Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

ಸಂಖ್ಯಾಕಾಂಡ


1 : ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ಮೇಲೆ ಅದನ್ನೂ ಅದರ ಸಾಮಾನುಗಳನ್ನೂ ಹಾಗೂ ಬಲಿಪೀಠವನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.
2 : ಆಗ ಇಸ್ರಯೇಲರ ಮುಖ್ಯಸ್ಥರು, ಅಂದರೆ ಗೋತ್ರನಾಯಕರು ಹಾಗೂ ಕುಲಾಧಿಪತಿಗಳಾಗಿದ್ದು ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು, ಕಾಣಿಕೆಗಳನ್ನು ತಂದೊಪ್ಪಿಸಿದರು.
3 : ಇಬ್ಬರಿಬ್ಬರು ಒಂದು ಕಮಾನು ಬಂಡಿಯನ್ನೂ ಒಂದು ಜೊತೆ ಎತ್ತುಗಳನ್ನೂ ಅಂತು ಆರು ಬಂಡಿಗಳನ್ನೂ ಆರು ಜೊತೆ ಎತ್ತುಗಳನ್ನೂ ದೇವದರ್ಶನದ ಗುಡಾರದ ಮುಂದೆ ಸರ್ವೇಶ್ವರನ ಸನ್ನಿಧಿಗೆ ತಂದು ಅರ್ಪಿಸಿದರು.
5 : “ಈ ಕಾಣಿಕೆಯ ವಸ್ತುಗಳನ್ನು ಇವರ ಕೈಯಿಂದ ತೆಗೆದುಕೊ; ಇವು ದೇವದರ್ಶನದ ಗುಡಾರದ ಸೇವೆಗೆ ಉಪಯೋಗವಾಗಲಿ. ಲೇವಿಯರಿಗೆ ಅವರವರ ಕೆಲಸಕ್ಕೆ ತಕ್ಕ ಹಾಗೆ ಅವುಗಳನ್ನು ಕೊಡು,” ಎಂದು ಆಜ್ಞಾಪಿಸಿದರು.
6 : ಅಂತೆಯೇ, ಮೋಶೆ ಆ ಬಂಡಿಗಳನ್ನು ಹಾಗೂ ಎತ್ತುಗಳನ್ನು ತೆಗೆದುಕೊಂಡು ಲೇವಿಯರಿಗೆ ಕೊಟ್ಟನು.
7 : ಎರಡು ಬಂಡಿಗಳನ್ನು ಹಾಗೂ ನಾಲ್ಕು ಎತ್ತುಗಳನ್ನು ಗೇರ್ಷೋನ್ಯರಿಗೆ,
8 : ನಾಲ್ಕು ಬಂಡಿ ಹಾಗೂ ಎಂಟು ಎತ್ತುಗಳನ್ನು ಮೆರಾರೀಯರಿಗೆ, ಅವರವರ ಸೇವೆಗೆ ತಕ್ಕ ಹಾಗೆ ಕೊಟ್ಟನು. ಇವರು ಮಹಾ ಯಾಜಕ ಆರೋನನ ಮಗ ಈತಾಮಾರನ ಕೈಕೆಳಗೆ ಸೇವೆ ಮಾಡಬೇಕಾಗಿತ್ತು.
9 : ಕೆಹಾತ್ಯರಿಗೆ ಮಾತ್ರ ಏನನ್ನೂ ಕೊಡಲಿಲ್ಲ. ಏಕೆಂದರೆ ದೇವದರ್ಶನದ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲ ಮೇಲೆ ಹೊರಬೇಕಾಗಿತ್ತು.
10 : ಬಲಿಪೀಠವನ್ನು ಅಭಿಷೇಕಿಸಿದ ದಿನದಂದು ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.
11 : ಆಗ ಸರ್ವೇಶ್ವರ ಮೋಶೆಗೆ, “ಒಬ್ಬೊಬ್ಬ ಕುಲಾಧಿಪತಿ ಒಂದೊಂದು ದಿನ ಬಲಿಪೀಠದ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಲಿ,” ಎಂದು ಆಜ್ಞಾಪಿಸಿದರು.
