ್ಞೆ ಇದು:
2 : “ಇಸ್ರಯೇಲ ಎಲ್ಲರೂ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪ್ರತಿಯೊಬ್ಬನೂ ತನ್ನತನ್ನ ಗೋತ್ರ ಧ್ವಜದ ಹತ್ತಿರ ತನ್ನತನ್ನ ದಂಡಿನಲ್ಲೇ ಇಳಿದುಕೊಳ್ಳಬೇಕು.
3 : “ಸೂರ್ಯೋದಯವಾಗುವ ದಿಕ್ಕಿನಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆ ಕುಲದವರಿಗೆ ನಾಯಕ ಅಮ್ಮಿನಾದಾಬನ ಮಗ ನಹಶೋನ;
4 : ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 74,600.
5 : ಅವರ ಸವಿೂಪದಲ್ಲೇ ಇಸ್ಸಾಕಾರ್ ಕುಲದವರೂ ಜೆಬುಲೂನ್ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆ ಕುಲದವರಿಗೆ ನಾಯಕ ಚೂವಾರನ ಮಗ ನೆತನೇಲ್;
7 : ಜೆಬುಲೂನ್ಯರಿಗೆ ನಾಯಕ ಹೇಲೋನನ ಮಗ ಎಲೀಯಾಬ್;
8 : ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 57,400.
9 : ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರೆಲ್ಲರ ಸಂಖ್ಯೆ - 1,86,400. ಇವರು ಮುಂಭಾಗದಲ್ಲಿ ಹೊರಡಬೇಕು.
10 : “ದಕ್ಷಿಣ ದಿಕ್ಕಿನಲ್ಲಿ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಈ ರೂಬೇನ್ ಕುಲದವರಿಗೆ ನಾಯಕ ಶೆದೇಯೂರನ ಮಗ ಎಲೀಚೂರ;
11 : ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 46,500.
12 : ಅವರ ಸವಿೂಪದಲ್ಲೆ ಸಿಮೆಯೋನ್ ಕುಲದವರೂ ಗಾದ್ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಸಿಮೆಯೋನ ಕುಲದವರಿಗೆ ನಾಯಕ ಚೂರೀಷದ್ದೈಯನ ಮಗ ಶೆಲೂವಿೂಯೇಲ;
13 : ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 59,300.
14 : ಗಾದ್ ಕುಲದವರಿಗೆ ನಾಯಕ ರೆಗೂವೇಲನ ಮಗ ಎಲ್ಯಾಸಾಫ;
15 : ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 45,650.
16 : ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದ್ದವರೆಲ್ಲರ ಸಂಖ್ಯೆ - 1,51,450. ಇವರು ಎರಡನೆಯ ದಂಡಾಗಿ ಹೊರಡಬೇಕು.
17 : “ಅನಂತರ ಸೈನ್ಯಗಳ ನಟ್ಟನಡುವೆ ದೇವದರ್ಶನದ ಗುಡಾರ ಮತ್ತು ಲೇವಿಯರ ಪಾಳೆಯದವರು ಹೊರಡಬೇಕು. ಅವರು ಹೇಗೆ ಇಳಿದುಕೊಂಡಿದ್ದರೋ ಹಾಗೆಯೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮ್ಮ ತಮ್ಮ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು.
18 : “ಪಶ್ಚಿಮ ದಿಕ್ಕಿನಲ್ಲಿ ಎಫ್ರಯಿಮ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರಿಗೆ ನಾಯಕ ಅವ್ಮಿೂಹೂದನ ಮಗ ಎಲೀಷಾಮಾ;
19 : ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 40,500.
20 : ಅವರ ಸವಿೂಪದಲ್ಲೆ ಮನಸ್ಸೆ ಕುಲದವರು ಬೆನ್ಯಾವಿೂನ್ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಮನಸ್ಸೆ ಕುಲದವರಿಗೆ ನಾಯಕ ಪೆದಾಚೂರನ ಮಗ ಗಮ್ಲಿಯೇಲ್;
21 : ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 32,200.
22 : ಬೆನ್ಯಾವಿೂನ್ ಕುಲದವರಿಗೆ ನಾಯಕ ಗಿದ್ಯೋನಿಯ ಮಗ ಅಬೀದಾನ್;
23 : ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 35,400.
24 : ಹೀಗೆ ಎಫ್ರಯಿಮರ ದಂಡಿಗೆ ಸೇರಿದವರೆಲ್ಲರ ಸಂಖ್ಯೆ - 1,08,100. ಇವರು ಮೂರನೆಯ ದಂಡಾಗಿ ಹೊರಡಬೇಕು.
25 : “ಉತ್ತರ ದಿಕ್ಕಿನಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರಿಗೆ ನಾಯಕ ಅವಿ್ಮೂಷದ್ದೈಯನ ಮಗ ಅಹೀಗೆಜೆರ್;
26 : ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 62,700.
27 : ಅವರ ಸವಿೂಪದಲ್ಲೆ ಆಶೇರ್ ಕುಲದವರು ಮತ್ತು ನಫ್ತಾಲಿ ಕುಲದವರು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆಶೇರ್ ಕುಲದವರಿಗೆ ನಾಯಕ ಒಕ್ರಾನನ ಮಗ ಪಗೀಯೇಲ್;
28 : ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 41,500.
29 : ನಫ್ತಾಲಿ ಕುಲದವರಿಗೆ ನಾಯಕ ಏನಾನನ ಮಗ ಅಹೀರ;
30 : ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 53,400.
31 : ಹೀಗೆ ದಾನ್ ಕುಲದ ದಂಡಿಗೆ ಸೇರಿದವರೆಲ್ಲರ ಸಂಖ್ಯೆ - 1,57,600. ಇವರು ಕಡೆಯ ದಂಡಾಗಿ ಹೊರಡಬೇಕು.”
32 : ಇವರೇ ಇಸ್ರಯೇಲರಲ್ಲಿ ಗೋತ್ರಗೋತ್ರಗಳ ಪ್ರಕಾರ ಎಣಿಕೆಯಾದವರು. ಆ ದಂಡುಗಳಲ್ಲಿ ಸೈನಿಕರಾಗಿ ಎಣಿಕೆಯಾದ ಸೈನಿಕರ ಸಂಖ್ಯೆ - 6,03,500.
33 : ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಲೇವಿಯರು ಇತರ ಇಸ್ರಯೇಲರ ಸಂಗಡ ಎಣಿಕೆಯಾಗಲಿಲ್ಲ.
34 : ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು. ಹಾಗೆಯೆ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಅಂತೆಯೇ ಗೋತ್ರ ಕುಟುಂಬಗಳ ಪ್ರಕಾರ ಹೊತ್ತಿದ್ದರು.