12 : ಮೊದಲನೆಯ ದಿನ ಕಾಣಿಕೆ ತಂದೊಪ್ಪಿಸಿದವನು ಯೆಹೂದ ಕುಲಾಧಿಪತಿ ಅವಿ್ಮೂನದಾಬನ ಮಗ ನಹಶೋನ.
13 : ಅವನು ತಂದ ಕಾಣಿಕೆಗಳು: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಬೆಳ್ಳಿಯ ಒಂದು ಹರಿವಾಣ; 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು;
14 : ಧೂಪದ್ರವ್ಯ ತುಂಬಿದ್ದ 10ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ;
15 : ದಹನ ಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;
16 : ಪಾಪಪರಿಹಾರಕ ಬಲಿಗಾಗಿ ಒಂದು ಹೋತ;
17 : ಸಮಾಧಾನಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಅವಿ್ಮೂನಾದಾಬನ ಮಗ ನಹಶೋನನು ಸಮರ್ಪಿಸಿದ ಕಾಣಿಕೆಗಳು ಇವೇ.
18 : ಎರಡನೆಯ ದಿನ ಇಸ್ಸಾಕಾರ್ ಕುಲಾಧಿಪತಿ ಚೂವಾರನ ಮಗ ನೆತನೇಲನು ತಂದ ಕಾಣಿಕೆಗಳು:
19 : ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ; 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು;
20 : ದೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ;
21 : ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;
22 : ಪಾಪಪರಿಹಾರಕ ಬಲಿಗಾಗಿ ಒಂದು ಹೋತ;
23 : ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು, ಇವೇ ಚೂವಾರನ ಮಗ ನೆತನೇಲನು ಕೊಟ್ಟ ಕಾಣಿಕೆಗಳು.
24 : ಮೂರನೆಯ ದಿನ ಜೆಬುಲೂನ್ ಕುಲಾಧಿಪತಿ ಹೇಲೋನನ ಮಗ ಎಲೀಯಾಬನು ತಂದ ಕಾಣಿಕೆಗಳು:
25 : ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ; 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋದಿಯ ಹಿಟ್ಟು;
26 : ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ;
27 : ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;
28 : ಪಾಪಪರಿಹಾರಕಬಲಿಗಾಗಿ ಒಂದು ಹೋತ;
29 : ಸಮಾಧಾನಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಹೇಲೋನನ ಮಗ ಎಲೀಯಾಬನು ಸಮರ್ಪಿಸಿದ ಕಾಣಿಕೆಗಳು.
30 : ನಾಲ್ಕನೆಯ ದಿನ ರೂಬೇನ್ ಕುಲಾಧಿಪತಿ ಶೆದೇಯೂರನ ಮಗ ಎಲೀಚೂರನು ತಂದ ಕಾಣಿಕೆಗಳು:
31 : ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ; 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು;
32 : ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ;
33 : ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;
34 : ಪಾಪಪರಿಹಾರಕ ಬಲಿಗಾಗಿ ಒಂದು ಹೋತ;
35 : ಸಮಾಧಾನಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಶೆದೇಯೂರನ ಮಗ ಎಲೀಚೂರನು ಸಮರ್ಪಿಸಿದ ಕಾಣಿಕೆಗಳು ಇವೇ.
36 : ಐದನೆಯ ದಿನ ಸಿಮೆಯೋನ್ ಕುಲಾಧಿಪತಿ ಚೂರಿಷದ್ದೈಯನ ಮಗ ಶೆಲುವಿೂಯೇಲನು ತಂದ ಕಾಣಿಕೆಗಳು:
37 : ದೇವಸ್ಥಾನದ ನಾಣ್ಯ ತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ; 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು;
38 : ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ;
39 : ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;
40 : ಪಾಪಪರಿಹಾರಕಬಲಿಗಾಗಿ ಒಂದು ಹೋತ;
41 : ಸಮಾಧಾನಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು, ಮತ್ತು ವರ್ಷದ ಐದು ಕುರಿಗಳು. ಇವೇ ಚೂರೀಷದ್ದೈಯನ ಮಗ ಶೆಲುವಿೂಯೇಲನು ಸಮರ್ಪಿಸಿದ ಕಾಣಿಕೆಗಳು.
42 : ಆರನೆಯ ದಿನ ಗಾದ್ ಕುಲಾಧಿಪತಿ ದೆಗೂವೇಲನ ಮಗ ಎಲ್ಯಾಸಾಫನು ತಂದ ಕಾಣಿಕೆಗಳು:
43 : ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ; 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು;
44 : ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ;
45 : ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;
46 : ಪಾಪಪರಿಹಾರಕ ಬಲಿಗಾಗಿ ಒಂದು ಹೋತ;
47 : ಸಮಾಧಾನಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ದೆಗೂವೇಲನ ಮಗ ಎಲ್ಯಾಸಾಫನು ಸಮರ್ಪಿಸಿದ ಕಾಣಿಕೆಗಳು.
48 : ಏಳನೆಯ ದಿನ ಎಫ್ರಯಿಮ್ ಕುಲಾಧಿಪತಿ ಅಮ್ಮೂಹೂದನ ಮಗ ಎಲೀಷಾವನು ತಂದ ಕಾಣಿಕೆಗಳು:
49 : ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ; 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋದಿಯ ಹಿಟ್ಟು;
50 : ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ;
51 : ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;
52 : ಪಾಪಪರಿಹಾರಕ ಬಲಿಗಾಗಿ ಒಂದು ಹೋತ;
53 : ಸಮಾಧಾನಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಅವಿ್ಮೂ ಹೂದನ ಮಗ ಎಲೀಷಾವನು ಸಮರ್ಪಿಸಿದ ಕಾಣಿಕೆಗಳು ಇವೇ.
54 : ಎಂಟನೆಯ ದಿನ ಮನಸ್ಸೆ ಕುಲಾಧಿಪತಿ ಪೆದಾಚೂರನ ಮಗ ಗವಿ್ಮೂಯೇಲನು ತಂದ ಕಾಣಿಕೆಗಳು:
55 : ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಬೆಳ್ಳಿಯ ಹರಿವಾಣ; 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು;
56 : ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ;
58 : ಪಾಪಪರಿಹಾರಕಬಲಿಗಾಗಿ ಒಂದು ಹೋತ;
59 : ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಪೆದಾಚೂರನ ಮಗ ಗವಿ್ಮೂಯೇಲನು ಸಮರ್ಪಿಸಿದ ಕಾಣಿಕೆಗಳು ಇವೇ.
60 : ಒಂಬತ್ತನೆಯ ದಿನ ಬೆನ್ಯಾವಿೂನ್ ಕುಲಾಧಿಪತಿ ಗಿದ್ಯೋನಿಯ ಮಗ ಅಬೀದಾನನು ತಂದ ಕಾಣಿಕೆಗಳು:
61 : ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಬೆಳ್ಳಿಯ ಹರಿವಾಣ; 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು;
62 : ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ;
63 : ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;
64 : ಪಾಪಪರಿಹಾರಕಬಲಿಗಾಗಿ ಒಂದು ಹೋತ;
65 : ಸಮಾಧಾನಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಗಿದ್ಯೋನಿಯ ಮಗ ಅಬೀದಾನನು ಸಮರ್ಪಿಸಿದ ಕಾಣಿಕೆಗಳು.
66 : ಹತ್ತನೆಯ ದಿನ ದಾನ್ ಕುಲಾಧಿಪತಿ ಅವಿ್ಮೂಷದ್ದೈಯನ ಮಗ ಅಹೀಗೆಜೆರನು ತಂದ ಕಾಣಿಕೆಗಳು:
67 : ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಬೆಳ್ಳಿಯ ಹರಿವಾಣ; 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು;
68 : ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ;
69 : ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;
70 : ಪಾಪಪರಿಹಾರಕಬಲಿಗಾಗಿ ಒಂದು ಹೋತ;
71 : ಸಮಾಧಾನಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಅವಿ್ಮೂಷದ್ದೈಯನ ಮಗ ಅಹೀಗೆಜೆರನು ಸಮರ್ಪಿಸಿದ ಕಾಣಿಕೆಗಳು ಇವೇ.
72 : ಹನ್ನೊಂದನೆಯ ದಿನ ಆಶೇರ್ ಕುಲಾಧಿಪತಿ ಒಕ್ರಾನನ ಮಗ ಪಗೀಯೇಲನು ತಂದ ಕಾಣಿಕೆಗಳು:
73 : ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಬೆಳ್ಳಿಯ ಹರಿವಾಣ; 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು;
74 : ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ;
75 : ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;
76 : ಪಾಪಪರಿಹಾರಕಬಲಿಗಾಗಿ ಒಂದು ಹೋತ;
77 : ಸಮಾಧಾನಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಒಕ್ರಾನನ ಮಗ ಪಗೀಯೇಲನು ಸಮರ್ಪಿಸಿದ ಕಾಣಿಕೆಗಳು.
78 : ಹನ್ನೆರಡನೆಯ ದಿನ ನಫ್ತಾಲಿ ಕುಲಾಧಿಪತಿ ಏನಾನನ ಮಗ ಅಹೀರನು ತಂದ ಕಾಣಿಕೆಗಳು:
79 : ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಬೆಳ್ಳಿಯ ಹರಿವಾಣ; 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋದಿಯ ಹಿಟ್ಟು;
80 : ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ;
81 : ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;
82 : ಪಾಪಪರಿಹಾರಕಬಲಿಗಾಗಿ ಒಂದು ಹೋತ;
83 : ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಏನಾನನ ಮಗ ಅಹೀರನು ಸಮರ್ಪಿಸಿದ ಕಾಣಿಕೆಗಳು.
84 : ಬಲಿಪೀಠವನ್ನು ಅಭಿಷೇಕಿಸಲಾದ ದಿನದಂದು ಇಸ್ರಯೇಲರ ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಸಮರ್ಪಿಸಿದ ಕಾಣಿಕೆಗಳು ಒಟ್ಟು: 12 ಬೆಳ್ಳಿಯ ಹರಿವಾಣಗಳು; 12 ಬೆಳ್ಳಿಯ ಬಟ್ಟಲುಗಳು; 12 ಚಿನ್ನದ ಧೂಪಾರತಿಗಳು;
85 : ಒಂದೊಂದು ಬೆಳ್ಳಿಯ ಹರಿವಾಣ 130 ಶೆಕೆಲ್ ತೂಕವುಳ್ಳದ್ದಾಗಿತ್ತು; ಒಂದೊಂದು ಬೆಳ್ಳಿಯ ಬಟ್ಟಲು 70 ಶೆಕೆಲ್ ತೂಕವುಳ್ಳದ್ದಾಗಿತ್ತು; ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವಸ್ಥಾನದ ನಾಣ್ಯದ ತೂಕದ ಮೇರೆಗೆ 2400 ಶೆಕೆಲ್ ತೂಕ.
86 : ಧೂಪದ್ರವ್ಯ ತುಂಬಿದ್ದ ಚಿನ್ನದ ಧೂಪಾರತಿಗಳು ಹನ್ನೆರಡು; ದೇವಸ್ಥಾನದ ನಾಣ್ಯದ ತೂಕದ ಪ್ರಕಾರ ಒಂದೊಂದರ ತೂಕ 10 ಶೆಕೆಲ್. ಹೀಗೆ ಸರ್ವೇಶ್ವರಸ್ವಾಮಿ ಆತನೊಡನೆ ಮಾತಾಡಿದರು.

· © 2017 kannadacatholicbible.org Privacy Policy